ಪಂಚ ಪರಿವರ್ತನೆ ಮನೆಯಿಂದ ಆರಂಭವಾಗಬೇಕು: ಲತೇಶ್ ಬಾಕ್ರಬೈಲು

KannadaprabhaNewsNetwork |  
Published : Sep 19, 2026, 02:45 AM IST
ಫೋಟೋ: ೧೭ಪಿಟಿಆರ್-ವಿವೇಕಾನಂದ ೧ವಿವೇಕಾನಂದ ಕಾಲೇಜ್‌ನ ಗಣೇಶೋತ್ಸವದ ಪೂಜಿಸಲ್ಪಟ್ಟ ವಿನಾಯಕಫೋಟೋ: ೧೭ಪಿಟಿಆರ್-ವಿವೇಕಾನಂದ ೨ಗಣೇಶೋತ್ಸವ ಸಭಾ ಕಾರ್ಯಕ್ರಮದಲ್ಲಿ ಭಾರತೀಯ ಸಾಹಿತ್ಯ ಪರಿಷದ್‌ನ ಕಾರ್ಯದರ್ಶಿ ಲತೇಶ್ ಬಾಕ್ರಬೈಲು ಉಪನ್ಯಾಸ ನೀಡಿದರು. | Kannada Prabha

ಸಾರಾಂಶ

ರಾಷ್ಟ್ರೀಯತೆ ಮತ್ತು ಧರ್ಮ ಒಂದೇ ಎಂದು ನಂಬಿದ ಪರಂಪರೆ ಭಾರತದ್ದು. ಇದರಲ್ಲಿ ಪ್ರಮುಖ ಪಾತ್ರ ವಹಿಸಿರುವುದು ಪಂಚ ಪರಿವರ್ತನೆ ಎಂಬ ವಿಷಯ. ಅದು ನಮ್ಮ ಮನೆಗಳಿಂದಲೇ ಆರಂಭವಾದಾಗ ಮಾತ್ರ ಸಮಾಜ ಮತ್ತು ದೇಶ ಬೆಳೆಯಲು ಸಾಧ್ಯ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ನ ಕಾರ್ಯದರ್ಶಿ ಲತೇಶ್ ಬಾಕ್ರಬೈಲು

ಪುತ್ತೂರು: ರಾಷ್ಟ್ರೀಯತೆ ಮತ್ತು ಧರ್ಮ ಒಂದೇ ಎಂದು ನಂಬಿದ ಪರಂಪರೆ ಭಾರತದ್ದು. ಇದರಲ್ಲಿ ಪ್ರಮುಖ ಪಾತ್ರ ವಹಿಸಿರುವುದು ಪಂಚ ಪರಿವರ್ತನೆ ಎಂಬ ವಿಷಯ. ಅದು ನಮ್ಮ ಮನೆಗಳಿಂದಲೇ ಆರಂಭವಾದಾಗ ಮಾತ್ರ ಸಮಾಜ ಮತ್ತು ದೇಶ ಬೆಳೆಯಲು ಸಾಧ್ಯ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ನ ಕಾರ್ಯದರ್ಶಿ ಲತೇಶ್ ಬಾಕ್ರಬೈಲು ಹೇಳಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘ ವತಿಯಿಂದ ೪೫ನೇ ವರ್ಷದ ಗಣೇಶೋತ್ಸವ ಸಂಭ್ರಮದಲ್ಲಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಅವರು ರಾಷ್ಟ್ರೀಯ ಮತ್ತು ಹಿಂದೂ ಧಾರ್ಮಿಕತೆಯ ಕೊರತೆಯನ್ನು ನೀಗಿಸಿ ಧಾರ್ಮಿಕ ಪದ್ಧತಿಗಳನ್ನು ಉಳಿಸಿಕೊಳ್ಳಲು ಚೌತಿ ಆಚರಣೆ ಒಂದು ಉತ್ತಮ ದಾರಿ ಎಂದರು.

ವಿವೇಕಾನಂದ ಪದವಿ ಪತ್ರಿಕೋದ್ಯಮ ವಿಭಾಗದ ಪ್ರಾಯೋಗಿಕ ಪತ್ರಿಕೆ ವಿಕಸನ ಮತ್ತು ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿಕಾಸ ಪ್ರಾಯೋಗಿಕ ಪತ್ರಿಕೆ ಮತ್ತು ವಿನೂತನ ಪಾಕ್ಷಿಕ ಪತ್ರಿಕೆಯ ಗಣೇಶೋತ್ಸವದ ಸಂಚಿಕೆಗಳನ್ನು ಬಿಡುಗಡೆಗೊಳಿಸಲಾಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯ ನಾರಾಯಣ ಕೆ.ಎಂ, ವಿವೇಕಾನಂದ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ, ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್, ವಿವೇಕಾನಂದ ಶ್ರೀ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ, ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಂಗ್ಲ ವಿಭಾಗದ ಉಪನ್ಯಾಸಕ ಪರಮೇಶ್ವರ ಶರ್ಮಾ ಪಿ.ಕೆ ಉಪಸ್ಥಿತರಿದ್ದರು.

ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮನಮೋಹನ ಎಂ. ಸ್ವಾಗತಿಸಿದರು. ವಿದ್ಯಾರ್ಥಿನಿ ದೀಪ್ತಿ ಪ್ರಭು ಪ್ರಾರ್ಥಿಸಿದರು. ವಿವೇಕಾನಂದ ಪದವಿ ಕಾಲೇಜಿನ ಭಾರತೀಯ ಸಂಸ್ಕೃತಿ ಮತ್ತು ಲಲಿತಕಲಾ ಅಧ್ಯಯನ ಕೇಂದ್ರದ ಸಂಯೋಜಕಿ ಹಾಗೂ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ವಿದ್ಯಾ ಎಸ್. ವಂದಿಸಿದರು. ವಿದ್ಯಾರ್ಥಿನಿ ಅವನಿ ಕೆ. ಮತ್ತು ಸುಮನಾ ನಿರೂಪಿಸಿದರು.ವಿವೇಕಾನಂದ ಶಿಕ್ಷಣ ಸಮೂಹದ ವಿವಿಧ ಸಂಸ್ಥೆಗಳಿಂದ ವಿವಿಧ ಸಾಂಸ್ಕೃತಿಕ ಮತ್ತು ಭಜನಾ ಕಾರ್ಯಕ್ರಮಗಳು ನಡೆದವು.

ಬುಧವಾರ ಸಂಜೆ ಗಣಪತಿಯ ಶೋಭಾ ಯಾತ್ರೆಯೂ ನಗರದ ವಿವೇಕಾನಂದ ಕ್ಯಾಂಪಸ್‌ನಿಂದ ಆರಂಭಗೊಂಡು ಬೊಳುವಾರು ಮಾರ್ಗವಾಗಿ ಸಾಗಿ ಹಾರಾಡಿಯಲ್ಲಿ ಗಣೇಶನ ಮೂರ್ತಿಯನ್ನು ವಿಸರ್ಜನೆಗೊಂಡಿತು. ೭೦೦೦ಕ್ಕೂ ಅಧಿಕ ವಿದ್ಯಾರ್ಥಿಗಳು ಭವ್ಯ ಶೋಭಾಯಾತ್ರೆಯಲ್ಲಿ ಪಾಲ್ಗೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೆಗಾಮಾರ್ಟ್ ಕಾಮಗಾರಿ ಶೀಘ್ರ ಪೂರ್ಣ
ಡಿಸಿಸಿ ಬ್ಯಾಂಕಿಗೆ 140 ಹುದ್ದೆಗಳ ನೇಮಕಾತಿಗೆ ಹೊಸ ಪ್ರಸ್ತಾವ