ಅದ್ಧೂರಿಯಾಗಿ ನೆರವೇರಿದ ಪಾಂಚಜನ್ಯ ಗಣೇಶ ಪ್ರತಿಷ್ಠಾಪನೆ

KannadaprabhaNewsNetwork | Published : Sep 9, 2024 1:40 AM

ಸಾರಾಂಶ

ಪಾಂಚಜನ್ಯ ಹಿಂದೂ ಗಣಪತಿ ಸಮಿತಿಯಿಂದ ನಗರದ ಹಾಸನಾಂಬ ಕಲಾಕ್ಷೇತ್ರದ ಆವರಣದಲ್ಲಿ ಶನಿವಾರ ಮಧ್ಯಾಹ್ನದಂದು ಗಣ್ಯರ ಎದುರು ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ ಗಣೇಶ ಪ್ರತಿಷ್ಠಾಪನೆಯು ಅದ್ಧೂರಿಯಾಗಿ ನೆರವೇರಿತು. ಆಲೂರು-ಸಕಲೇಶಪುರ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಮಾಧ್ಯಮದೊಂದಿಗೆ ಮಾತನಾಡಿ, ನಗರದಲ್ಲಿ ಪಾಂಚಜನ್ಯ ವತಿಯಿಂದ ಎಲ್ಲಾ ಸ್ವಯಂ ಸೇವಕರು ಸೇರಿ ವಿಘ್ನೇಶ್ವರನನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು, ನಮ್ಮ ಜಿಲ್ಲೆ ಮತ್ತು ರಾಜ್ಯದ ಜನತೆಗೆ ಆರೋಗ್ಯ, ಆಯಾಸ್ಸು, ಐಶ್ವರ್ಯ ಮತ್ತು ಶಾಂತಿ, ನೆಮ್ಮದಿ ನೀಡಿ ದೇವರು ಕಾಪಾಡಲಿ ಎಂದು ಭಗವಂತನಲ್ಲಿ ಹಾರೈಸುತ್ತೇನೆ ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ಎಲ್ಲರ ಗಮನ ಸೆಳೆದಿರುವ ಪಾಂಚಜನ್ಯ ಹಿಂದೂ ಗಣಪತಿ ಸಮಿತಿಯಿಂದ ನಗರದ ಹಾಸನಾಂಬ ಕಲಾಕ್ಷೇತ್ರದ ಆವರಣದಲ್ಲಿ ಶನಿವಾರ ಮಧ್ಯಾಹ್ನದಂದು ಗಣ್ಯರ ಎದುರು ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ ಗಣೇಶ ಪ್ರತಿಷ್ಠಾಪನೆಯು ಅದ್ಧೂರಿಯಾಗಿ ನೆರವೇರಿತು. ಆಲೂರು-ಸಕಲೇಶಪುರ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಮಾಧ್ಯಮದೊಂದಿಗೆ ಮಾತನಾಡಿ, ನಗರದಲ್ಲಿ ಪಾಂಚಜನ್ಯ ವತಿಯಿಂದ ಎಲ್ಲಾ ಸ್ವಯಂ ಸೇವಕರು ಸೇರಿ ವಿಘ್ನೇಶ್ವರನನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು, ನಮ್ಮ ಜಿಲ್ಲೆ ಮತ್ತು ರಾಜ್ಯದ ಜನತೆಗೆ ಆರೋಗ್ಯ, ಆಯಾಸ್ಸು, ಐಶ್ವರ್ಯ ಮತ್ತು ಶಾಂತಿ, ನೆಮ್ಮದಿ ನೀಡಿ ದೇವರು ಕಾಪಾಡಲಿ ಎಂದು ಭಗವಂತನಲ್ಲಿ ಹಾರೈಸುತ್ತೇನೆ. ಪ್ರತಿ ವರ್ಷವೂ ಕೂಡ ಪಾಂಚಜನ್ಯ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಯಶಸ್ವಿಯಾಗಿ ಕಾರ್ಯಕ್ರಮವನ್ನು ನೆರವೇರಿಸಿಕೊಂಡು ಬರಲಾಗುತ್ತಿದೆ. ಈ ವರ್ಷವೂ ಕೂಡ ಒಳ್ಳೆ ರೀತಿಯಲ್ಲಿ ಪ್ರತಿಷ್ಠಾಪನೆಗೊಂಡಿದೆ. ವಿಸರ್ಜನೆ ವೇಳೆಯೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಯಶಸ್ವಿಗೊಳಿಸಲಿ ಎಂದು ಹಾರೈಸುವುದಾಗಿ ಹೇಳಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಮಾತನಾಡಿ, ಮೊದಲು ಗೌರಿ ಗಣಪತಿ ಹಬ್ಬದ ಶುಭಾಶಯಗಳನು ತಿಳಿಸುತ್ತೇನೆ. ನಾಡಿನಲ್ಲಿ ಉತ್ತಮ ಮಳೆ, ಬೆಳೆ ಆಗಲಿ. ಸಮಾಜದಲ್ಲಿ ಸೌಹಾರ್ದತೆ ಇನ್ನಷ್ಟು ಹೆಚ್ಚಿಸಲಿ. ಬಂಧುಬಾಂಧವರಿಗೆ ಉತ್ತಮ ಆರೋಗ್ಯ ಕಲ್ಪಿಸಿ, ಪಾಂಚಜನ್ಯ ಹಿಂದೂ ಗಣಪತಿ ಸ್ಥಾಪನೆಗೊಂಡಿದ್ದು, ಸೆಪ್ಟಂಬರ್ ೭ರಿಂದ ೧೨ರ ವರೆಗೂ ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸೆಪ್ಟಂಂಬರ್ ೧೨ರಂದು ಬೃಹತ್ ಶೋಭಯಾತ್ರೆಯೊಂದಿಗೆ ದೇವಗೆರೆಯಲ್ಲಿ ವಿಸರ್ಜನೆ ಮಾಡಲಾಗುವುದು. ಇದೊಂದು ಭಾವೈಕ್ಯತೆಯ ಸಂಕೇತವಾಗಿದ್ದು, ನಾಡಿನ ಎಲ್ಲಾ ಜನರು ಒಗ್ಗಟ್ಟಾಗಿ ಬಂದು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಇದೇ ವೇಳೆ ನಗರಸಭೆ ಅಧ್ಯಕ್ಷ ಎಂ. ಚಂದ್ರೇಗೌಡ, ಮಾಜಿ ಅಧ್ಯಕ್ಷ ಆರ್. ಮೋಹನ್, ಸದಸ್ಯ ಶಂಕರ್, ಹುಡಾ ಮಾಜಿ ಅಧ್ಯಕ್ಷ ನವೀಲೆ ಅಣ್ಣಪ್ಪ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಚ್.ಎಲ್. ಮಲ್ಲೇಶ್ ಗೌಡ. ವಕೀಲ ಸಂಘದ ಮಾಜಿ ಅಧ್ಯಕ್ಷ ಶೇಖರ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಅಖಿಲ ಭಾರತ ವೀರಶೈವ ಸಂಘದ ತಾಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್, ಎಂದು ಪಾಂಚಜನ್ಯ ಹಿಂದೂ ಗಣಪತಿ ಸಮಿತಿ ಅಧ್ಯಕ್ಷ ವಾಸು, ಕಾರ್ಯದರ್ಶಿ ವೇಣುಗೋಪಾಲ್, ರವಿಸೋಮು, ಖಜಾಂಚಿ ಲಾವಣ್ಯ, ನಿರ್ದೇಶಕ ಶರತ್, ರಕ್ಷಿತ್ ಶೆಟ್ಟಿ, ಆರ್‌.ಎಸ್.ಎಸ್. ಮುಖಂಡ ಮೋಹನ್, ಶೋಭನ್ ಬಾಬು, ವಿಶಾಲ್ ಅಗರವಾಲ್, ಮೋಹನ್ ಇತರರು ಉಪಸ್ಥಿತರಿದ್ದರು.

Share this article