ಬೆಳಗಾವಿಯಲ್ಲಿ ಲಾಠಿ ಚಾರ್ಜ್‌ ಖಂಡಿಸಿ ಪಂಚಮಸಾಲಿ ಸಮಾಜದಿಂದ ಪ್ರತಿಭಟನೆ

KannadaprabhaNewsNetwork | Published : Dec 19, 2024 12:31 AM

ಸಾರಾಂಶ

ಬೆಳಗಾವಿಯಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದಿಂದ ಮೀಸಲಾತಿಗಾಗಿ ಹಾಗೂ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ನಡೆದದ ಹೋರಾಟದ ಸಂದರ್ಭ ಲಾಠಿ ಚಾರ್ಜ್ ಖಂಡಿಸಿ ನ್ಯಾಮತಿ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದಿಂದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

- ನ್ಯಾಮತಿಯಲ್ಲಿ ತಹಸೀಲ್ದಾರ್‌ ಮುಖೇನ ಸರ್ಕಾರಕ್ಕೆ ಮನವಿ - - - ಕನ್ನಡಪ್ರಭ ವಾರ್ತೆ ನ್ಯಾಮತಿ

ಬೆಳಗಾವಿಯಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದಿಂದ ಮೀಸಲಾತಿಗಾಗಿ ಹಾಗೂ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ನಡೆದದ ಹೋರಾಟದ ಸಂದರ್ಭ ಲಾಠಿ ಚಾರ್ಜ್ ಖಂಡಿಸಿ ನ್ಯಾಮತಿ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದಿಂದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ಸಮಾಜದ ಜಿಲ್ಲಾ ಗೌರವಾಧ್ಯಕ್ಷ ಎನ್‌.ಡಿ.ಪಂಚಾಕ್ಷರಪ್ಪ ಮಾತನಾಡಿ, ಬೆಳಗಾವಿಯಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಶಾಂತಿಯುತ ಪ್ರತಿಭಟನೆ ನಡೆಯುತ್ತಿತ್ತು. ಈ ವೇಳೆ ಹೋರಾಟ ಹತ್ತಿಕ್ಕುವ ಉದ್ದೇಶದಿಂದ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು ಇಡೀ ಸಮಾಜಕ್ಕೆ ಅಪಾರ ನೋವು ತಂದಿದೆ ಎಂದು ಕಿಡಿಕಾರಿದರು.

ತಾಲೂಕು ಅಧ್ಯಕ್ಷ ಚಂದ್ರಶೇಖರ್‌ ಮಾತನಾಡಿ, ಸರ್ಕಾರ ನಮ್ಮ ಸಮಾಜದ ಬೇಡಿಕೆಗೆ ಸ್ಪಂದಿಸದೇ ಅನ್ಯಾಯ ಎಸಗುತ್ತಿದೆ. ಬೆಳಗಾವಿ ಘಟನೆಗೆ ಸಂಬಂಧಿಸಿ ಹೋರಾಟಗಾರರ ವಿರುದ್ಧ ಎಲ್ಲ ಪ್ರಕರಣ ರದ್ದು ಮಾಡಬೇಕು. ಸರ್ಕಾರವೇ ಗಾಯಳುಗಳಿಗೆ ಚಿಕಿತ್ಸೆ ವ್ಯವಸ್ಥೆ ಮಾಡಬೇಕು. ಮುಂದೆ ಇಂತಹ ಘಟನೆ ಎಲ್ಲಿಯೂ ಆಗದಂತೆ ಸರ್ಕಾರ ಜಾಗ್ರತೆ ವಹಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾ ಮೆರವಣಿಗೆಯು ಕಿತ್ತೂರು ಚನ್ನಮ್ಮ ವೃತ್ತದಿಂದ ಆರಂಭವಾಗಿ ನೆಹರೂ ರಸ್ತೆ ಮೂಲಕ ಸಾಗಿ ತಾಲೂಕು ಕಚೇರಿ ತಲುಪಿತು. ಬಳಿಕ ತಹಸೀಲ್ದಾರ್‌ ಎಚ್‌.ಬಿ. ಗೋವಿಂದಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ಮುಖಂಡರಾದ ನುಚ್ಚಿನ ವಾಗೀಶ್‌, ಸಿ.ಕೆ.ರವಿಕುಮಾರ್‌, ಕುರುವ ಬಿ.ವಿ.ಪಾಟೀಲ್‌, ನುಚ್ಚಿನ ಪ್ರಭಾ ಮುರುಗೇಶ್‌, ಹಲಗೇರಿ ವೀರೇಶ್‌, ಸುಧೀರ್‌, ನುಚ್ಚಿನ ನಾಗರತ್ನ ನಾಗರಾಜ್‌ ಮತ್ತಿತರರಿದ್ದರು.

- - - (** ಈ ಫೋಟೋ-ಕ್ಯಾಪ್ಷನ್‌ ಪ್ಯಾನೆಲ್‌ಗೆ ಬಳಸಿ) ಬೆಳಗಾವಿಯಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದಿಂದ ಮೀಸಲಾತಿಗಾಗಿ ಹಾಗೂ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ನಡೆದದ ಹೋರಾಟದ ಸಂದರ್ಭ ಲಾಠಿ ಚಾರ್ಜ್ ಖಂಡಿಸಿ ನ್ಯಾಮತಿ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದಿಂದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

Share this article