ಕನ್ನಡಪ್ರಭ ವಾರ್ತೆ ಬೆಂಗಳೂರು
ಮಂಗಳವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ನಿವಾಸಕ್ಕೆ ಭೇಟಿ ನೀಡಿದ ವಿಶ್ರಾಂತ ನ್ಯಾ.ಎಚ್.ಆರ್.ಬಿನ್ನಿಕಟ್ಟಿ ಅವರು, ಒಂದು ಪೆನ್‌ಡ್ರೈವ್ ಮತ್ತು ವರದಿಯನ್ನು ಮೂರು ಪ್ರತಿಗಳಲ್ಲಿ ಪರಮೇಶ್ವರ್ ಅವರಿಗೆ ಸಲ್ಲಿಸಿದರು. ಈ ವೇಳೆ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಇದ್ದರು.
2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು 2024 ಡಿಸೆಂಬರ್ 10ರಂದು ನಡೆಸಿದ ಹೋರಾಟ ತೀವ್ರ ಸ್ವರೂಪಕ್ಕೆ ತಿರುಗಿದ್ದರಿಂದ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಇದರಿಂದ ಹಲವರಿಗೆ ಗಾಯಗಳಾಗಿದ್ದವು. ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಪ್ರಕರಣ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹ ಕೇಳಿ ಬಂದಿತ್ತು.ಪ್ರಕರಣವು ಹೈಕೋರ್ಟ್ ಮೆಟ್ಟಿಲೇರಿತ್ತು. ನ್ಯಾಯಾಂಗ ತನಿಖೆ ನಡೆಸಿ ವರದಿ ನೀಡುವಂತೆ ಧಾರವಾಡ ಹೈಕೋರ್ಟ್ ಪೀಠ ಆದೇಶ ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಶ್ರಾಂತ ನ್ಯಾ.ಎಚ್.ಆರ್. ಬನ್ನಿಕಟ್ಟಿ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗ ರಚಿಸಿತ್ತು.