ಧರ್ಮಸ್ಥಳ ಪ್ರಕರಣ ಕುರಿತು ಪಂಚಪೀಠಗಳ ಅಸಮಾಧಾನ

KannadaprabhaNewsNetwork |  
Published : Aug 31, 2025, 01:08 AM IST
೩೦ಬಿಹೆಚ್‌ಆರ್ ೧: ಪಂಚಾಪೀಠಾಧೀಶ್ವರರು (ಸಂಗ್ರಹ ಚಿತ್ರ) | Kannada Prabha

ಸಾರಾಂಶ

ಬಾಳೆಹೊನ್ನೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಪಂಚ ಪೀಠಗಳ ಜಗದ್ಗುರುಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಾಳೆಹೊನ್ನೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಪಂಚ ಪೀಠಗಳ ಜಗದ್ಗುರುಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶನಿವಾರ ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಶ್ರೀರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು, ಶ್ರೀ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರು, ಶ್ರೀ ಕೇದಾರ ಭೀಮಾಶಂಕರ ಜಗದ್ಗುರು, ಶ್ರೀಶೈಲ ಡಾ.ಚನ್ನಸಿದ್ಧರಾಮ ಜಗದ್ಗುರು, ಶ್ರೀ ಕಾಶೀ ಡಾ.ಚಂದ್ರಶೇಖರ ಜಗದ್ಗುರು, ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಜಗದ್ಗುರು ಧರ್ಮ ಕ್ಷೇತ್ರಗಳು ತಮ್ಮದೇ ಆದ ಸಂಸ್ಕೃತಿ ಮತ್ತು ಪರಂಪರೆ ಅನುಸರಿಸುತ್ತವೆ. ಅಂತಹ ಧರ್ಮ ಕ್ಷೇತ್ರಗಳಲ್ಲಿ ರಾಜಕೀಯ ಬೆರೆಸುವ ಕೆಲಸ ಯಾರೂ ಮಾಡಬಾರದು. ಅನಾವಶ್ಯಕವಾಗಿ ಧರ್ಮಸ್ಥಳದ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದು, ಭಕ್ತರ ಮತ್ತು ಸಮಾಜದ ಹಾಗೂ ಸರ್ಕಾರದ ದಿಕ್ಕು ತಪ್ಪಿಸುವ ಕೆಲಸ ನಡೆಯುತ್ತಿದೆ. ಸನಾತನ ಧರ್ಮ ತೇಜೋವಧೆಗೆ ಕಾಣದ ಕೈಗಳು ಹುನ್ನಾರ ನಡೆಸಿವೆ. ಸರ್ಕಾರ ರಚನೆ ಮಾಡಿರುವ ವಿಶೇಷ ತನಿಖಾ ಸಂಸ್ಥೆಮೇಲ್ನೋಟಕ್ಕೆ ಆರೋಪಿಗಳಾಗಿರುವವರ ವಿಚಾರಣೆ ನಡೆಸುತ್ತಿದ್ದು, ಈ ಒಟ್ಟಾರೆ ಪ್ರಕರಣದ ಹಿಂದಿನ ಸೂತ್ರಧಾರಿಗಳನ್ನು ಪತ್ತೆಹಚ್ಚಿ ಆದಷ್ಟು ಬೇಗ ಅವರಿಗೆ ಶಿಕ್ಷೆ ನೀಡುವಂತಾಗಬೇಕು ಎಂದು ಆಗ್ರಹಿಸಿದ್ದಾರೆ. ನಾಡಿನಲ್ಲಿರುವ ಅನೇಕ ಮಠ-ಮಂದಿರಗಳು ಧಾರ್ಮಿಕ, ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಪ್ರಾಚೀನ ಕಾಲದಿಂದಲೂ ಕಾರ್ಯ ನಿರ್ವಹಿಸಿಕೊಂಡು ಬಂದಿವೆ. ಅಂತೆಯೇ ಧರ್ಮಸ್ಥಳ ಕ್ಷೇತ್ರ ಶತಮಾನಗಳ ಇತಿಹಾಸ ಹೊಂದಿದ್ದು ನಾಡಿಗೆ ವಿಶೇಷ ಕೊಡುಗೆ ನೀಡಿದೆ. ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಕಳೆದ 50 ವರ್ಷಗಳಿಂದ ಧರ್ಮ ಸಂಸ್ಕೃತಿ ಪುನರುತ್ಥಾನಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ. ಇಂತಹ ಕ್ಷೇತ್ರದ ಮೇಲೆ ಬಂದಿರುವ ಆರೋಪಗಳು ಮುಕ್ತವಾಗಿ ಆದಷ್ಟು ಬೇಗ ಮೊದಲಿನಂತೆ ಎಲ್ಲ ಸಾಮಾಜಿಕ ಕಾರ್ಯ ಗಳು ಮುಂದುವರಿಯುವಂತಾಗಲಿ ಎಂದು ಹಾರೈಸಿರುವ ಜಗದ್ಗುರು ಪಂಚಪೀಠಾಧೀಶ್ವರ ಹಿಂದೂ ಸಂಸ್ಕೃತಿ ಬಗ್ಗೆ ಇತ್ತೀಚಿಗೆ ಕೆಲವು ನಾಸ್ತಿಕರು ಅಲ್ಲಲ್ಲಿ ವಾತಾವರಣ ಕಲುಷಿತಗೊಳಿಸುವ ಕೆಲಸ ಮಾಡುತ್ತಿ ದ್ದಾರೆ ಅಂತವರನ್ನು ಗುರುತಿಸಿ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಇದೇ ವೇಳೆ ಆಗ್ರಹಿಸಿದ್ದಾರೆ.೩೦ಬಿಹೆಚ್‌ಆರ್ ೧: ಪಂಚಾಪೀಠಾಧೀಶ್ವರರು (ಸಂಗ್ರಹ ಚಿತ್ರ)

PREV

Recommended Stories

ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?