ಪಾಂಡವಪುರ: ವಿವಿಧ ಹಳ್ಳಿಗಳಲ್ಲಿ ಬಿಜೆಪಿ ಬೆಂಬಲಿತರಿಂದ ಪ್ರಚಾರ

KannadaprabhaNewsNetwork |  
Published : Sep 28, 2025, 02:00 AM IST
27ಕೆಎಂಎನ್ ಡಿ17 | Kannada Prabha

ಸಾರಾಂಶ

ಚಿಕ್ಕಮರಳಿ, ಪಟ್ಟಸೋಮನಹಳ್ಳಿ, ನುಗ್ಗಹಳ್ಳಿ, ಕನಗನಮರಡಿ, ತಾಳಶಾಸನ, ತಿಮ್ಮನಕೊಪ್ಪಲು, ಚಿಕ್ಕಬ್ಯಾಡರಹಳ್ಳಿ, ತಾಳಶಾಸನ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬಿಜೆಪಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಂಗಳನವೀನ್ ಕುಮಾರ್, ತಾಲೂಕು ಅಧ್ಯಕ್ಚ ಧನಂಜಯ್ ನೇತೃತ್ವದಲ್ಲಿ ಪ್ರಚಾರ ನಡೆಸಿ ಮತಯಾಚಿಸಿದರು.

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ಟಿಎಪಿಸಿಎಂಎಸ್ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಕಸಬಾ ಹೋಬಳಿಯ ವಿವಿಧ ಹಳ್ಳಿಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.

ಚಿಕ್ಕಮರಳಿ, ಪಟ್ಟಸೋಮನಹಳ್ಳಿ, ನುಗ್ಗಹಳ್ಳಿ, ಕನಗನಮರಡಿ, ತಾಳಶಾಸನ, ತಿಮ್ಮನಕೊಪ್ಪಲು, ಚಿಕ್ಕಬ್ಯಾಡರಹಳ್ಳಿ, ತಾಳಶಾಸನ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬಿಜೆಪಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಂಗಳನವೀನ್ ಕುಮಾರ್, ತಾಲೂಕು ಅಧ್ಯಕ್ಚ ಧನಂಜಯ್ ನೇತೃತ್ವದಲ್ಲಿ ಪ್ರಚಾರ ನಡೆಸಿ ಮತಯಾಚಿಸಿದರು.

ಅಭ್ಯರ್ಥಿ ಎನ್.ಸೋಮಶೇಖರ್ ಮಾತನಾಡಿ, ಪಿಎಸ್‌ಎಸ್‌ಕೆ ಸಂಸ್ಥಾಪಕ ಹಾಗೂ ಸ್ವಾತಂತ್ರ್ಯ ಹೋರಾಟಗಾರ ವೈ.ಸಿ.ಮರಿಯಪ್ಪನವರ ಕುಟುಂಬದ ಕುಡಿಯಾಗಿ ಟಿಎಪಿಸಿಎಂಎಸ್ ನಿರ್ದೇಶಕ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ. ನನ್ನೊಂದಿಗೆ ಇನ್ನೂ 6ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಸಂಘದಲ್ಲಿ ನಡೆದಿರುವ ಭ್ರಷ್ಟಾಚಾರ, ದುರಾಡಳಿಯವನ್ನು ಕೊನೆಗಾಣಿಸಲುಮತದಾರರು ಬೆಂಬಲ ನೀಡಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದರು.

ಈ ವೇಳೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಂಗಳನವೀನ್ ಕುಮಾರ್, ತಾಲೂಕು ಅಧ್ಯಕ್ಷ ಧನಂಜಯ್, ಜೆ.ಶಿವಲಿಂಗೇಗೌಡ, ಪುರಸಭೆ ಉಪಾಧ್ಯಕ್ಷ ಅಶೋಕ್, ಅಭ್ಯರ್ಥಿಗಳಾದ ಎಸ್.ಎಲ್.ಮಂಜುನಾಥ್, ಚಿಕ್ಕಣ್ಣ, ಕೆ.ಜೆ.ದುರ್ಗೇಶ್, ಲಕ್ಷ್ಮಮ್ಮ, ಎಚ್.ಎಸ್.ಲಲಿತಾ, ವೀರಭದ್ರಸ್ವಾಮಿ, ಎನ್.ಸೋಮಶೇಖರ್, ಮುಖಂಡರಾದ ಚಿಕ್ಕಮರಳಿ ನವೀನ್, ಕೆ.ಎಲ್. ಆನಂದ್, ಸೋಮಾಚಾರಿ, ಜೀವನ್, ಮಂಜಾಚಾರಿ, ಚನ್ನೇಗೌಡ, ಪ್ರವೀಣ್ ಸೇರಿದಂತೆ ಹಲವರು ಹಾಜರಿದ್ದರು.

ಹಿಂದಿ ಹೇರಿಕೆ ನೀತಿ ವಿರೋಧಿಸಿ ಕರವೇ ಪ್ರತಿಭಟನೆ

ಕನ್ನಡಪ್ರಭ ವಾರ್ತೆ ಮಳವಳ್ಳಿ

ಕೇಂದ್ರ ಸರ್ಕಾರದ ಬಲವಂತದ ಹಿಂದಿ ಹೇರಿಕೆ ನೀತಿ ವಿರೋಧಿಸಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಬಂಧನ ಖಂಡಿಸಿ ಪಟ್ಟಣದ ಅನಂತ್ ರಾಂ ವೃತ್ತ ಬಳಿ ಶನಿವಾರ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿ ತಾಲೂಕು ಘಟಕದ ಅಧ್ಯಕ್ಷ ಅಪ್ಪೇಗೌಡ ಮಾತನಾಡಿ, ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ನೀತಿಯನ್ನು ಕರವೇ ಹಲವು ವರ್ಷಗಳಿಂದಲೂ ವಿರೋಧಿಸುತ್ತಿದೆ. ಬೆಂಗಳೂರು ಸೇರಿದಂತೆ ಮಹಾ ನಗರಗಳಲ್ಲಿ ಹಿಂದಿಗರ ಹಾವಳಿಯಿಂದ ಕನ್ನಡಿಗರು ನಿರುದ್ಯೋಗಿಗಳಾಗುತ್ತಿದ್ದಾರೆ ಎಂದು ಕಿಡಿಕಾರಿದರು.

ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಉತ್ತರ ಭಾರತದ ಸಂಸದರಿಂದ ನಡೆಯುತ್ತಿದ್ದ ಹಿಂದಿ ಹೇರಿಕೆ ಸಭೆ ವೇಳೆ ಮುತ್ತಿಗೆ ಹಾಕಿದ್ದ ಕರವೇ ಕಾರ್ಯಕರ್ತರನ್ನು ಬಂಧಿಸಿದ ರಾಜ್ಯ ಸರ್ಕಾರ ಹಾಗೂ ಪೊಲೀಸರ ಕ್ರಮ ಸರಿಯಲ್ಲ. ಕೂಡಲೇ ಬಂಧಿತ ಕಾರ್ಯಕರ್ತರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರ ಬಲವಂತವಾಗಿ ಜನರ ಮೇಲೆ ಹಿಂದಿ ಹೇರಿಕೆ ಮಾಡಲು ಮುಂದಾಗಿದೆ. ಇದನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ವಿಜಯಾ, ಮುಖಂಡರಾದ ಮಲ್ಲಿಕಾರ್ಜುನ, ಚೆನ್ನೇಗೌಡ, ಲಿಂಗಾಚಾರಿ, ಮಹೇಶ, ನಾಗರಾಜು ಭಾಗಿಯಾಗಿದ್ದರು.

PREV

Recommended Stories

ಅ.4ರಿಂದ ಅಂತಾರಾಜ್ಯ ವಿವಿ ಕಬಡ್ಡಿ ಕ್ರೀಡಾಕೂಟ
ಜಾನಪದ ಕಲೆ ಉಳಿಸಲು ಸಂಘಟನೆಗಳ ಪಾತ್ರ ಪ್ರಮುಖ: ಎಂ.ಎಂ. ವಿರಕ್ತಮಠ