ಬೀದರ್: ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಪಂಡಿತ ಬಸವರಾಜ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಜಗನ್ನಾಥ ಕಮಲಾಪುರೆ ತಿಳಿಸಿದ್ದಾರೆ.
ಪಂಡಿತ ಬಸವರಾಜ ಅವರು ಬೀದರ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತಾಲೂಕು ಅಧ್ಯಕ್ಷರಾದ ಎಂ.ಎಸ್.ಮನೋಹರ, ಜಿಲ್ಲಾ ಅಧ್ಯಕ್ಷ ಸುರೇಶ ಚನ್ನಶೆಟ್ಟಿ, ಜಿಲ್ಲಾ ಕೋಶಾಧ್ಯಕ್ಷ ಶಿವಶಂಕರ ಟೋಕರೆ, ಜಿಲ್ಲಾ ಗೌರವ ಕಾರ್ಯದರ್ಶಿ ಶಿವಕುಮಾರ ಕಟ್ಟೆ ನೇತೃತ್ವದಲ್ಲಿ ತಾಲೂಕು ಕೋಶಾಧ್ಯಕ್ಷ ಅಶೋಕ ದಿಡಗೆ, ಉಪಾಧ್ಯಕ್ಷ ಸಿದ್ಧಾರೂಢ ಭಾಲ್ಕೆ ಅವರು ಪಂಡಿತ ಬಸವರಾಜ ಅವರ ಮನೆಗೆ ಹೋಗಿ ಅವರನ್ನು ಗೌರವಿಸಿ ಅಭಿನಂದಿಸಿದರು.
ಸಭೆಯಲ್ಲಿ ತಾಲೂಕು ಗೌರವ ಕಾರ್ಯದರ್ಶಿ ಶಿವಕುಮಾರ ಚೆನ್ನಶೆಟ್ಟಿ, ಗೌರವ ಕೋಶಾಧ್ಯಕ್ಷ ಅಶೋಕ ದಿಡಗೆ, ತಾಲೂಕು ಉಪಾಧ್ಯಕ್ಷ ಸಿದ್ಧಾರೂಢ ಭಾಲ್ಕೆ, ಮಹಿಳಾ ಘಟಕದ ಅಧ್ಯಕ್ಷೆ ರೂಪಾ ಪಾಟೀಲ, ವಿದ್ಯಾವತಿ ಬಲ್ಲೂರು, ಕಾರ್ಯಕಾರಿ ಮಂಡಳಿ ಸದಸ್ಯ ಚಂದ್ರಕಾಂತ ಪಾಟೀಲ ಚಿಮಕೋಡ್, ಗಣಪತಿ ಭಕ್ತಾ, ಶ್ರೀದೇವಿ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.