ಪಂಡಿತ್ ದೀನದಯಾಳ್ ಉಪಾಧ್ಯಾಯ ತತ್ವಾದರ್ಶಗಳು ಸದಾ ಪ್ರೇರಣಾದಾಯಕ: ದಿನಕರ ಶೆಟ್ಟಿ

KannadaprabhaNewsNetwork |  
Published : Sep 27, 2024, 01:20 AM IST
ದೀನ25 | Kannada Prabha

ಸಾರಾಂಶ

ಭಾರತೀಯ ಜನಸಂಘದ ಸಂಸ್ಥಾಪಕರೊಲ್ಲಬ್ಬರಾದ ಪಂಡಿತ್‌ ದೀನ್‌ದಯಾಳ್‌ ಉಪಾಧ್ಯಾಯ ಅವರ ತತ್ವ ಸಿದ್ದಾಂತ ಜೀವನಾದರ್ಶ ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಹೇಳಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಭಾರತೀಯ ಜನಸಂಘದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ತತ್ವ ಸಿದ್ಧಾಂತ, ಜೀವನಾದರ್ಶಗಳು ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಹೇಳಿದರು.

ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು.

ತನ್ನ ಇಡೀ ಬದುಕನ್ನು ದೇಶಕ್ಕಾಗಿ ಮುಡಿಪಾಗಿಟ್ಟು ಉದಾತ್ತ ಸಿದ್ದಾಂತ ಹಾಗೂ ಅಂತ್ಯೋದಯ ಪರಿಕಲ್ಪನೆಯನ್ನು ನಾಡಿಗೆ ನೀಡಿದ ಏಕಾತ್ಮ ಮಾನವತಾವಾದದ ಪ್ರತಿಪಾದಕ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ದೇಶಪ್ರೇಮ, ತ್ಯಾಗ, ಬಲಿದಾನ ಸದಾ ಸ್ಮರಣೀಯ ಎಂದು ಅವರು ತಿಳಿಸಿದರು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರೊಂದಿಗೆ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಬಿಜೆಪಿ ಮುಖಂಡರಾದ ಶ್ರೀಶ ನಾಯಕ್ ಪೆರ್ಣಂಕಿಲ, ರೇಷ್ಮಾ ಉದಯ ಶೆಟ್ಟಿ, ಶಿಲ್ಪಾ ಜಿ. ಸುವರ್ಣ, ಸತ್ಯಾನಂದ ನಾಯಕ್, ರಾಘವೇಂದ್ರ ಕುಂದರ್, ಶಿವಕುಮಾರ್ ಅಂಬಲಪಾಡಿ, ಶ್ರೀನಿಧಿ ಹೆಗ್ಡೆ, ಗಿರೀಶ್ ಅಂಚನ್, ದಿನೇಶ್ ಅಮೀನ್, ರವಿ ಅಮೀನ್, ಸಂಧ್ಯಾ ರಮೇಶ್, ಶ್ಯಾಮಲಾ ಎಸ್. ಕುಂದರ್, ವೀಣಾ ಎಸ್. ಶೆಟ್ಟಿ, ರಾಘವೇಂದ್ರ ಉಪ್ಪೂರು, ರಶ್ಮಿತಾ ಬಿ. ಶೆಟ್ಟಿ, ನೀತಾ ಪ್ರಭು, ಶ್ರೀಕಾಂತ್ ಕಾಮತ್, ದಿವಾಕರ್ ಶೆಟ್ಟಿ, ದಿಲ್ಲೇಶ್ ಶೆಟ್ಟಿ, ಸುಮಿತ್ರಾ ಆರ್. ನಾಯಕ್, ಪೂರ್ಣಿಮಾ ಶೆಟ್ಟಿ, ಮಾಯಾ ಕಾಮತ್, ಪ್ರಿಯಾ ನಾಯಕ್, ಆಶಲತಾ ಹೆಗ್ಡೆ, ಕಿಶೋರ್ ಕರಂಬಳ್ಳಿ, ಚಂದ್ರಶೇಖರ್ ಪ್ರಭು, ಶ್ರೀವತ್ಸ, ಶಾಂತಿ ಮನೋಜ್, ಸುಧಾ ಪೈ, ದೀಪಾ ಪೈ, ಗುರುಪ್ರಸಾದ್, ಶಿವಾನಂದ, ಸಂತೋಷ್ ಆಚಾರ್ಯ, ವಿಜಯ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

PREV

Recommended Stories

ದೇಶದ ನಾಯಕರಾಗಲು ಶಾಲೆಯಲ್ಲಿ ನಾಯಕತ್ವ ವಹಿಸಿಕೊಳ್ಳಿ
ಪರಿಷ್ಕೃತ ಜಿಎಸ್‌ಟಿ ಬಡ ಜನತೆಗೆ ಅನುಕೂಲ