ಪಂಡಿತ್ ಜೀ ಜೀವನಾದರ್ಶ ಕಾರ್ಯಕರ್ತರಿಗೆ ಪ್ರೇರಣಾದಾಕ: ಕಿಶೋರ್ ಕುಮಾರ್ ಕುಂದಾಪುರ

KannadaprabhaNewsNetwork |  
Published : Feb 12, 2025, 12:31 AM IST
11ಪಂಡಿತ್‌ | Kannada Prabha

ಸಾರಾಂಶ

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸಮರ್ಪಣಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ನಿಧಿ ಸಮರ್ಪಿಸಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರು ಬಿಜೆಪಿಗೆ ಬಹುದೊಡ್ಡ ಆದರ್ಶವಾಗಿದ್ದಾರೆ. ಪಕ್ಷದ ಸಂಘಟನೆಗೆ ಭದ್ರ ಬುನಾದಿಯನ್ನು ಹಾಕಿದ ಅವರ ಸೇವೆ ಅನನ್ಯ. ಪಂಡಿತ್ ಜೀ ಅವರ ಬಲಿದಾನ ದಿನದಂದು ಅವರ ಉದಾತ್ತ ತತ್ವ ಸಿದ್ಧಾಂತಗಳನ್ನು ನೆನಪಿಸಿಕೊಂಡು ಅವರನ್ನು ಸ್ಮರಿಸುವುದು ಪಕ್ಷದ ಕಾರ್ಯಕರ್ತರ ಆದ್ಯ ಕರ್ತವ್ಯ. ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜೀವನಾದರ್ಶ, ಜೀವನ ಸ್ಫೂರ್ತಿ ಎಲ್ಲರಿಗೂ ಪ್ರೇರಣಾದಾಯಕವಾಗಲಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸಮರ್ಪಣಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ನಿಧಿ ಸಮರ್ಪಿಸಿ ಮಾತನಾಡಿದರು.

ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಜನ ಸಂಘದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಸಾರ್ಥಕ ಬದುಕಿನ ವಿವಿಧ ಅವಿಸ್ಮರಣೀಯ ಘಟನೆಗಳನ್ನು ವಿಶ್ಲೇಷಿಸಿ ಅವರ ತತ್ವಾದರ್ಶಗಳು ಮತ್ತು ತ್ಯಾಗ, ಬಲಿದಾನದ ವಿಸ್ತ್ರತ ಮಾಹಿತಿಯನ್ನು ನೀಡಿ ಉಪನ್ಯಾಸವನ್ನು ನಡೆಸಿಕೊಟ್ಟರು.

ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಪಕ್ಷದ ಪ್ರಮುಖರಾದ ರವಿ ಅಮೀನ್, ಮೋಹನ ಉಪಾಧ್ಯಾಯ, ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ರಾಘವೇಂದ್ರ ಕುಂದರ್, ವಿಜಯಕುಮಾರ್ ಉದ್ಯಾವರ, ಶ್ರೀನಿಧಿ ಹೆಗ್ಡೆ, ದಿನೇಶ್ ಅಮೀನ್, ಜಗದೀಶ್ ಆಚಾರ್ಯ, ಶ್ಯಾಮಲಾ ಎಸ್. ಕುಂದರ್, ಪ್ರಿಯದರ್ಶಿನಿ ದೇವಾಡಿಗ, ಸುಮಿತ್ರಾ ಆರ್. ನಾಯಕ್, ವೀಣಾ ಎಸ್. ಶೆಟ್ಟಿ, ನಳಿನಿ ಪ್ರದೀಪ್ ರಾವ್, ದೇವೇಂದ್ರ ಪ್ರಭು, ಮಧುಕರ ಮುದ್ರಾಡಿ, ಮಂಜುನಾಥ್ ಮಣಿಪಾಲ, ರಶ್ಮಿತಾ ಬಿ. ಶೆಟ್ಟಿ, ರಾಜೇಂದ್ರ ಪಂದುಬೆಟ್ಟು, ಶಿವರಾಮ್ ಕಾಡಿಮಾರ್ ಮುಂತಾದವರು ಇದ್ದರು.

PREV

Recommended Stories

3ನೇ ಮಹಡಿಯಿಂದ ಆಯತಪ್ಪಿಬಿದ್ದು ಪಿಯು ವಿದ್ಯಾರ್ಥಿನಿ ಸಾವು
ಜೈಲೊಳಗೆ ಡ್ರಗ್ಸ್ ಸಾಗಿಸಲುಯತ್ನ: ವಾರ್ಡನ್ ಬಂಧನ