ಪಾಣೆಮಂಗಳೂರು ಅಂಡರ್ ಪಾಸ್ ತಾತ್ಕಾಲಿಕ ವಾಹನ ಸಂಚಾರ: ಅಪಾಯ ಖಚಿತ

KannadaprabhaNewsNetwork |  
Published : May 13, 2024, 12:03 AM IST
ಪಾಣೆಮಂಗಳೂರು ಅಂಡರ್ ಪಾಸ್ ನ ಮೇಲೆ ತಾತ್ಕಾಲಿಕ ವಾಹನ ಸಂಚಾರ :  ಅಪಾಯ ಕಟ್ಟಿಟ್ಟ ಬುತ್ತಿ | Kannada Prabha

ಸಾರಾಂಶ

ರಾಷ್ಟ್ರೀಯ ಹೆದ್ದಾರಿ ಮಂಗಳೂರು – ಬೆಂಗಳೂರು ಮಧ್ಯೆ ನೂತನವಾಗಿ ನಿರ್ಮಾಣವಾಗುತ್ತಿರುವ ಪಾಣೆಮಂಗಳೂರು ಅಂಡರ್ ಪಾಸ್ ನ ಮೇಲೆ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಸೂಕ್ತ ಭದ್ರತಾ ವ್ಯವಸ್ಥೆ ಇಲ್ಲದೆ ಈ ಭಾಗದಲ್ಲಿ ವಾಹನ ಸಂಚಾರ ಅತ್ಯಂತ ಅಪಾಯಕಾರಿಯಾಗಿದ್ದು, ಸಂಬಂಧಿಸಿದವರು ಗಮನ ಹರಿಸಬೇಕಿದೆ.

ಕನ್ನಡಪ್ರಭ ವಾರ್ತೆ ಬಂಟ್ವಾಳ

ರಾಷ್ಟ್ರೀಯ ಹೆದ್ದಾರಿ ಮಂಗಳೂರು – ಬೆಂಗಳೂರು ಮಧ್ಯೆ ನೂತನವಾಗಿ ನಿರ್ಮಾಣವಾಗುತ್ತಿರುವ ಪಾಣೆಮಂಗಳೂರು ಅಂಡರ್ ಪಾಸ್ ನ ಮೇಲೆ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಎಚ್ಚರಿಕೆಯ ಪ್ರಯಾಣ ಅನಿವಾರ್ಯವಾಗಿದೆ.

ಬಿಸಿರೋಡಿನಿಂದ ಅಡ್ಡಹೊಳೆವರೆಗೆ ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಈ ನಡುವೆ ಹೆದ್ದಾರಿಯ ಪಾಣೆಮಂಗಳೂರು ಮೆಲ್ಕಾರ್,ಮಾಣಿ ,ಬುಡೋಳಿ ಸಮೀಪದ ಸತ್ತಿಕಲ್ಲು ಹಾಗೂ ಉಪ್ಪಿನಂಗಡಿಯಲ್ಲಿ ಅಂಡರ್ ಪಾಸ್ ಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಕಲ್ಲಡ್ಕ ಒಂದು ಕಡೆಯಲ್ಲಿ ಪ್ಲೈ ಓವರ್ ನಿರ್ಮಾಣದ ಕಾಮಗಾರಿ ಭರದಿಂದ ಸಾಗುತ್ತಿದೆ. ಇದರ ಮಧ್ಯೆ ಇನ್ನೇನು ಕೆಲವು ದಿನಗಳಲ್ಲಿ ಮಳೆಗಾಲ ಆರಂಭವಾಗುತ್ತದೆ.ಇದಕ್ಕೆ ಮೊದಲು ಅಂಡರ್ ಪಾಸ್ ಹಾಗೂ ಪ್ಲೈ ಓವರ್ ಪಕ್ಕದಲ್ಲಿ ಜನರ ಸಂಚಾರಕ್ಕೆ ಒದಗಿಸಲಾದ ಸರ್ವೀಸ್ ರಸ್ತೆಯನ್ನು ದುರಸ್ತಿ ಮಾಡಬೇಕಾದ ಅನಿವಾರ್ಯತೆ ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪೆನಿ ಮೇಲಿದೆ. ಸರ್ವೀಸ್ ರಸ್ತೆಯ ದುರಸ್ತಿ ಮಾಡಿಕೊಡಿ ಎಂದು ವರ್ತಕರು‌ ಅನೇಕ ಬಾರಿ ರೋಡಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ಕಲ್ಲಡ್ಕದಲ್ಲಿ ಹದಗೆಟ್ಟ ಸರ್ವೀಸ್ ರಸ್ತೆಯನ್ನು ರಿಪೇರಿಮಾಡಿ ಸಂಚಾರಕ್ಕೆ ಅನುಕೂಲ ಮಾಡಿಕೊಡಿ, ದೂಳು ಕೆಸರಿನ ಸಮಸ್ಯೆಯಿಂದ ನಮಗೆ ಮುಕ್ತಿ ನೀಡಿ ಎಂದು ಒತ್ತಾಯ ಮಾಡಿದ್ದರು. ಕನ್ನಡ ಪ್ರಭ ಪತ್ರಿಕೆಯಲ್ಲಿ ಈ ಕುರಿತಾಗಿ ವಿಶೇಷ ವರದಿ ಪ್ರಕಟವಾಗಿತ್ತು

.ಇದೀಗ ಕಂಪೆನಿ ಸರ್ವಿಸ್ ರಸ್ತೆ ಕಾಮಗಾರಿಯನ್ನು ತೀವ್ರಗೊಳಿಸಿದ್ದು ವಿಧಿಯಿಲ್ಲದೆ, ಅಪಾಯಕಾರಿ ಸನ್ನಿವೇಶದಲ್ಲಿ ಅನಿವಾರ್ಯವಾಗಿ ಪಾಣೆಮಂಗಳೂರು ಅಂಡರ್ ಪಾಸ್ ನ ಮೇಲೆ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಿದ್ದಾರೆ.

ಬಿಸಿರೋಡಿನಿಂದ ಮೆಲ್ಕಾರ್ ಕಡೆಗೆ ವಾಹನಗಳು ಅಂಡರ್ ಪಾಸ್ ಮೇಲೆ ಸಂಚಾರ ಮಾಡುತ್ತಿದೆ. ಇಲ್ಲಿನ ಸರ್ವೀಸ್ ರಸ್ತೆಯ ಕಾಮಗಾರಿಯನ್ನು ನಡೆಸಲು ಈ‌ ಕ್ರಮ ಕೈಗೊಳ್ಳಲಾಗಿದೆ ಎಂದು ಕಂಪೆನಿಯವರು ತಿಳಿಸಿದ್ದಾರೆ.

ಆದರೆ ಅತ್ಯಂತ ಡೇಂಜರ್ ಝೋನ್ ಇದಾಗಿದ್ದು,ಸ್ವಲ್ಪ ಎಚ್ಚರ ತಪ್ಪಿದರೂ ವಾಹನಗಳು ಆಳೆತ್ತರದ ಗುಂಡಿಗೆ ಬೀಳಬಹುದು. ಅಪಾಯವಂತೂ ಕಟ್ಟಿಟ್ಟ ಬುತ್ತಿಯಾಗಿದ್ದು, ಜಾಗರೂಕತೆಯಿಂದ ಸಂಚಾರ ಅಗತ್ಯವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಿಥಿ ಚಿತ್ರದ ನಟ ‘ಸೆಂಚುರಿ’ಗೌಡ ಸೊಂಟದ ಮೂಳೆ ಮುರಿದು ನಿಧನ
ರಾಜ್ಯ ರಾಜಕಾರಣದಲ್ಲಿ ನನ್ನ ಕ್ಷೇತ್ರ ಚಾಮರಾಜನಗರ : ಪ್ರತಾಪ್‌ ಸಿಂಹ