ವೀರತಿಪ್ಪಯ್ಯಸ್ವಾಮಿ ಜಾತ್ರೆಯಲ್ಲಿ ಅಲಂಕಾರಿಕ ನೀರು ಬಂಡಿಗಳ ಮೆರವಣಿಗೆ

KannadaprabhaNewsNetwork |  
Published : Mar 23, 2026, 01:30 AM IST
ನೀರು ಬಂಡಿ ಉತ್ಸವದಲ್ಲಿ ಪಾಲ್ಗೊಂಡ ದೊಡ್ಡಬಳ್ಳಾಪುರ ತಾಲೂಕಿನ ನಾಯಕರಂಡಳ್ಳಿಯ ನೀರು ಬಂಡಿಗಳು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ತೂಬಗೆರೆ ಹೋಬಳಿಯ ಕೆಳಗಿನ ಜೂಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಪೂಜಾರಹಳ್ಳಿ ಗ್ರಾಮದಲ್ಲಿ ಯುಗಾದಿ ಹಬ್ಬದ ನಂತರದ ದಿನ ಸಂಪ್ರದಾಯಬದ್ಧವಾಗಿ ನಡೆಯುವ ಶ್ರೀ ವೀರತಿಪ್ಪಯ್ಯಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಅಲಂಕಾರಿಕ ನೀರು ಬಂಡಿಗಳ ಮೆರವಣಿಗೆಯೊಂದಿಗೆ ಭಾಗವಹಿಸಿದ್ದರು

ದೊಡ್ಡಬಳ್ಳಾಪುರ: ತೂಬಗೆರೆ ಹೋಬಳಿಯ ಕೆಳಗಿನ ಜೂಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಪೂಜಾರಹಳ್ಳಿ ಗ್ರಾಮದಲ್ಲಿ ಯುಗಾದಿ ಹಬ್ಬದ ನಂತರದ ದಿನ ಸಂಪ್ರದಾಯಬದ್ಧವಾಗಿ ನಡೆಯುವ ಶ್ರೀ ವೀರತಿಪ್ಪಯ್ಯಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಅಲಂಕಾರಿಕ ನೀರು ಬಂಡಿಗಳ ಮೆರವಣಿಗೆಯೊಂದಿಗೆ ಭಾಗವಹಿಸಿದ್ದರು.

ಜಾತ್ರೆಯ ಪ್ರಮುಖ ಆಕರ್ಷಣೆಯಾಗಿ ಸಿಂಗರಿಸಲ್ಪಟ್ಟ ನೀರುಬಂಡಿಗಳ ಮೆರವಣಿಗೆ ಎಲ್ಲರ ಕಣ್ಮನ ಸೆಳೆದಿತು. ಘಾಟಿ ಸುಬ್ರಹ್ಮಣ್ಯ ಸುತ್ತಮುತ್ತಲಿನ ಗ್ರಾಮಗಳ ರೈತರು ತಮ್ಮ ದನಗಳನ್ನು ಅಲಂಕರಿಸಿ, ನೀರುಬಂಡಿಗಳನ್ನು ಕಟ್ಟಿಕೊಂಡು ಭಕ್ತಿಭಾವದಿಂದ ಮೆರವಣಿಗೆ ನಡೆಸಿದ ದೃಶ್ಯ ಗಮನಾರ್ಹವಾಗಿತ್ತು.

ಬಣ್ಣಬಣ್ಣದ ಅಲಂಕಾರಗಳಿಂದ ಸಜ್ಜುಗೊಂಡ ಎತ್ತುಗಳು, ಕಳಶಗಳು ಮತ್ತು ಸಂಪ್ರದಾಯಬದ್ಧ ನೀರುಬಂಡಿಗಳು ಜಾತ್ರೆಯ ಸೊಬಗನ್ನು ಹೆಚ್ಚಿಸಿತು. ಗ್ರಾಮೀಣ ಸಂಸ್ಕೃತಿ, ಪರಂಪರೆ ಮತ್ತು ರೈತರ ಜೀವನಶೈಲಿಯನ್ನು ಪ್ರತಿಬಿಂಬಿಸಿದ ಈ ಮೆರವಣಿಗೆಗೆ ಸಾವಿರಾರು ಜನ ಸಾಕ್ಷಿಯಾದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಧ ಮಂಜುನಾಥ್, ಮುಖಂಡರಾದ ಕುಮಾರ್, ಯುವ ಮುಖಂಡ ಉದಯ ಆರಾಧ್ಯ ಹಾಗೂ ಸುತ್ತಮುತ್ತಲಿನ ರೈತರು ಜಾತ್ರೆಯಲ್ಲಿ ಭಾಗವಹಿಸಿ ಭಕ್ತರೊಂದಿಗೆ ಬೆರೆತು ಹಬ್ಬದ ಉತ್ಸಾಹ ಹಂಚಿಕೊಂಡರು.

ಮಜ್ಜಿಗೆ ಮತ್ತು ಪಾನಕ ವಿತರಣೆ, ಭಕ್ತರ ಸಂಭ್ರಮ ಹಾಗೂ ಅಪಾರ ಭಕ್ತ ಸಮೂಹ ಸೇರಿ ಜಾತ್ರೆಗೆ ವಿಶೇಷ ಮೆರುಗು ತಂದವು. ಇಂತಹ ಸಾಂಪ್ರದಾಯಿಕ ಉತ್ಸವಗಳು ಸಮಾಜದಲ್ಲಿ ಒಗ್ಗಟ್ಟು ಮತ್ತು ಸಂಸ್ಕೃತಿ ಮೌಲ್ಯಗಳನ್ನು ಬಲಪಡಿಸುತ್ತವೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.

22ಕೆಡಿಬಿಪಿ1- ನೀರು ಬಂಡಿ ಉತ್ಸವದಲ್ಲಿ ಪಾಲ್ಗೊಂಡ ದೊಡ್ಡಬಳ್ಳಾಪುರ ತಾಲೂಕಿನ ನಾಯಕರಂಡಳ್ಳಿಯ ನೀರು ಬಂಡಿಗಳು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಊದಿನಕಡ್ಡಿ ವಾಸನೆಗೆ ಹಣ ಕಳೆದುಕೊಂಡ ಜನ
ಸಾಹಿತ್ಯ - ಸಾಂಸ್ಕೃತಿಕ ಚಟುವಟಿಕೆಗಳಿಂದ ಉತ್ತಮ ಸಮಾಜ ನಿರ್ಮಾಣ: ಹನುಮಂತಯ್ಯ