ಜನರ ಅಹವಾಲುಗಳಿಗೆ ತ್ವರಿತ ಪರಿಹಾರ ಉತ್ತರ ನೀಡಿ: ಸ್ವರೂಪ

KannadaprabhaNewsNetwork |  
Published : Nov 14, 2026, 02:45 AM IST
12ಪ್ರಜಾಸೇವಾ | Kannada Prabha

ಸಾರಾಂಶ

ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಪ್ರಜಾಸೇವಾ ಆಂದೋಲನದಲ್ಲಿ ಸ್ವೀಕೃತವಾದ ಅರ್ಜಿಗಳ ವಿಲೇವಾರಿಯ ಪ್ರಗತಿ ಪರಿಶೀಲನಾ ಸಭೆ

ಉಡುಪಿ: ಪ್ರಜಾಸೇವಾ ಆಂದೋಲನದಲ್ಲಿ ಸಲ್ಲಿಕೆಯಾದ ಜನರ ಅಹವಾಲುಗಳನ್ನು ಅಧಿಕಾರಿಗಳು ನಿಗದಿತ ಕಾಲಾವಧಿಯಲ್ಲಿ ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಅವರು ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಪ್ರಜಾಸೇವಾ ಆಂದೋಲನದಲ್ಲಿ ಸ್ವೀಕೃತವಾದ ಅರ್ಜಿಗಳ ವಿಲೇವಾರಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜನರಿದ್ದಲ್ಲಿಯೇ ಹೋಗಿ ಅವರ ಸಮಸ್ಯೆಗಳನ್ನು ಬಗೆಹರಿಸುವ ಉದ್ದೇಶದಿಂದ ಸರ್ಕಾರ ಪ್ರಜಾಸೇವಾ ಆಂದೋಲನವನ್ನು ನಡೆಸುತ್ತಿದೆ. ಜನರ ಅಹವಾಲುಗಳನ್ನು ತಕ್ಷಣ ಕೂಲಂಕುಷವಾಗಿ ಪರಿಶೀಲಿಸಿ ನಿಯಮಾನುಸಾರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸಿ ಕಡ್ಡಾಯವಾಗಿ ಹಿಂಬರಹವನ್ನು ನೀಡಬೇಕು ಎಂದರು.ಅಹವಾಲುಗಳು ವಿಷಯಾಧಾರಿತವಾಗಿ ಯಾವ ಇಲಾಖೆಗೆ ಸಂಬಂಧಿಸಿವೆ ಎಂದು ಮನಗಂಡು, ಆಯಾ ಇಲಾಖೆಯ ಅಧಿಕಾರಿಗಳು ಅವುಗಳನ್ನು ವಿಲೇ ಮಾಡಬೇಕು. ಒಂದೊಮ್ಮೆ ಅವು ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದಾದಲ್ಲಿ ವಿಳಂಬ ಮಾಡದೇ ತಕ್ಷಣವೇ ಸಂಬಂಧಪಟ್ಟ ಇಲಾಖೆ ಅಥವಾ ತಾಲೂಕಿಗೆ ಹಂಚಿಕೆಮಾಡಬೇಕು. ಅದನ್ನು ಸಭೆಯಲ್ಲಿಯೇ ಮಾಡುವುದು ಸೂಕ್ತ ಎಂದರು.ಕೆಳ ಹಂತದಲ್ಲಿಯೇ ಬಗೆಹರಿಸುವಂತಹ ಸಮಸ್ಯೆಗಳಿಗೆ ಆದ್ಯತೆಯಲ್ಲಿ ಸ್ಥಳದಲ್ಲಿಯೇ ಪರಿಹಾರ ನೀಡಿ ಹಿಂಬರಹ ನೀಡಬೇಕು. ಐ.ಪಿ.ಜಿ.ಆರ್.ಎಸ್ ಪೋರ್ಟಲ್‌ನಲ್ಲಿ ಅದನ್ನು ನಮೂದು ಮಾಡಬೇಕು. ನಿಯಮಗಳ ಕಾರಣಕ್ಕೆ ಸ್ಥಳದಲ್ಲಿ ಬಗೆಹರಿಸಲಾಗದ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಉತ್ತರವನ್ನು ನೀಡಬೇಕು, ಹೊರತು ಅಸಂಬದ್ಧ ಉತ್ತರ ನೀಡುವಂತಿಲ್ಲ ಎಂದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್‌ಪಿ ಸುಧಾಕರ್ ನಾಯಕ್, ಜಿಪಂ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ಸಹಾಯಕ ಕಮೀಷನರ್ ಮಹೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಸೀಲ್ದಾರ್‌ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜನರೂ ಸಹಕರಿಸಬೇಕು

ಜನಸಾಮಾನ್ಯರು ಒಂದೇ ಅರ್ಜಿಯಲ್ಲಿ ಅನೇಕ ಸಮಸ್ಯೆಗಳನ್ನು ಬರೆದು ನೀಡುವುದೂ ಕಂಡು ಬರುತ್ತಿದೆ. ಹೀಗೆ ಮಾಡದೇ ಪ್ರತಿಯೊಂದು ಸಮಸ್ಯೆಗಳಿಗೂ ಪ್ರತ್ಯೇಕ ಅರ್ಜಿಯನ್ನು ಬರೆದು, ಸಂಬಂಧಪಟ್ಟ ಇಲಾಖೆಗಳಿಗೆ ಅವುಗಳನ್ನು ನೀಡಬೇಕು. ಈ ಬಗ್ಗೆ ಕಂದಾಯ ಇಲಾಖೆಯ ಅಧಿಕಾರಿಗಳು ಎಚ್ಚರವಹಿಸಬೇಕು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ಸರ್ವತೋಮುಖ ಪ್ರಗತಿಗೆ ಶ್ರಮಿಸಿ
ಎಸಿಯಾಗಿ ಪದೋನ್ನತಿ ಹೊಂದಿದ ತಹಸೀಲ್ದಾರ್‌ ಬೋಸಗಿ