ಪರಸನಹಳ್ಳಿ ಸಿಸಿ ರಸ್ತೆ ಕಾಮಗಾರಿ ಕಳಪೆ

KannadaprabhaNewsNetwork |  
Published : Jun 30, 2024, 12:51 AM IST
ಸುರಪುರ ತಾಲೂಕಿನ ಪರಸನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿ.  | Kannada Prabha

ಸಾರಾಂಶ

ಸುರಪುರ ತಾಲೂಕಿನ ಪರಸನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿ

ಸೂಕ್ತ ಕಾನೂನು ಕ್ರಮಕ್ಕೆ ಪುರಸಭೆ ಸದಸ್ಯೆ ಸೂರಮ್ಮ ಆಗ್ರಹಕನ್ನಡಪ್ರಭ ವಾರ್ತೆ ಸುರಪುರ

ತಾಲೂಕಿನ ಕೆಂಭಾವಿ ಪಟ್ಟಣ ಪುರಸಭೆಯ ವ್ಯಾಪ್ತಿಯ ಪರಸನಹಳ್ಳಿ ಗ್ರಾಮದಲ್ಲಿ ನಡೆಸುತ್ತಿರುವ ಸಿಸಿ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಕೂಡಲೇ ಕಾಮಗಾರಿ ನಿಲ್ಲಿಸಬೇಕು. ಸಂಬಂಧಟ್ಟವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪುರಸಭೆ ಸದಸ್ಯೆ ಸೂರಮ್ಮ ಮುದೆಪ್ಪ ಮಸೂತಿ ಆಗ್ರಹಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಅವರು, ಕೆಕೆಆರ್‌ಡಿಬಿ ಯೋಜನೆಯಲ್ಲಿ ಸುಮಾರು 50 ಲಕ್ಷ ರು. ವೆಚ್ಚದಲ್ಲಿ ಪುರಸಭೆ ವತಿಯಿಂದ ಕಾಮಗಾರಿ ನಡೆಯುತ್ತಿದ್ದು, ಇದನ್ನು ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗಿದೆ. ಆದರೆ, ರಸ್ತೆ ನಿರ್ಮಾಣದಲ್ಲಿ ಹಲವು ಲೋಪದೋಷಗಳು ಕಂಡುಬಂದಿದ್ದು, ರಸ್ತೆಗೆ ನಿಯಮಾನುಸಾರ ಸಾಮಗ್ರಿ ಬಳಸದೆ ರಸ್ತೆ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.

ಇದು ಗ್ರಾಮದ ಪ್ರಮುಖ ದೇವಸ್ಥಾನಕ್ಕೆ ಹೋಗುವ ರಹದಾರಿಯಾಗಿದ್ದು, ಕೂಡಲೆ ಈ ಬಗ್ಗೆ ತನಿಖೆ ನಡೆಸಿ ನಿಯಮಾನುಸಾರ ಕಾಮಗಾರಿ ಮಾಡದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಉತ್ತಮ ಗುಣಮಟ್ಟದ ಸಿಸಿ ರಸ್ತೆ ನಿರ್ಮಾಣ ಮಡಬೇಕೆಂದು ಅವರು ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಕ್ರಮ ಡ್ರಗ್ಸ್‌ ವಾಸನೆ ತಡೆಗೆ ನಾಯಿಗಳ ಮಲಮೂತ್ರ!
ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಭರದ ಸಿದ್ಧತೆ