ಕನ್ನಡಪ್ರಭ ವಾರ್ತೆ ಯಾದಗಿರಿ
ವಿಶ್ವ ಸ್ನೇಹಿತರ ದಿನಾಚರಣೆ ಪ್ರಯುಕ್ತ ಚಂದ್ರಶೇಖರ್ ವಿದ್ಯಾಸಂಸ್ಥೆಯ ನ್ಯೂ ಕನ್ನಡ ಕಾಲೇಜಿನ 2006ರ ಪಿಯುಸಿ ಕಲಾ ವಿಭಾಗದ ಗೆಳೆಯರ ಬಳಗದ ವತಿಯಿಂದ ನಗರದ ಲುಂಬಿನಿ ವನದಲ್ಲಿ ನಡೆದ ಗುರುವಂದನಾ ಹಾಗೂ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಕಾರ್ಯಕ್ರಮದ ಸವಿನೆನಪಿಗಾಗಿ ಗೆಳೆಯರ ಬಳಗದಿಂದ ಸಸಿ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಉತ್ತಮ ಪರಿಸರದಿಂದ ಮಾತ್ರ ಮನುಷ್ಯ ಆರೋಗ್ಯವಾಗಿರಲು ಸಾಧ್ಯ. ನಿಮ್ಮೆಲ್ಲರ ಸಮಾಜಮುಖಿ ಕಾರ್ಯಗಳಿಗೆ ವೈಯಕ್ತಿಕವಾಗಿ ನನ್ನ ಸಹಕಾರವು ಇರುತ್ತದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನ್ಯೂ ಕನ್ನಡ ಕಾಲೇಜಿನ ಪಿಯುಸಿ ವಿಭಾಗದ ಪ್ರಾಚಾರ್ಯ ಮಲ್ಲಿಕಾರ್ಜುನ್ ಎಸ್. ಅಂಗಡಿ ಮಾತನಾಡಿ, ಗುರು-ಶಿಷ್ಯರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ತಮ್ಮ ಏಳಿಗೆಯಲ್ಲಿ ಗುರುವಿನ ಪಾತ್ರ ಅತ್ಯಂತ ಮುಖ್ಯವಾಗಿರುತ್ತದೆ. ವಿದ್ಯೆ ಕಲಿಸಿದ ಗುರುಗಳನ್ನು ಹಾಗೂ ತಮ್ಮ ಸಹಪಾಠಿಗಳನ್ನು ನೆನಪಿಸಿಕೊಂಡು ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಏರ್ಪಡಿಸಿದ್ದು, ತುಂಬಾ ಸಂತಸದ ವಿಷಯ ಎಂದರು.
ಕಾರ್ಯಕ್ರಮದಲ್ಲಿ ಗುರುಗಳಿಗೆ ಗೌರವಿಸಿ, ಸನ್ಮಾನಿಸಲಾಯಿತು. ತದನಂತರ ಲುಂಬಿನಿ ವನದಲ್ಲಿ 50ಕ್ಕೂ ಹೆಚ್ಚು ಸಸಿಗಳನ್ನು ನೆಡಲಾಯಿತು. ಇದಕ್ಕೂ ಮುನ್ನ ಮಾಜಿ ಶಾಸಕ ವೀರಬಸಂತರೆಡ್ಡಿ ಮುದ್ನಾಳ, ಮರಿಗೌಡ ಹುಲಕಲ್ ಹಾಗೂ ಪಿಎಸ್ಐ ಪರಶುರಾಮ್ ಅವರಿಗೆ ಎರಡು ನಿಮಿಷಗಳು ಮೌನಾಚರಣೆ ಮಾಡಿ ನುಡಿನಮನ ಸಲ್ಲಿಸಲಾಯಿತು.