ಪೋಷಕರೇ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ: ಶ್ರೀನಿವಾಸ್ ಮನವಿ

KannadaprabhaNewsNetwork | Updated : Jan 08 2024, 02:06 PM IST

ಸಾರಾಂಶ

ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ದೊರೆಯುತ್ತಿದೆ. ಪ್ರತಿಭಾವಂತ ಶಿಕ್ಷಕರಿದ್ದು, ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಇಲಾಖೆ ಹಲವು ಯೋಜನೆಗಳನ್ನು ಅನುಷ್ಠಾನ ಮಾಡಿದೆ. ಅನಗತ್ಯ ಖರ್ಚು ವೆಚ್ಚಗಳನ್ನು ತಪ್ಪಿಸಲು ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು.

ಕನ್ನಡಪ್ರಭ ವಾರ್ತೆ ಮೇಲುಕೋಟೆ

ಶಿಕ್ಷಣ ಕೊಡಿಸುವ ನೆಪದಲ್ಲಿ ಅನಗತ್ಯ ಖರ್ಚು ವೆಚ್ಚಗಳನ್ನು ತಪ್ಪಿಸಲು ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವಂತೆ ಶಿಕ್ಷಣ ಸಂಯೋಜಕ ಶ್ರೀನಿವಾಸ್ ಮನವಿ ಮಾಡಿದರು.

ಹೋಬಳಿಯ ಮಾಣಿಕ್ಯನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವದ ಚಿಣ್ಣರ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ದೊರೆಯುತ್ತಿದೆ. ಪ್ರತಿಭಾವಂತ ಶಿಕ್ಷಕರಿದ್ದು, ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಇಲಾಖೆ ಹಲವು ಯೋಜನೆಗಳನ್ನು ಅನುಷ್ಠಾನ ಮಾಡಿದೆ ಎಂದರು. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಸಂಪೂರ್ಣ ಉಚಿತವಾಗಿ ಸಿಗುತ್ತಿದೆ. ಪೋಷಕರು ಕಾನ್ವೆಂಟ್ ವ್ಯಾಹೋಹ ತ್ಯಜಿಸಿ ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಬೇಕು ಎಂದು ಸಲಹೆ ನೀಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಪಿ.ಮಂಜುನಾಥ್ ಮಾತನಾಡಿ, ಹಳ್ಳಿಗಾಡಿನಲ್ಲಿ ವ್ಯಾಸಂಗ ಮಾಡಿ ಉನ್ನತ ಸ್ಥಾನದಲ್ಲಿರುವವರು ತಮ್ಮೂರಿನ ಸರ್ಕಾರಿ ಶಾಲೆ ಬೆಳವಣಿಗೆಗೆ ಸಹಕರಿಸಬೇಕು. ಶಾಲೆಯಲ್ಲಿ ಗುಣಾತ್ಮಕ ಚಟುವಟಿಕೆಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಎಸ್ ಡಿಎಂಸಿ ಅಧ್ಯಕ್ಷ ದಿವಾಕರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮಕ್ಕಳ ಮನೆ ಅಧ್ಯಕ್ಷ ಜವರೇಗೌಡ, ಯಜಮಾನರಾದ ಸಿಂಗ್ರೀಗೌಡ, ಗ್ರಾಪಂ ಮಾಜಿ ಅಧ್ಯಕ್ಷರಾದ ಕೆಂಪೇಗೌಡ, ಅನಿತಾರಾಣಿ, ಹಾಲು ಉತ್ಪಾದಕರ ಸಂಘದ ಮಾಜಿ ಅಧ್ಯಕ್ಷರಾದ ಎಂ.ಎಸ್. ರಾಜು, ಜಲಬೋರೇಗೌಡ, ಸಿಆರ್ ಸಿ ಸಂಯೋಜಕ ಯದುರಾಜ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಎಂ.ಡಿ. ಕುಮಾರ್, ಖಜಾಂಚಿ ನಾಗರಾಜು, ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಎಸ್.ಎನ್.ಕೆಂಪೇಗೌಡ, ಪದವೀಧರ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಂ.ಕೆ ವಿಜಯಕುಮಾರ್, ಶಿಕ್ಷಕ ಪ್ರತಿಭಾ ಪರಿಷತ್ ತಾಲೂಕು ಅಧ್ಯಕ್ಷ ಸೋಮಶೇಖರ್ ಹೆಚ್.ಎಂ, ಪರಿಸರ ಪ್ರೇಮಿ ಲವಕುಮಾರ್, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ. ಕೆಂಪೇಗೌಡ, ಗ್ರಾಪಂ ಸದಸ್ಯ ದ್ಯಾವ ಶೆಟ್ಟಿ, ನಿವೃತ್ತ ಶಿಕ್ಷಕರಾದ ಮುದ್ದೇಗೌಡ ಸಣ್ಣಬೋರೇಗೌಡ, ಹಾಗೂ ಎಸ್.ಡಿ.ಎಂ.ಸಿ.ಉಪಾಧ್ಯಕ್ಷರು ಸದಸ್ಯರುಗಳು, ಮಕ್ಕಳ ಮನೆಯ ಸದಸ್ಯರುಗಳು, ಶಾಲೆಯ ಎಲ್ಲಾ ಶಿಕ್ಷಕರು,ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Share this article