ಸರ್ಕಾರಿ ಶಾಲೆಗಳನ್ನು ಉಳಿಸುವ ಜವಾಬ್ದಾರಿ ಪೋಷಕರ ಮೇಲಿದೆ: ಶಬಾನಾ ಅಂಜುಮ್

KannadaprabhaNewsNetwork |  
Published : Jan 16, 2026, 12:15 AM IST
ನರಸಿಂಹರಾಜಪುರ ತಾಲೂಕಿನ ಸಂಕ್ಸೆ ( ಗುಡ್ಡೇಹಳ್ಳ ) ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ  ಎಫ್‌.ಎಲ್.ಎನ್. ಕಲಿಕಾ ಹಬ್ಬವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಮ್ ಉದ್ಘಾಟಿಸಿದರು | Kannada Prabha

ಸಾರಾಂಶ

ನರಸಿಂಹರಾಜಪುರಮುಚ್ಚುವ ಸ್ಥಿತಿಯಲ್ಲಿರುವ ಸರ್ಕಾರಿ ಶಾಲೆಗಳನ್ನು ಉಳಿಸುವ ಜವಾಬ್ದಾರಿ ಪೋಷಕರು, ಗ್ರಾಮಸ್ಥರು ಹಾಗೂ ಶಾಲಾಭಿವೃದ್ಧಿ ಸಮಿತಿಯವರದ್ದಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನ ಅಂಜುಮ್ ಹೇಳಿದರು.

ಸಂಕ್ಸೆ ( ಗುಡ್ಡೇಹಳ್ಳ) ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಫ್.ಎಲ್.ಎನ್ ಕಲಿಕಾ ಹಬ್ಬ ಉದ್ಘಾಟನೆ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಮುಚ್ಚುವ ಸ್ಥಿತಿಯಲ್ಲಿರುವ ಸರ್ಕಾರಿ ಶಾಲೆಗಳನ್ನು ಉಳಿಸುವ ಜವಾಬ್ದಾರಿ ಪೋಷಕರು, ಗ್ರಾಮಸ್ಥರು ಹಾಗೂ ಶಾಲಾಭಿವೃದ್ಧಿ ಸಮಿತಿಯವರದ್ದಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನ ಅಂಜುಮ್ ಹೇಳಿದರು.ಬುಧವಾರ ತಾಲೂಕಿನ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಕ್ಸೆ(ಗುಡ್ಡೇಹಳ್ಳ) ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸುಂಕದಕುಣಿ ಕ್ಲಸ್ಟರ್ ಮಟ್ಟದ ಎಫ್.ಎಲ್.ಎನ್ ಕಲಿಕಾ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಲಿಕಾ ಹಬ್ಬದ ಜೊತೆಗೆ ಶಾಲೆಯ ಮುಖ್ಯ ಶಿಕ್ಷಕ ಆರ್. ನಾಗರಾಜ್ ಆಸಕ್ತಿಯಿಂದ ಮಕ್ಕಳಿಗೆ ಅನುಕೂಲವಾಗುವಂತಹ ಕಲಿಕೋಪಕರಣಗಳ ಪ್ರದರ್ಶನ ಏರ್ಪಡಿಸಿದ್ದಾರೆ. ಅಲ್ಲದೆ ರೈತರು ಉಪಯೋಗಿಸುವ ಸಲಕರಣೆಗಳ ವಸ್ತು ಪ್ರದರ್ಶನ ಆಯೋಜಿಸಿರುವುದು ಮನಮೋಹಕವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಲಾ ಎಸ್.ಡಿಎಂಸಿ ಅಧ್ಯಕ್ಷ ಸಂದೀಪ್ ಕುಮಾರ್ ಮಾತನಾಡಿ, ಗ್ರಾಮಸ್ಥರ ಹಾಗೂ ದಾನಿಗಳ ಸಹಕಾರದಿಂದ ಕಲಿಕಾ ಹಬ್ಬ ಯಶಸ್ವಿಯಾಗಿ ನಡೆದಿದೆ ಎಂದರು.

ಇದೇ ಸಂದರ್ಭದಲ್ಲಿ ರಾಷ್ಟ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದ ಥ್ರೋಬಾಲ್ ಕ್ರೀಡಾ ಪಟು ಕುಸುಮ ಅವರನ್ನು ಸನ್ಮಾನಿಸಲಾಯಿತು.ಶಾಲೆಯಲ್ಲಿ ಕಲಿಕಾ ಹಬ್ಬದ ಪ್ರಯುಕ್ತ ವಸ್ತು ಪ್ರದರ್ಶನ, ಕಲಿಕಾ ಬೋಧನ ಉಪಕರಣಗಳ ಪ್ರದರ್ಶನ, 1 ರಿಂದ 5 ನೇ ತರಗತಿಯ ಮಕ್ಕಳಿಗೆ 7 ವಿವಿಧ ಸ್ಪರ್ಧೆ ಏರ್ಪಡಿಸಲಾಗಿತ್ತು.

ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಸೇವಾನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ, ಕಲಿಕಾ ಹಬ್ಬ ಕಾರ್ಯಕ್ರಮದ ಉದ್ದೇಶ ಮತ್ತು ಮಹತ್ವ ತಿಳಿಸಿದರು. ಕಾನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮೋಹಿನಿ, ಸದಸ್ಯೆ ನಾಗರತ್ನ, ರಾಜ್ಯ ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎ.ಇ.ಅಶೋಕ್ ಮಾತನಾಡಿದರು. ಸಭೆಯಲ್ಲಿ ಶಿಕ್ಷಣ ಸಂಯೋಜಕ ಕೆ.ರಂಗಪ್ಪ, ಬಿಇಐಆರ್.ಟಿ ತಿಮ್ಮೇಶ್, ಸಿಆರ್ ಪಿ ಗಳಾದ ದೇವರಾಜ್, ಗಿರೀಶ್, ಶಿವಣ್ಣ, ರಾಮನಾಯ್ಕ, ಶಾಲೆ ಮುಖ್ಯ ಶಿಕ್ಷಕ ನಾಗರಾಜ್ ಅಪ್ಪಾಜಿ, ಗುಳ್ಳದಮನೆ ಸರ್ಕಾರಿ ಶಾಲೆ ಶಿಕ್ಷಕಿ ಬಿ.ಎಸ್.ಶಿಲ್ಪಕುಮಾರಿ, ಗ್ರಾಮದ ಮುಖಂಡರಾದ ಶರತ್ ಕಲ್ಲೆ, ಡಾಕೇಂದ್ರ, ತಮ್ಮಯ್ಯ, ರಾಜು ಪೌಲೋಸ್, ಮಂಜುನಾಥ್, ಶ್ರೀನಾಥ್, ಆದರ್ಶ, ಜಾನ್, ಕೆ.ಆರ್.ಚಂದ್ರಶೇಖರ್, ಎಸ್.ರಾಜು, ತೀರ್ಥರಾಜು, ಶ್ರೀನಿವಾಸ್, ಶಿವಮೂರ್ತಿ, ರಾಜಾನಾಯ್ಕ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆರ್‌ಸಿಯು ಧೂಳಿಗೆ ಕಮರಿದ ರೈತರ ಬದುಕು
ಮಕ್ಕಳಿಗೆ ವೈಜ್ಞಾನಿಕ ಮನೋಭಾವ ಅಗತ್ಯ