ಪ್ರತಿಭೆಗಳ ಬೆಳಕಿಗೆ ತರಲು ಸರ್ಕಾರದ ಜೊತೆಗೆ ಪಾಲಕರು ಕೈಜೋಡಿಸಿ-ಶಾಸಕ ಬಸವರಾಜ

KannadaprabhaNewsNetwork |  
Published : Jan 25, 2026, 02:30 AM IST
ತಾಲೂಕಿನ ಅರಬಗೊಂಡ ಗ್ರಾಮದಲ್ಲಿ ತಾಲೂಕ ಪಂಚಾಯತ ಅನುದಾನದಲ್ಲಿ ನಿರ್ಮಿಸಿದ  ಅಂಗನವಾಡಿ ನೂತನ ಕಟ್ಟಡವನ್ನು ಶಾಸಕ ಬಸವರಾಜ ಶಿವಣ್ಣನವರ ಉದ್ಘಾಟಿಸಿದರು. | Kannada Prabha

ಸಾರಾಂಶ

ಗ್ರಾಮೀಣ ಪ್ರದೇಶದ ಶೈಕ್ಷಣಿಕ ಪ್ರತಿಭೆಗಳನ್ನು ಬೆಳಕಿಗೆ ತರುವ ನಿಟ್ಟಿನಲ್ಲಿ ಸರ್ಕಾರದ ಜೊತೆಗೆ ಪಾಲಕರು ಮತ್ತು ಪೋಷಕರು ಕೈಜೋಡಿಸಬೇಕಾಗಿದೆ ಎಂದು ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.

ಬ್ಯಾಡಗಿ: ಗ್ರಾಮೀಣ ಪ್ರದೇಶದ ಶೈಕ್ಷಣಿಕ ಪ್ರತಿಭೆಗಳನ್ನು ಬೆಳಕಿಗೆ ತರುವ ನಿಟ್ಟಿನಲ್ಲಿ ಸರ್ಕಾರದ ಜೊತೆಗೆ ಪಾಲಕರು ಮತ್ತು ಪೋಷಕರು ಕೈಜೋಡಿಸಬೇಕಾಗಿದೆ ಎಂದು ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲೂಕಿನ ಅರಬಗೊಂಡ ಗ್ರಾಮದಲ್ಲಿ ತಾಲೂಕು ಪಂಚಾಯತ ಅನುದಾನದಲ್ಲಿ ನಿರ್ಮಿಸಿದ ಅಂಗನವಾಡಿಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗುಣಮಟ್ಟದ ಶಿಕ್ಷಣ ಕೇವಲ ನಗರ ಪ್ರದೇಶಕ್ಕೆ ಸೀಮಿತ ಎನ್ನುವಂತಹ ಕಾಲಘಟ್ಟದಿಂದ ನಾವೆಲ್ಲರೂ ಹೊರಬರಬೇಕಾಗಿದೆ. ಈಗಾಗಲೇ ಗ್ರಾಮೀಣ ಪ್ರದೇಶದಲ್ಲಿಯೂ ಪ್ರತಿಭಾನ್ವಿತ ಮಕ್ಕಳು ನಿರ್ಣಾಯಕ ಹಂತಗಳಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಂತಹ ಉದಾಹರಣೆಗಳಿವೆ. ಇಂತಹ ಸಂದರ್ಭಗಳನ್ನು ನೋಡುತ್ತಿರುವ ಸರ್ಕಾರ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡುತ್ತಿದೆ ಎಂದರು.

ನಿಮ್ಮದೇ ಅಂಗನವಾಡಿ ಪಾವಿತ್ರ್ಯತೆ ಕಾಯ್ದುಕೊಳ್ಳಿ:ಹಳ್ಳಿಗಳಲ್ಲಿರುವ ಅಂಗನವಾಡಿಗಳು ನಿಮ್ಮದೇ ಮಕ್ಕಳಿಗೆ ಭವಿಷ್ಯವನ್ನು ರೂಪಿಸುವ ಕೇಂದ್ರಗಳಾಗಿದ್ದು, ಅವುಗಳ ಪಾವಿತ್ರ್ಯತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸಾಮೂಹಿಕ ಹೊಣೆಗಾರಿಕೆ ತೋರಬೇಕಾಗಿದೆ. ಸದರಿ ಕಟ್ಟಡದ ಸುತ್ತಮುತ್ತಲ ಪ್ರದೇಶದಲ್ಲಿ ಅನಧಿಕೃತ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಹಾಗೂ ಪುಂಡಪೋಕರಿಗಳಿಗೆ ಅವಕಾಶ ನೀಡದಂತೆ ನೋಡಿಕೊಳ್ಳಬೇಕು, ಇಲ್ಲಿರುವ ಕಾರ್ಯಕರ್ತರು ಸರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಇಲ್ಲವೇ ಎಂಬುದನ್ನು ಪರೀಕ್ಷಿಸಿಕೊಳ್ಳುವಂತೆ ಸಲಹೆ ನೀಡಿದರು.ರಾಜಕೀಯ ಮುಕ್ತ ಪ್ರದೇಶವಾಗಲಿ: ಗ್ರಾಮೀಣ ಪ್ರದೇಶದ ಎಲ್ಲಾ ಮಕ್ಕಳಿಗೆ ಅನುಕೂಲಕ್ಕಾಗಿ ಅಂಗನವಾಡಿಗಳ ನಿರ್ಮಾಣವಾಗಿದೆ, ಆದರೆ ಕೆಲವೆಡೆ ಅಂಗನವಾಡಿ ಕೇಂದ್ರಗಳೇ ಶಕ್ತಿ ಕೇಂದ್ರಗಳಾಗಿ ರೂಪುಗೊಳ್ಳುತ್ತಿವೆ. ಹೀಗಾಗಿ ಸದರಿ ಪ್ರದೇಶವನ್ನು ರಾಜಕೀಯ ಮತ್ತು ಜಾತಿ ಮತ ಧರ್ಮಗಳಿಂದ ಮುಕ್ತವಾಗಿಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ತಾಪಂ.ಇಓ ಕೆ.ಎಂ. ಮಲ್ಲಿಕಾರ್ಜುನ, ಮುಖಂಡರಾದ ದಾನಪ್ಪ ಚೂರಿ, ನಾಗರಾಜ ಆನವೇರಿ, ಗುಂಡೇನಹಳ್ಳಿ ಗ್ರಾ.ಪಂ.ಅಧ್ಯಕ್ಷರು ಹಾಗೂ ಸರ್ವಸದಸ್ಯರು ಮತ್ತು ಗ್ರಾಮದ ಹಿರಿಯರು ಮುಖಂಡರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಸ್ಟೆಲ್ ಮಕ್ಕಳಿಗೆ ಹೊಸ ಜಾತಿ ಪ್ರಮಾಣಪತ್ರ ಶಾಕ್‌
₹400 ಕೋಟಿ ಇದ್ದ 2 ಕಂಟೇನರ್‌ ಲಾರಿಗಳೇ ಬೆಳಗಾವೀಲಿ ನಾಪತ್ತೆ!