ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ಟಿಎಪಿಸಿಎಂಎಸ್ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ಹಾಗೂ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಸದಸ್ಯರು ಮತ್ತು ನೌಕರರ ಕಲ್ಯಾಣ ನಿಧಿ ಟ್ರಸ್ಟ್‌ನ ಆಶ್ರಯದಲ್ಲಿ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಹಾಲು ಉತ್ಪಾದಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಕ್ಕಳ ಪ್ರತಿಭೆ ಹೊರತರುವ ಕೆಲಸ ಮನೆಯಲ್ಲಿನ ಪೋಷಕರು ಹೆಚ್ಚಿನ ಶ್ರಮ ವಹಿಸಲಿದ್ದಾರೆ. ತಂದೆ, ತಾಯಿ ತಮ್ಮ ಮಕ್ಕಳ ಬಗ್ಗೆ ಅಪಾರ ಕಾಳಜಿ ವಹಿಸಿ ವಿದ್ಯಾವಂತ ಹಾಗೂ ಉನ್ನತ ಉದ್ದೇಗಳಿಗೆ ಕಳುಹಿಸುವ ಮೂಲಕ ಮಕ್ಕಳಿಗೆ ನಡೆದ ಸನ್ಮಾನ ಗೌರವಗಳನ್ನು ಕಂಡು ತಮ್ಮ ಶ್ರಮದ ಸಾರ್ಥಕತೆಯಲ್ಲಿ ಒಮ್ಮೆ ಖುಷಿ ಪಡಲಿದ್ದಾರೆ ಎಂದರು.ಈ ನಿಟ್ಟಿನಲ್ಲಿ ಮಕ್ಕಳು ಕೂಡ ತಮ್ಮ ಫ್ರೌವೃತ್ತಿಯ ಜೀವನ ನಡೆಸುವಾಗ ತಂದೆ ತಾಯಿ ಪೋಷಕರನ್ನು ತಾವು ಬೆಳೆದು ದೊಡ್ಡವರಾದ ನಂತರ ಪ್ರೀತಿಯಿಂದ ನೋಡಿಕೊಳ್ಳುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.
ಈ ವೇಳೆ ಮನ್ಮುಲ್ ನಿರ್ದೇಶಕರಾದ ಎಂ.ಬಿ.ಹರೀಶ್, ಬಿ.ಆರ್.ರಾಮಚಂದ್ರ, ಡಿ.ಕೃಷ್ಣೇಗೌಡ, ವ್ಯವಸ್ಥಾಪಕ ನಿರ್ದೇಶಕ ರಘು.ಎಚ್.ಆರ್, ಹಣಕಾಸು ವ್ಯವಸ್ಥಾಪಕರಾದ ಪುಷ್ಪಲತಾ ಸಿ.ಜಗದೀಶ್, ಶಿವಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.