ವಿಶೇಷ ಮಕ್ಕಳನ್ನು ಮುಖ್ಯವಾಹಿನಿಗೆ ತರುವಲ್ಲಿ ಪೋಷಕರ ಪಾತ್ರ ಮಹತ್ವದ್ದು: ಜಯಶ್ರೀ

KannadaprabhaNewsNetwork |  
Published : Jan 10, 2025, 12:47 AM IST
11 | Kannada Prabha

ಸಾರಾಂಶ

ಪರಿಸರವನ್ನು ನಾವು ನಮ್ಮ ಅನುಕೂಲಕ್ಕೆ ತಕ್ಕಂತೆ ಬದಲಾವಣೆ ಅಥವಾ ಬಳಕೆ ಮಾಡಿಕೊಳ್ಳುವುದರಿಂದ ಮುಂದಿನ ದಿನಗಳಲ್ಲಿ ಪ್ರಕೃತಿ ವಿನಾಶವಾಗುವುದು ಖಚಿತ. ಆದ್ದರಿಂದ ನಮ್ಮ ಮನೆಯ ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿಯನ್ನು ವಹಿಸುವಂತೆ ತಿಳಿ ಹೇಳುವುದು ಅಗತ್ಯ ಎಂದರು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ವಿಶೇಷ ಅಗತ್ಯವುಳ್ಳ ಮಕ್ಕಳನ್ನು ಮುಖ್ಯವಾಹಿನಿಗೆ ತಲುಪಿಸಲು ಅದಕ್ಕೆ ಬೇಕಾದ ಪರಿಸರವನ್ನು ನಿರ್ಮಾಣ ಮಾಡುವಲ್ಲಿ ಪೋಷಕರ ಪಾತ್ರ ಮಹತ್ವದ್ದು ಎಂದು ಪುರಸಭಾಧ್ಯಕ್ಷೆ ಜಯಶ್ರೀ ಕೇಶವ್ ಹೇಳಿದರು.

ಇಲ್ಲಿನ ದ.ಕ. ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಇಲಾಖೆ, ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಸಮನ್ವಯ ಶಿಕ್ಷಣ ಸಂಪನ್ಮೂಲ ಕೇಂದ್ರ ಮೂಡುಬಿದಿರೆ ವಲಯ, ಕೆ. ಅಮರನಾಥ್ ಶೆಟ್ಟಿ ಮೆಮೊರಿಯಲ್ ಚಾರಿಟೇಬಲ್ ಟ್ರಸ್ಟ್, ಚೈಲ್ಡ್ ಕೇರ್ ಹಾಗೂ ಲಯನ್ಸ್ ಕ್ಲಬ್ ಮೂಡುಬಿದಿರೆ ಇವುಗಳ ಸಹಭಾಗಿತ್ವದಲ್ಲಿ ಬುಧವಾರ ಸಮಾಜ ಮಂದಿರದಲ್ಲಿ ನಡೆದ ಸಮನ್ವಯ ಶಿಕ್ಷಣ ಚಟುವಟಿಕೆಯಡಿಯಲ್ಲಿ ಪರಿಸರ ನಿರ್ಮಾಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಪರಿಸರವನ್ನು ನಾವು ನಮ್ಮ ಅನುಕೂಲಕ್ಕೆ ತಕ್ಕಂತೆ ಬದಲಾವಣೆ ಅಥವಾ ಬಳಕೆ ಮಾಡಿಕೊಳ್ಳುವುದರಿಂದ ಮುಂದಿನ ದಿನಗಳಲ್ಲಿ ಪ್ರಕೃತಿ ವಿನಾಶವಾಗುವುದು ಖಚಿತ. ಆದ್ದರಿಂದ ನಮ್ಮ ಮನೆಯ ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿಯನ್ನು ವಹಿಸುವಂತೆ ತಿಳಿ ಹೇಳುವುದು ಅಗತ್ಯ ಎಂದರು.ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಕೆ. ಅಧ್ಯಕ್ಷತೆ ವಹಿಸಿದ್ದರು. ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ ಇರುವ ಸೌಲಭ್ಯಗಳ ಕರ ಪತ್ರಗಳನ್ನು ಬಿಡುಗಡೆ ಮಾಡಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದಿರುವ ವಿಶೇಷ ಚೇತನ ವಿದ್ಯಾರ್ಥಿ ಚಿನ್ಮಯ್ ಅವರನ್ನು ಸನ್ಮಾನಿಸಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ಬೋನವೆಂಚರ್ ಮಿನೇಜಸ್, ಡಾ. ಅಮರಶ್ರೀ ಅಮರನಾಥ ಶೆಟ್ಟಿ, ಆಳ್ವಾಸ್ ಮೆಡಿಕಲ್ ಕಾಲೇಜಿನ ಫಿಸಿಯೋಥೆರಪಿ ವಿಭಾಗದ ಮುಖ್ಯಸ್ಥೆ ಅರ್ಚನಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕಿ ಸುಶೀಲಾ ಹೆಗ್ಡೆ, ಸಿಆರ್‌ಪಿಗಳಾದ ನಾಗರತ್ನ, ದಿನಕರ ಮತ್ತು ರಾಬರ್ಟ್ ಡಿಸೋಜ ಉಪಸ್ಥಿತರಿದ್ದರು. ಕ್ಷೇತ್ರ ಸಮನ್ವಯಾಧಿಕಾರಿ ಸೌಮ್ಯ ಎನ್. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಿಆರ್‌ಪಿ ಮಹೇಶ್ವರಿ ಕಾಯ೯ಕ್ರಮ ನಿರೂಪಿಸಿದರು. ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕಿ ಫ್ಲೇವಿ ಡಿಸೋಜ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ