ಯುವ ಜನಾಂಗ ಮಾದಕ ವ್ಯಸನಕ್ಕೆ ದಾಸರಾಗುತ್ತಿದ್ದು ಈ ಬಗ್ಗೆ ಪೋಷಕರು ಕಟ್ಟೆಚ್ಚರದಿಂದ ತಮ್ಮ ಮಕ್ಕಳ ಚಲವಲನಗಳನ್ನು ಗಮನಿಸಿ ಅವರನ್ನು ಮಾದಕವ್ಯಸನಕ್ಕೆ ತುತ್ತಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಇದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಎಂ.ಲತೀಫ್ ತಿಳಿಸಿದರು.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಯುವ ಜನಾಂಗ ಮಾದಕ ವ್ಯಸನಕ್ಕೆ ದಾಸರಾಗುತ್ತಿದ್ದು ಈ ಬಗ್ಗೆ ಪೋಷಕರು ಕಟ್ಟೆಚ್ಚರದಿಂದ ತಮ್ಮ ಮಕ್ಕಳ ಚಲವಲನಗಳನ್ನು ಗಮನಿಸಿ ಅವರನ್ನು ಮಾದಕವ್ಯಸನಕ್ಕೆ ತುತ್ತಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಇದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಎಂ.ಲತೀಫ್ ತಿಳಿಸಿದರು.ಇತ್ತೀಚೆಗೆ ಸುಂಟಿಕೊಪ್ಪದ ಜಿಯಂಪಿ ಶಾಲಾ ಮೈದಾನದಲ್ಲಿ ನಡೆದ ಜಿ ಟೌನ್ ಯುನೈಟೆಡ್ ಎಫ್ ಸಿ ವತಿಯಿಂದ ಎರಡನೇ ವರ್ಷದ ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾವಳಿಯನ್ನು ಡ್ರಗ್ಸ್ ಮುಕ್ತ ನಮ್ಮ ನಾಡು ಎಂಬ ಧ್ಯೇಯ ವಾಕ್ಯದೊಂದಿಗೆ ನಡೆದ ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾವಳಿಯ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.ಸಮಾರೋಪ ಸಮಾರಂಭದಲ್ಲಿ ಉಪಸ್ಥಿತರಿದ್ದ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ಸಿನ ಅಧ್ಯಕ್ಷ ಜಮ್ಮಡ ಸೋಮಣ್ಣ ಮಾತನಾಡಿ, ಮಾದಕ ವಸ್ತುಗಳ ವ್ಯಸನದಿಂದ ಯುವಜನತೆ ದಾರಿ ತಪ್ಪಿ ಹಣದಾಸೆಯಿಂದ ಸಮಾಜ ಘಾತಕ ಶಕ್ತಿಗಳಾಗಿ ಬೆಳೆಯುತ್ತಾರೆ. ಯುವಜನತೆಯನ್ನು ಗುರಿಯಾಗಿಸಿ ಇಟ್ಟುಕೊಂಡು ದುಷ್ಟ ಶಕ್ತಿಗಳು ವಿಜೃಂಭಿಸುತ್ತಿವೆ. ಈ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಯುವಕರೊಂದಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕೋರಿಕೊಂಡರು.
ಇದೇ ಸಂದರ್ಭ ಪಿ ಎಲ್ ಹರ್ಷದ್ ಮಾತನಾಡಿ, ಕ್ರೀಡೆಯಲ್ಲಿ ಸೋಲನ್ನು ಎದುರಿಸಿ ಗೆಲುವನ್ನು ಸಾಧಿಸುವುದು ನಿರಂತರ ಅಭ್ಯಾಸ ಮತ್ತು ಪರಿಶೀಲನೆಗಳ ಪ್ರತಿಯೊಬ್ಬ ಕ್ರೀಡಾಪಟುಗಳು ಅಳವಡಿಸಿಕೊಳ್ಳಬೇಕಾಗುತ್ತದೆ. ಇದರಿಂದ ಕ್ರೀಡಾಪಟು ಶಾರೀರಿಕವಾಗಿ ಸದೃಢವಾಗಿರಲು ಸಹಕಾರಿಯಾಗಿದ್ದು ಪಾಠದೊಂದಿಗೆ ಕ್ರೀಡೆಯಲ್ಲಿ ಪಾಲ್ಗೊಂಡು ಸಾಧಕರಾಗುವ ಮೂಲಕ ಸಮಾಜದಲ್ಲಿ ತಮ್ಮ ವ್ಯಕ್ತಿತ್ವವನ್ನು ಗುರುತಿಸಿಕೊಳ್ಳುವಂತೆ ಸಲಹೆ ನೀಡಿದರು.ಈ ಸಮಾರಂಭದಲ್ಲಿ ಜಿ ಟೌನ್ ಎಫ್ ಸಿ ಯ ಸಂಚಾಲಕರಾದ ಗ್ರಾಮ ಪಂಚಾಯಿತಿ ಸದಸ್ಯರಾದ ಶಬೀರ್, ರಫೀಕ್‌ಖಾನ್, ನಮ್ಮ ಸುಂಟಿಕೊಪ್ಪ ಬಳಗದ ಕೆ.ಎಸ್.ಅನಿಲ್ ಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿ ಹಕೀಂ, ಸುನ್ನಿ ಶಾಫಿ ಜುಮ ಮಸೀದಿ ಅಧ್ಯಕ್ಷ ಎಂ ಎಂ ರಫೀಕ್ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.