ಪಾಲಕರು ಮಕ್ಕಳಿಗೆ ಕಲಿಕಾ ವಾತಾವರಣ ರೂಪಿಸಬೇಕು. ಅವರಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಸದಾ ಹಾತೊರೆಯಬೇಕು. ಕಾಲಕಾಲಕ್ಕೆ ಶಾಲೆಗೆ ಭೇಟಿ ನೀಡಿ ಮಕ್ಕಳ ಪ್ರಗತಿ ಪರಿಶೀಲಿಸಬೇಕು ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ನರಗುಂದ: ಪಾಲಕರು ಮಕ್ಕಳಿಗೆ ಕಲಿಕಾ ವಾತಾವರಣ ರೂಪಿಸಬೇಕು. ಅವರಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಸದಾ ಹಾತೊರೆಯಬೇಕು. ಕಾಲಕಾಲಕ್ಕೆ ಶಾಲೆಗೆ ಭೇಟಿ ನೀಡಿ ಮಕ್ಕಳ ಪ್ರಗತಿ ಪರಿಶೀಲಿಸಬೇಕು ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.ಪಟ್ಟಣದ ನೀರಾವರಿ ಕಾಲೋನಿಯಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.5ರಲ್ಲಿ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಶಾಲಾ ಆರಂಭೋತ್ಸವ ಹಾಗೂ ಶಾಲಾ ದಾಖಲಾತಿ ಆಂದೋಲನಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
ಸರ್ಕಾರ ಮಕ್ಕಳ ಶಿಕ್ಷಣಕ್ಕಾಗಿ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸುತ್ತದೆ. ಅದರ ಸದುಪಯೋಗ ಆಗಬೇಕು. ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಬೇಕು. ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸುವಂತೆ ತಿಳಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಗುರುನಾಥ ಹೂಗಾರ ಮಾತನಾಡಿ, ಮಕ್ಕಳು ಉತ್ತಮ ನಾಗರಿಕರಾಗುವಲ್ಲಿ ಗುಣಾತ್ಮಕ ಶಿಕ್ಷಣ ನೀಡಬೇಕು. ಪಾಲಕರು, ಶಿಕ್ಷಕರು ಮಕ್ಕಳ ಉನ್ನತಿಗೆ ಶ್ರಮಿಸಬೇಕು. ಸರ್ಕಾರದ ಸೌಲಭ್ಯ ವಿದ್ಯಾರ್ಥಿಗಳಿಗೆ ತಲುಪಿ ಅವರ ಬಾಳು ಬೆಳಗಬೇಕಿದೆ ಎಂದರು. ಈ ವೇಳೆ ಪುರಸಭೆ ಅಧ್ಯಕ್ಷೆ ನೀಲವ್ವ ವಡ್ಡಿಗೇರಿ, ಸದಸ್ಯ ಸುನಿಲ್ ಕುಷ್ಟಗಿ, ತಹಸೀಲ್ದಾರ್ ಶ್ರೀಶೈಲ ತಳವಾರ, ಬಿಆರ್‌ಸಿ ಸಮನ್ವಯಾಧಿಕಾರಿ ಬಿ.ಎಫ್. ಮಜ್ಜಗಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮಾರುತಿ ಅಸುಂಡಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎನ್.ಆರ್. ಹನಿಡಗುಂದಿ, ಬಿಆರ್‌ಪಿಗಳಾದ ಬಿ.ಎ. ಬೋಯಿಟೆ, ಎಸ್.ಎಂ. ಭೂಸರಡ್ಡಿ, ಎಸ್‌ಡಿಎಂಸಿ ಅಧ್ಯಕ್ಷ ಮಂಜು ಕಲಾಲ ಹಾಗೂ ಸದಸ್ಯರು, ಮುಖ್ಯ ಶಿಕ್ಷಕ ಸಿ.ಕೆ. ಕೆಂಚನಗೌಡ್ರ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು, ಮಕ್ಕಳು ಭಾಗವಹಿಸಿದ್ದರು. ಅಮರೇಶ ತೆಗ್ಗಿನಮನಿ ಸ್ವಾಗತಿಸಿದರು. ಬಿಆರ್‌ಪಿ ಎಂ.ಬಿ. ಪಾಟೀಲ ನಿರೂಪಿಸಿದರು. ಡಿ.ಬಿ. ಪಡೆಸೂರ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.