ಪೋಷಕರು ಖಾಸಗಿ ಶಾಲೆ ಗೀಳಿನಿಂದ ಹೊರಬರಬೇಕು

KannadaprabhaNewsNetwork |  
Published : May 18, 2024, 12:43 AM IST
17ಕೆಬಿಪಿಟಿ.1.ಬಂಗಾರಪೇಟೆ ತಾಲೂಕಿನ ಎಳೇಸಂದ್ರ ಗ್ರಾಮದ ಮೊರಾರ್ಜಿ ದೇವಾಯಿ ಶಾಲೆಯ ಮಕ್ಕಳು ಎಸ್‌ಎಸ್‌ಎಲ್ಸಿ ಫಲಿತಾಂಶದಲ್ಲಿ ಸಾಧನೆ ಮಾಡಿದ ಮಕ್ಕಳನ್ನು ಆಡಳಿತ ಮಂಡಳಿ ಸನ್ಮಾನಿಸಿದರು. | Kannada Prabha

ಸಾರಾಂಶ

ಸರ್ಕಾರಿ ಶಾಲೆಗಳ ಬಗ್ಗೆ ಅಸಡ್ಡೆ ತೋರುವ ಪೋಷಕರಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಾದರಿಯಾಗಿ ಗುಣಮಟ್ಟದ ಫಲಿತಾಂಶ ಗಳಿಸುವಲ್ಲಿ ಯಶಸ್ವಿಯಾಗಿದೆ. ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳೇ ಅಧಿಕ ಅಂಕ ಪಡೆದಿದ್ದಾರೆ

ಕನ್ನಡಪ್ರಭ ವಾರ್ತೆ ಬಂಗಾರಪೇಟೆ

ಜಾಗತಿಕ ಸ್ಪರ್ಧೆ ಹಾಗೂ ಉದ್ಯೋಗ ಎಂಬ ಚಿಂತೆಯಲ್ಲಿಯೇ ಪಾಲಕರು ಇಂಗ್ಲಿಷ್ ಮಾಧ್ಯಮ ಹಾಗೂ ಖಾಸಗಿ ಶಾಲೆಗಳ ಗೀಳು ಬೆಳೆಸಿಕೊಂಡಿದ್ದಾರೆ ಎಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಆರ್.ಸುಮಾರಾಣಿ ಬೇಸರ ವ್ಯಕ್ತ ಪಡಿಸಿದರು.ತಾಲೂಕಿನ ಎಳೇಸಂದ್ರ ದ ಗ್ರಾಮ ಪಂಚಾಯಿತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಶಾಲಾ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಮೊರಾರ್ಜಿ ಶಾಲೆ ಸಾಧನೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳ ಬಗ್ಗೆ ಅಸಡ್ಡೆ ತೋರುವ ಪೋಷಕರಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಾದರಿಯಾಗಿ ಗುಣಮಟ್ಟದ ಫಲಿತಾಂಶ ಗಳಿಸುವಲ್ಲಿ ಯಶಸ್ವಿಯಾಗಿದೆ. ಈ ಬಾರಿ ರಾಜ್ಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗಿಂತ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳೇ ಅಧಿಕ ಅಂಕಗಳನ್ನು ಪಡೆದದಿರುವುದು ಇದಕ್ಕೆ ಮಾದರಿ ಎಂದು ತಿಳಿಸಿದರು.ಮಾತೃ ಭಾಷೆಯಲ್ಲಿ ಶಿಕ್ಷಣ

೨೦೨೩ - ೨೪ ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಾದ ಬಾಲಾಜಿ ೫೭೭. ಸುಮಾ ಎನ್ ೫ ೨೦. ಬಿಂದುಶ್ರೀ ೫೦೬. ಅಂಕ ಪಡೆದಿದ್ದು. ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳಾದ ಹರ್ಷಿತ ೫೮೧. ಮಧುಮಿತ ೫೬೭. ಅಂಕಗಳು ಪಡೆದಿರುತ್ತಾರೆ. ಅದೇ ರೀತಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಡಿಪಿ ಹಳ್ಳಿ ವಿದ್ಯಾರ್ಥಿಗಳಾದ ದಮರಿ ಬಾಯಿ ೫೫೪. ಕೃಷ್ಣಮೂರ್ತಿ ೫೪೦ ಅಂಕಗಳನ್ನು ಪಡೆದಿದ್ದಾರೆ. ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ವಾರ್ಷಿಕ ಪರೀಕ್ಷೆಯಲ್ಲಿ ೯೩ ಪರ್ಸೆಂಟ್ ಫಲಿತಾಂಶ ಬಂದಿದೆ. ಅದೇ ರೀತಿ ಡಿಪಿಯಲ್ಲಿ ಶಾಲೆ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ ಎಂದರು.

ಈ ಸಂದರ್ಭದಲ್ಲಿ ಬಳಿಗಾರ, ತೋಟಪ್ಪ, ಶಿಕ್ಷಕರಾದ ಜಿ.ಎಂ.ಮಂಗಳ ರಾಘವೇಂದ್ರ. ಚಂದ್ರಶೇಖರ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಲವು ಜಿಲ್ಲೆಗಳಲ್ಲಿ ಶೀತಗಾಳಿ ತಾಪಮಾನ 5-7 ಡಿಗ್ರಿ ಇಳಿಕೆ
‘ಬಾಡಿಗೆ ತಾಯ್ತನ’ದಿಂದ ಮಗು : ವೃದ್ಧ ದಂಪತಿಯಿಂದ ಕೋರ್ಟ್‌ ಮೊರೆ