ಹಲಗೂರು:
ಬಾಣಸಮುದ್ರ ಶಾಲೆಯಲ್ಲಿ ಶರಸಾಗರ-4 ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ಶಾಸಕ ನರೇಂದ್ರಸ್ವಾಮಿ ಅವರ ಕಾಳಜಿಯಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೂ ಮೂಲ ಸೌಕರ್ಯಗಳನ್ನು ಒದಗಿಸಿ ಸ್ಮಾರ್ಟ್ ತರಗತಿಗಳನ್ನು ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಕಿರುತೆರೆ ನಟ ಕೀರ್ತಿ ಭಾನು, ಸಂಚಯ ಗಣೇಶ್, ಕಾಮಿಡಿ ಕಿಲಾಡಿ ಖ್ಯಾತಿಯ ಅಭಿಜಿತ್ ಗೌಡ, ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿ ಎಂ.ಕೆ.ಶ್ರೀನಿವಾಸ್, ಶಿಕ್ಷಣ ಸಂಯೋಜಕ ರವಿಕುಮಾರ್ ಮಾತನಾಡಿದರು.ಇದೇ ವೇಳೆ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈ ವೇಳೆ ಡಿ.ಹಲಸಹಳ್ಳಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಶ್ರೀಧರ್, ಮುಖ್ಯ ಶಿಕ್ಷಕ ಜಿ.ಎಸ್.ರವಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಬಸವರಾಜು, ರಾಮಕೃಷ್ಣ, ಕೃಷ್ಣ, ಮಲ್ಲೇಶ್, ರಾಮಚಂದ್ರ, ಶಿವಣ್ಣ, ಶಿವಮಲ್ಲಮ್ಮ, ಆನಂದ, ಲಕ್ಷ್ಮಪ್ಪ, ಶಿವಕುಮಾರ್, ಮನು, ಶಿಕ್ಷಕರಾದ ಆನಂದ, ರುಕ್ಮಿಣಿ ಭಾಗವಹಿಸಿದ್ದರು.ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿ ವಿತರಣೆ
ಅಲೆಯನ್ಸ್ ಐಕ್ಯ, ಶ್ರೀರಂಗನಾಯಕಿ ಸ್ತ್ರೀ ಸಮಾಜ ಹಾಗೂ ಕಾಮಧೇನು ಸ್ವ-ಸಾಯ ಸಂಘದಿಂದ ಪಟ್ಟಣದ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿ ವಿತರಿಸಲಾಯಿತು.
ಮಕ್ಕಳ ಕ್ರೀಡಾ ಚಟುವಟಿಕೆಗಾಗಿ ಸಾಮಾಗ್ರಿ, ಕ್ರೀಡಾಪಟುಗಳಿಗೆ ಕ್ರೀಡಾ ವಸ್ತ್ರಗಳನ್ನು ಆಯಾ ಶಾಲೆಗಳಿಗೆ ನೀಡಲಾಗುತ್ತಿದೆ. ನೋಟು ಬುಕ್ ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಗಿದೆ ಎಂದರು.