ಮಕ್ಕಳಿಗೆ ಪೋಷಕರು ಉತ್ತಮ ಶಿಕ್ಷಣ ಕೊಡಿಸಲು ಮುಂದಾಗಿ : ಎಸ್.ಎನ್.ಸುಬ್ಬಾರೆಡ್ಡಿ

KannadaprabhaNewsNetwork |  
Published : Mar 02, 2025, 01:16 AM IST
01ಜಿಯುಡಿ1 | Kannada Prabha

ಸಾರಾಂಶ

ಎಲ್ಲಾ ಪೋಷಕರೂ ತಮಗೆ ಎಷ್ಟೇ ಕಷ್ಟವಿದ್ದರೂ, ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವುದನ್ನು ಬಿಡಬಾರದು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿದಾಗ ಮಾತ್ರ ಪೋಷಕರ ಜೀವನ ಸಾರ್ಥಕವಾದಂತೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ಗುಡಿಬಂಡೆ

ಎಲ್ಲಾ ಪೋಷಕರೂ ತಮಗೆ ಎಷ್ಟೇ ಕಷ್ಟವಿದ್ದರೂ, ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವುದನ್ನು ಬಿಡಬಾರದು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿದಾಗ ಮಾತ್ರ ಪೋಷಕರ ಜೀವನ ಸಾರ್ಥಕವಾದಂತೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಭಿಪ್ರಾಯಪಟ್ಟರು.

ಪಟ್ಟಣದ ಹೊರವಲಯದ ನ್ಯೂ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಾಮಾನ್ಯವಾಗಿ ಪೋಷಕರೂ ತಮ್ಮ ಮಕ್ಕಳಿಗೆ ಆಸ್ತಿ ಮಾಡುವುದು ಸೇರಿ ಹಲವು ಸೌಲಭ್ಯಗಳನ್ನು ಒದಗಿಸಲು ಮುಂದಿರುತ್ತಾರೆ. ಆದರೆ ಮುಖ್ಯವಾಗಿ ತಮ್ಮ ಮಕ್ಕಳಿಗೆ ಬೇಕಾಗಿರುವುದು ಗುಣಮಟ್ಟದ ಶಿಕ್ಷಣವೇ ವಿನಃ ಬೇರೆಯಲ್ಲ. ಆದ್ದರಿಂದ ತಮ್ಮ ಮಕ್ಕಳಿಗೆ ಉತ್ತಮ ಹಾಗೂ ಗುಣಮಟ್ಟದ ಶಿಕ್ಷಣ ಕೊಡಿಸಲು ಮುಂದಾಗಬೇಕು. ಜೊತೆಗೆ ನನ್ನ ಮೊದಲ ಆದ್ಯತೆ ಶಿಕ್ಷಣ ಕ್ಷೇತ್ರಕ್ಕೆ, ಪೋಷಕರು ಶಿಕ್ಷಣಕ್ಕೆ ಸಂಬಂಧಿಸಿದ ಏನೆ ಸಮಸ್ಯೆಗಳಿದ್ದರೂ ನನ್ನನ್ನು ಸಂಪರ್ಕ ಮಾಡಿ. ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತೇನೆ. ನ್ಯೂ ಪಬ್ಲಿಕ್ ಶಾಲೆ ವಿದ್ಯಾಗಿರಿ ಬೆಟ್ಟದ ತಪ್ಪಲಿನಲ್ಲಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಕೊಡುತ್ತಿದೆ. ಮುಂದಿನ ದಿನಗಳಲ್ಲಿ ಶಾಲೆ ಮತ್ತಷ್ಟು ಅಭಿವೃದ್ಧಿಯಾಗಲಿ ಎಂದು ಶುಭ ಹಾರೈಸಿದರು.

ಬಳಿಕ ತಾಪಂ ಇಒ ನಾಗಮಣಿ ಮಾತನಾಡಿ, ಶಾಲಾ ವಾರ್ಷಿಕೋತ್ಸವಗಳು ಮಕ್ಕಳಲ್ಲಿನ ಪ್ರತಿಭೆ ಹೊರತರಲು ಸಹಕರಿಸುವಂತಹ ಕಾರ್ಯಕ್ರಮಗಳಾಗಿವೆ. ಮಕ್ಕಳು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರ ಮೂಲಕ ತಮ್ಮ ಪ್ರತಿಭೆಯ ಪ್ರದರ್ಶನಕ್ಕೆ ಮುಂದಾಗಬಹುದಾಗಿದೆ ಎಂದರು.

ಶಾಲೆಯ ಅಧ್ಯಕ್ಷೆ ಮಂಜುಳಾ ಮಾತನಾಡಿದರು. ಶಾಲೆಯ ವಿದ್ಯಾರ್ಥಿಗಳು ವಿವಿಧ ಗೀತೆಗಳಿಗೆ ನೃತ್ಯ ರೂಪಕಗಳನ್ನು, ಸಾಮಾಜಿಕ ಕಳಕಳಿಯ ನಾಟಕ ಹಾಗೂ ಮೊಬೈಲ್ ಹಾಗೂ ಸೋಷಿಯಲ್ ಮಿಡಿಯಾ ಬಳಕೆಯ ಬಗ್ಗೆ ಆಗುವಂತಹ ದುಷ್ಪರಿಣಾಮಗಳ ಬಗ್ಗೆ ನಾಟಕಗಳನ್ನು ಪ್ರದರ್ಶನ ಮಾಡಿ ಸಭಿಕರ ಗಮನ ಸೆಳೆದರು.

ತಹಸೀಲ್ದಾರ್ ಸಿಗ್ಬತ್ತುಲ್ಲಾ, ಬಿಇಒ ಕೃಷ್ಣಪ್ಪ, ಆರಕ್ಷಕ ಉಪನಿರೀಕ್ಷಕ ಗಣೇಶ್, ಪಪಂ ಅಧ್ಯಕ್ಷ ವಿಕಾಸ್, ಉಪಾಧ್ಯಕ್ಷ ಗಂಗರಾಜು, ಸರ್ಕಾರಿ ನೌಕರರ ಸಂಘದ ಕೆ.ವಿ.ನಾರಾಯಣಸ್ವಾಮಿ, ಮುನಿಕೃಷ್ಣಪ್ಪ, ಕೃಷ್ಣಪ್ಪ, ಹಂಪಸಂದ್ರ ಸರ್ಕಾರಿ ಆಸ್ಪತ್ರೆಯ ಡಾ.ಅಕ್ಷಯ್ ಸೇರಿದಂತೆ ಶಾಲೆಯ ಸಿಬ್ಬಂದಿ ವರ್ಗ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು