ಪಾಲಕರು ಮಕ್ಕಳ ಭವಿಷ್ಯಕ್ಕೆ ಪೂರಕವಾದ ನಿರ್ಧಾರ ಕೈಗೊಳ್ಳಿ: ನಟ ರಮೇಶ ಅರವಿಂದ

KannadaprabhaNewsNetwork |  
Published : Dec 14, 2024, 12:50 AM IST
ಕಾರ್ಯಕ್ರಮದಲ್ಲಿ ನಟ ಡಾ. ರಮೇಶ ಅರವಿಂದ ಮಾತನಾಡಿದರು. | Kannada Prabha

ಸಾರಾಂಶ

ಪಾಲಕರು ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಹೆಚ್ಚಿನ ಆಲೋಚನೆಯಲ್ಲಿ ಇರುವುದು ಸಹಜ. ಆದರೆ, ಶಿಕ್ಷಣ, ಉದ್ಯೋಗ ಸೇರಿ ಎಲ್ಲ ಕ್ಷೇತ್ರದಲ್ಲಿಯೂ ಅವರ ಆಸಕ್ತಿ ಮತ್ತು ಆ ಕ್ಷೇತ್ರದಲ್ಲಿ ಅವರು ನಗು ನಗುತ್ತಾ ಇರುತ್ತಾರೆಯೇ? ಎಂಬುದನ್ನು ಅರಿತು ಆದ್ಯತೆಯೊಂದಿಗೆ ಅವರನ್ನು ಪ್ರೋತ್ಸಾಹಿಸಬೇಕು.

ಹುಬ್ಬಳ್ಳಿ:

ಪಾಲಕರ ಏನೇ ನಿರ್ಧಾರ ಕೈಗೊಂಡರೂ, ಅದು ಮಕ್ಕಳ ಉಜ್ವಲ ಭವಿಷ್ಯಕ್ಕೆ ಪೂರಕವಾಗಿರಬೇಕು. ಅಂದಾಗ ಮಾತ್ರ ಆ ಕ್ಷೇತ್ರದಲ್ಲಿ ಮಕ್ಕಳ ಉನ್ನತ ಮಟ್ಟದಲ್ಲಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ನಟ ಡಾ. ರಮೇಶ ಅರವಿಂದ ಹೇಳಿದರು.

ಇಲ್ಲಿಯ ಕೆಎಲ್‌ಇ ಸಂಸ್ಥೆಯ ಎಂ.ಆರ್. ಸಾಖರೆ ಸ್ಕೂಲ್ ಆವರಣದಲ್ಲಿ ಶುಕ್ರವಾರ ನಡೆದ ಶಾಲೆ ಸುವರ್ಣ ಮಹೋತ್ಸವ ಹಾಗೂ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಪಾಲಕರು ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಹೆಚ್ಚಿನ ಆಲೋಚನೆಯಲ್ಲಿ ಇರುವುದು ಸಹಜ. ಆದರೆ, ಶಿಕ್ಷಣ, ಉದ್ಯೋಗ ಸೇರಿ ಎಲ್ಲ ಕ್ಷೇತ್ರದಲ್ಲಿಯೂ ಅವರ ಆಸಕ್ತಿ ಮತ್ತು ಆ ಕ್ಷೇತ್ರದಲ್ಲಿ ಅವರು ನಗು ನಗುತ್ತಾ ಇರುತ್ತಾರೆಯೇ? ಎಂಬುದನ್ನು ಅರಿತು ಆದ್ಯತೆಯೊಂದಿಗೆ ಅವರನ್ನು ಪ್ರೋತ್ಸಾಹಿಸಬೇಕು ಎಂದರು.

ಮಕ್ಕಳು ಕಲಿಕೆ ಗುಣಮಟ್ಟದಾಗಿರಲು ಶಾಲೆ ಮತ್ತು ಮನೆಯ ವಾತಾವರಣ ಚೆನ್ನಾಗಿ ಇರಬೇಕು. ವಿದ್ಯಾರ್ಥಿಗಳು ಮತ್ತು ಗುರುಗಳ ಸಂಬಂಧ ಮತ್ತು ಮನೆಯಲ್ಲಿ ಕುಟುಂಬ ವಾತಾವರಣ ವಿದ್ಯಾರ್ಥಿಗಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಹಾಗಾಗಿ ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರುವ ಮಾತುಗಳು, ಕೆಲಸ ಆಗದಂತೆ ನೋಡಿಕೊಂಡರೆ, ಮಕ್ಕಳು ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರ ಕಲಿಯುತ್ತಾರೆ. ಅಲ್ಲದೇ, ಅವರು ಜೀವನ ಹಿಡಿತದಲ್ಲಿರುವ ಜತೆಗೆ ಮಾನವೀಯತೆಯ ನೆಲಗಟ್ಟಿನಲ್ಲಿ ಬೆಳೆದು ಪಾಲಕರು ಹೆಮ್ಮೆ ಪಡುವಂತಹ ಮಕ್ಕಳಾಗಿ ರೂಪಗೊಳ್ಳುತ್ತಾರೆ ಎಂದರು.

ಶಿಕ್ಷಣದಿಂದ ಹಿಡಿದು ಎಲ್ಲ ಕ್ಷೇತ್ರಗಳಲ್ಲಿಯೂ ಎಲ್ಲರೂ ಗುಣಮಟ್ಟವನ್ನು ಹುಡುಕುತ್ತಾರೆ. ಅದರಂತೆ ಕೆಎಲ್‌ಇ ಸಂಸ್ಥೆಯ ಎಂ.ಆರ್. ಸಾಖರೆ ಸ್ಕೂಲ್ ಕೂಡಾ ಉತ್ತಮ ಗುಣಮಟ್ಟ ಕಾಯ್ದುಕೊಂಡ ಪರಿಣಾಮದಿಂದ ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿದೆ. ಈ ಶಾಲೆಯಲ್ಲಿ ಅನೇಕ ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ್ದಾರೆ. ಇಂತಹದೊಂದು ಐತಿಹಾಸಿಕ ಕ್ಷಣದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಇದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಕೆಎಲ್‌ಇ ಸಂಸ್ಥೆ ನಿರ್ದೇಶಕ ಶಂಕರಣ್ಣ ಮುನವಳ್ಳಿ ಮಾತನಾಡಿ, ಮಕ್ಕಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದರು. ಇದೇ ಸಂದರ್ಭದಲ್ಲಿ 2023-24ನೇ ಶೈಕ್ಷಣಿಕ ವರ್ಷದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

ಇದಕ್ಕೂ ಪೂರ್ವದಲ್ಲಿ ಹು-ಧಾ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಶೀತಲ್ ತಿವಾರಿ, ಶಾಲಾ ಮಂತ್ರಿ ಶಿವಸ್ವರೂಪ ಕುಲಬುರ್ಗಿ ಸೇರಿದಂತೆ ಹಲವರಿದ್ದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ