ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಲು ಪಾಲಕರು ಮುಂದಾಗಿ: ಶ್ರೀಶೈಲ್

KannadaprabhaNewsNetwork |  
Published : Mar 06, 2024, 02:21 AM IST
ಹುಣಸಗಿ ಪಟ್ಟಣದ ಯುಕೆಪಿ ಕ್ಯಾಂಪನ್ ಕಲ್ಯಾಣ ಮಂಟಪದಲ್ಲಿ ನಡೆದ ಬೇಟಿ ಬಚಾವೋ, ಬೇಟಿ ಪಡಾವೋ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. | Kannada Prabha

ಸಾರಾಂಶ

ಹುಣಸಗಿ ಪಟ್ಟಣದ ಯುಕೆಪಿ ಕ್ಯಾಂಪನ್ ಕಲ್ಯಾಣ ಮಂಟಪದಲ್ಲಿ ನಡೆದ ಬೇಟಿ ಬಚಾವೋ, ಬೇಟಿ ಪಡಾವೋ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕನ್ನಡಪ್ರಭ ವಾರ್ತೆ ಹುಣಸಗಿ

ಮಕ್ಕಳ ಪಾಲಕರು ಗಂಡು-ಹೆಣ್ಣು ಎಂದು ಭೇದ ಮಾಡದೇ ಎಲ್ಲರನ್ನೂ ಒಂದೇ ಭಾವನೆಯಿಂದ ನೋಡಬೇಕು ನೋಡಬೇಕು. ಹೆಣ್ಣು ಮಕ್ಕಳನ್ನು ನಿರ್ಲಕ್ಷಿಸುವುದು ಬೇಡ. ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯಡಿ ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗಬೇಕೆಂದು ಉಪ ತಹಸೀಲ್ದಾರ್ ಶ್ರೀಶೈಲ್ ಹೇಳಿದರು.

ಪಟ್ಟಣದ ಯುಕೆಪಿ ಕ್ಯಾಂಪನ್ ಕಲ್ಯಾಣ ಮಂಟಪದಲ್ಲಿ ನಡೆದ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಯುಕ್ತಾಶ್ರಯದಲ್ಲಿ ನಡೆದ ಬೇಟಿ ಬಚಾವೋ, ಪಡಾವೋ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಣ್ಣು ಮಕ್ಕಳ ಶಿಕ್ಷಣ ಮಹತ್ವ ಹಾಗೂ ಸಮಾಜದಲ್ಲಿ ಹೆಣ್ಣು ಮಕ್ಕಳ ಸ್ಥಾನ ಮಾನ ಕುರಿತು ತಿಳಿಸಿದರು.

ಅಂಗನವಾಡಿ ಹಿರಿಯ ಮೇಲ್ವಿಚಾರಕಿ ಸಿದ್ದಮ್ಮ ಜಾನಕಿ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿಯೊಬ್ಬ ಮಹಿಳೆಯು ಒಳ್ಳೆಯ ವಿದ್ಯಾಭ್ಯಾಸ ಮಾಡಿದಾಗ ಮಾತ್ರ ಅನಿಷ್ಟ ಪದ್ಧತಿಗಳಾದ ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳನ್ನು ತಡೆಯಬಹುದಾಗಿದೆ ಮತ್ತು ಶಾಲಾ ಬಿಡುವಿಕೆಯನ್ನು ಕಡಿಮೆ ಮಾಡಬಹುದು. ಮಕ್ಕಳಿಗೆ ಯಾವುದೇ ರೀತಿಯ ತೊಂದರೆಗಳಾದರೆ 112 ಗೆ ಕರೆ ಮಾಡಬಹುದು. ಇದರಿಂದ ವಿವಿಧ ಇಲಾಖೆ ಎಲ್ಲಾ ಅಧಿಕಾರಿಗಳು ಅಂತಹ ಮಕ್ಕಳನ್ನು ರಕ್ಷಣೆ ಮಾಡಬಹುದಾಗಿದೆ ಎಂದರು.

ಹೆಣ್ಣು ಮಕ್ಕಳು ತಮ್ಮ ಹಕ್ಕುಗಳ ಕುರಿತು ಜಾಗೃತರಾಗಬೇಕು. ಹೆಣ್ಣು ಭ್ರೂಣ ಹತ್ಯೆಯನ್ನು ತಡೆಯುವುದು ಮತ್ತು ಹೆಣ್ಣು ಮಕ್ಕಳ ಲಿಂಗ ತಾರತಮ್ಯ ಹೋಗಲಾಡಿಸಲು ಮತ್ತು ಮಹಿಳಾ ಸಬಲೀಕರಣಕ್ಕಾಗಿ ಬೇಟಿ ಬಚಾವೋ, ಬೇಟಿ ಪಡಾವೋ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ಹೆಣ್ಣು ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮ ಬಗ್ಗೆ ತಿಳಿಸಿದ್ದರಲ್ಲದೇ ಹೆಣ್ಣು ಮಕ್ಕಳ ವಿಚಾರದಲ್ಲಿ ಯಾವುದೆ ಸಮಸ್ಯೆಗಳು ಬಂದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಅಥವಾ ಮಕ್ಕಳ ಸಹಾಯವಾಣಿ 1098ಗೆ ಸಂಪರ್ಕಿಸಲು ತಿಳಿಸಿದರು.

ಗುರುದೇವಿ ಹಿರೇಮಠ ಹಿರಿಯ ಮೇಲ್ವಿಚಾರಕಿ ನಿರೂಪಿಸಿ, ವಂದಿಸಿದರು. ತಾಲೂಕು ಪಂಚಾಯ್ತಿ ಅಧಿಕಾರಿ ಸೋಮಶೇಖರ ಸಿಂಪಿ, ಮೋಹನ, ಡಾ. ಮಂಜುನಾಥ ಚಂದಾ, ಸೀಮಾ ಕೋರಿ, ರಾಜೇಂದ್ರ ಯಾರವ, ವಿ.ಎಂ. ಬೆಳ್ಳೂಳಿ, ಗುರುದೇವಿ, ಸರೋಜಿನಿ, ಶೋಭಾ, ಪಾರ್ವತಿ ಸೇರಿದಂತೆ ಆಶಾ ಕಾರ್ಯಕರ್ತೆಯರು ಇದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ