ಕನ್ನಡಪ್ರಭ ವಾರ್ತೆ ಇಂಡಿ: ಮಕ್ಕಳಲ್ಲಿ ವಿಶೇಷವಾದ ಪ್ರತಿಭೆ ಅಡಗಿದ್ದು, ಅದನ್ನು ಪ್ರೋತ್ಸಾಹಿಸಿ ಬೆಳೆಸುವ ಕೆಲಸವನ್ನು ಪಾಲಕರು ಹಾಗೂ ಶಿಕ್ಷಕರು ಒಂದಾಗಿ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್ ಆಲಗೂರ ಹೇಳಿದರು. ತಾಲೂಕಿನ ತೆನ್ನಿಹಳ್ಳಿ ಗ್ರಾಮದ ಸರ್ಕಾರಿ ಉರ್ದು ಪ್ರೌಢಶಾಲಾ ಆವರಣದಲ್ಲಿ ಹಮ್ಮಿಕೊಂಡ ಹಿರೇರೂಗಿ ಉರ್ದು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಇಂಡಿ: ಮಕ್ಕಳಲ್ಲಿ ವಿಶೇಷವಾದ ಪ್ರತಿಭೆ ಅಡಗಿದ್ದು, ಅದನ್ನು ಪ್ರೋತ್ಸಾಹಿಸಿ ಬೆಳೆಸುವ ಕೆಲಸವನ್ನು ಪಾಲಕರು ಹಾಗೂ ಶಿಕ್ಷಕರು ಒಂದಾಗಿ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್ ಆಲಗೂರ ಹೇಳಿದರು.
ತಾಲೂಕಿನ ತೆನ್ನಿಹಳ್ಳಿ ಗ್ರಾಮದ ಸರ್ಕಾರಿ ಉರ್ದು ಪ್ರೌಢಶಾಲಾ ಆವರಣದಲ್ಲಿ ಹಮ್ಮಿಕೊಂಡ ಹಿರೇರೂಗಿ ಉರ್ದು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳಲ್ಲಿನ ಪ್ರತಿಭೆಯನ್ನು ಬೆಳಕಿಗೆ ತರುವಲ್ಲಿ ಪ್ರತಿಭಾ ಕಾರಂಜಿಯಂಥ ಸ್ಪರ್ಧೆಗಳು ಅವಶ್ಯ. ಮಕ್ಕಳ ಪ್ರತಿಭೆ ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು. ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಆರ್.ನಡುಗಡ್ಡಿ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಕಲೆಗಳನ್ನು ಉತ್ತೇಜಿಸುವ ಮೂಲಕ ಶಾಲಾ ವಿದ್ಯಾರ್ಥಿಗಳಲ್ಲಿನ ಕಲಾತ್ಮಕ ಪ್ರತಿಭೆ- ಸೃಜನಾತ್ಮಕ ಕೌಶಲ ಹೊರತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದರು. ಮೌಲಾನಾ ಜಿಯಾ ಉಲ್ ಹಕ್ ಉಮರಿ ಸಾನಿಧ್ಯ ವಹಿಸಿ ಮಾತನಾಡಿ, ಪ್ರತಿಭಾ ಕಾರಂಜಿಯು ಶಿಕ್ಷಣ ಕ್ಷೇತ್ರದಲ್ಲಿ ಹೆಮ್ಮೆ ಮೂಡಿಸುವ ಕಾರ್ಯಕ್ರಮವಾಗಿದ್ದು, ಇದು ಮಕ್ಕಳ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿಯಾಗಿದೆ ಎಂದು ಅಭಿಪ್ರಾಯ ಪಟ್ಟರು.ಮುಖ್ಯ ಶಿಕ್ಷಕ ಎಸ್.ಎಂ.ಬಡಿಗೇರ ಅಧ್ಯಕ್ಷತೆ ವಹಿಸಿದ್ದರು. ಮೌಲಾನಾ ಮಹ್ಮದ್ ಮಂಜೂರ ಆಲಂ ಖಾನ್, ಎ.ಸಿ ಹುಣಸಗಿ, ಎ ಜಿ ಚೌಧರಿ, ಎಸ್.ವಿ.ಹರಳಯ್ಯ, ಪಿ.ಎಸ್.ಚಾಂದಕವಟೆ, ವೈ.ಟಿ.ಪಾಟೀಲ, ಎಂ.ಎಂ.ವಾಲೀಕಾರ, ತಿಪ್ಪಣ್ಣ ಜಂಬಗಿ, ಎ.ಎಂ.ವಾಲೀಕಾರ, ಬಶೀರ್ ಅಹ್ಮದ್ ಇನಾಮದಾರ, ಚಾಂದಪಾಷಾ ಜಮಾದಾರ, ಮಹಿಬೂಬ ಖಾದ್ರಿ ಜುನೈದಿ, ಪೀರಾ ಜಹಗೀರದಾರ, ಉರ್ದು ಭಾಷಾ ಸಿಆರ್‌ಪಿ ಬಿ.ಡಿ.ಛಪ್ಪರಬಂದ, ಪರ್ವೇಜ್ ಪಟೇಲ, ಐ.ಎ ಸಿಕ್ಕಲಗಾರ, ಬಿ.ಸಿ.ಕುಮಸಗಿ, ಹಸನ್ ಮುಜಾವರ, ಲಾಲಸಾ ಜುನೈದಿ, ಆರ್.ಎಸ್.ಚಡಚಣಕರ, ಜಿ.ಎಂ.ಕುಮಸಗಿ, ಶಾಹಿನ್ ಅಂಜುಮ್, ಎಂ.ಎ.ಮುಲ್ಲಾ ಸೇರಿದಂತೆ ಕ್ಲಸ್ಟರ್ ವ್ಯಾಪ್ತಿಯ ಶಿಕ್ಷಕರು ಮತ್ತು ಮಕ್ಕಳು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.