21ರಂದು ಪರಿಷತ್‌ ಉಪ ಚುನಾವಣೆ, 19 ರಿಂದಲೇ ನಿಷೇಧಾಜ್ಞೆ ಜಾರಿ

KannadaprabhaNewsNetwork |  
Published : Oct 10, 2024, 02:26 AM ISTUpdated : Oct 10, 2024, 02:27 AM IST
32 | Kannada Prabha

ಸಾರಾಂಶ

ಪರಿಷತ್ ಉಪ ಚುನಾವಣೆ ಹಿನ್ನೆಲೆಯಲ್ಲಿ ಅಕ್ಟೋಬರ್ 19ರಂದು ಸಂಜೆ 4 ಗಂಟೆಯಿಂದ ಅಕ್ಟೋಬರ್ 21 ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲೆಯ ಒಟ್ಟು 234 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆಗೆ ಮತದಾನ ಅಕ್ಟೋಬರ್ 21 ರಂದು ನಡೆಯಲಿದ್ದು ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಅಕ್ಟೋಬರ್ 19ರಂದು ಸಂಜೆ 4 ಗಂಟೆಯಿಂದ ಅಕ್ಟೋಬರ್ 21 ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲೆಯ ಒಟ್ಟು 234 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಮತಗಟ್ಟೆ ವ್ಯಾಪ್ತಿಯಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ/ಬೆಂಬಲಿಗರು ಸೇರಿ 5 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.

ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್‍ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಧಿಸಿದೆ. ಮತದಾನ ದಿನದಂದು ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣಾ ಪ್ರಚಾರ ಮಾಡುವುದನ್ನು ನಿಷೇಧಿಸಿದೆ. ಕಲ್ಲುಗಳನ್ನು, ಕ್ಷಾರ ಪದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಕ್ರಮ ವಹಿಸಬೇಕು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಸಭೆಗಳನ್ನು ಕೈಗೊಳ್ಳುವಂತಿಲ್ಲ. ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ಮುಖಂಡರುಗಳು ಕಡ್ಡಾಯವಾಗಿ ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗತಕ್ಕದ್ದು. ಮತದಾನದ ದಿನದಂದು ಮತಗಟ್ಟೆಗಳ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಫೋನ್‌, ಕಾರ್ಡ್‌ಲೆಸ್‌ ಫೋನ್‌ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಮತದಾನ ದಿನದಂದು ಮತಗಟ್ಟೆಗಳ ಸುತ್ತ 200 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್‌/ ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ. ಕಲ್ಯಾಣ ಮಂಟಪಗಳು/ಸಮುದಾಯ ಭವನಗಳು/ ಹೋಟೆಲ್ ಗಳು ಮತ್ತು ಅತಿಥಿ ಗೃಹಗಳಲ್ಲಿ ವಾಸ್ತವ್ಯ ಮಾಡಿರುವವರ ಪಟ್ಟಿಗಳ ಪರಿಶೀಲನೆ ಮಾಡಿ ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ವ್ಯಕ್ತಿಗಳನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!