ಪರಿಷತ್‌ ಚುನಾವಣೆ: ಜನಪ್ರತಿನಿಧಿಗಳ ಸಮಾವೇಶ

KannadaprabhaNewsNetwork |  
Published : Oct 20, 2024, 01:45 AM IST
11 | Kannada Prabha

ಸಾರಾಂಶ

ಸಂಸದ ಕ್ಯಾ. ಬ್ರಿಜೇಶ್ ಚೌಟ ಮಾತನಾಡಿ ಜಾತಿ ರಾಜಕಾರಣದ ವೈಭವೀಕರಣದ ನಡುವೆಯೂ ಬಿಜೆಪಿ ಪಕ್ಷದ ಪ್ರಾಮಾಣಿಕ ಕಾರ್ಯಕರ್ತರನ್ನು ಗುರುತಿಸಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಲಾಗಿದೆಎಂದರು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಹಿಂದುತ್ವ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಿ ಪಕ್ಷ ಮತ್ತು ಕಾರ್ಯಕರ್ತರ ವ್ಯಕ್ತಿತ್ವಕ್ಕೆ ಧಕ್ಕೆಯಾಗದ ರೀತಿಯಲ್ಲಿ ರಾಜಕಾರಣ ನಡೆಸುವುದಾಗಿ ಪರಿಷತ್‌ ಉಪ ಚನಾವಣೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಹೇಳಿದರು.

ಮೂಡುಬಿದಿರೆ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ಕಾಮಧೇನು ಸಭಾಭವನದಲ್ಲಿ ನಡೆದ ವಿಧಾನ ಪರಿಷತ್ ಜನಪ್ರತಿನಿಧಿಗಳ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಸ್ಥಳೀಯಾಡಳಿತದ ಸದಸ್ಯರ ಭಾವನೆಗಳಿಗೆ ಚ್ಯುತಿ ಬಾರದ ರೀತಿಯಲ್ಲಿ ಕೆಲಸ ಮಾಡುವುದಾಗಿ ತಿಳಿಸಿದರು.

ಸಂಸದ ಕ್ಯಾ. ಬ್ರಿಜೇಶ್ ಚೌಟ ಮಾತನಾಡಿ ಜಾತಿ ರಾಜಕಾರಣದ ವೈಭವೀಕರಣದ ನಡುವೆಯೂ ಬಿಜೆಪಿ ಪಕ್ಷದ ಪ್ರಾಮಾಣಿಕ ಕಾರ್ಯಕರ್ತರನ್ನು ಗುರುತಿಸಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಲಾಗಿದೆಎಂದರು.

ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಮಂಡಲ ಪ್ರಭಾರಿ ಜಯಂತ ಕೋಟ್ಯಾನ್, ಜಿಲ್ಲಾಉಪಾಧ್ಯಕ್ಷರಾದ ಶಾಂತಿಪ್ರಸಾದ್ ಹೆಗ್ಡೆ, ಸುನಿಲ್ ಆಳ್ವ, ಮಂಡಲ ಕಾರ್ಯದರ್ಶಿಗಳಾದ ರಂಜಿತ್ ಪೂಜಾರಿ, ಹರಿಪ್ರಸಾದ್ ಶೆಟ್ಟಿ, ಪುರಸಭಾಧ್ಯಕ್ಷೆ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ ಪೂಜಾರಿ, ಚುನಾವಣಾ ಜಿಲ್ಲಾ ಸಹಸಂಚಾಲಕ ರಾಕೇಶ್ ರೈ, ಉಸ್ತುವಾರಿ ಸಹ ಪ್ರಭಾರಿ ಹರೀಶ್ ಮೂಡುಶೆಡ್ಡೆ, ಯತೀಶ್ ಅರ್ವ, ಸತೀಶ್ ಅಂಚನ್, ಲಕ್ಷ್ಮೀ ಉಪಸ್ಥಿತರಿದ್ದರು. ಗಣೇಶ್ ಅಳಿಯೂರು ಕಾರ್ಯಕ್ರಮ ನಿರೂಪಿಸಿದರು. ಹರಿಪ್ರಸಾದ್‌ ಶೆಟ್ಟಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಜೆಟಲ್ಲಿ ಹೇಳಿದಂತೆ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಶೀಘ್ರ: ಮಧು
ಬೆಂಗಳೂರಿನ ಕೊಳಚೆ ನೀರಿಂದ ತರಕಾರಿಯೂ ವಿಷ : ಸಂಸತ್ತಲ್ಲಿ ಗೌಡ