ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ಕೆ.ಎನ್.ಜೆ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‍ನ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ದಾವಣಗೆರೆ, ಚಿತ್ರದುರ್ಗ ಒಳಗೊಂಡ ವಿಧಾನ ಪರಿಷತ್ ಕ್ಷೇತ್ರದಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳಿವೆ. ಈ ಎಲ್ಲಾ ಸಮಸ್ಯೆಗಳ ಬಗ್ಗೆ ಸದನದಲ್ಲಿ ಸರ್ಕಾರದ ಗಮನ ಸೆಳೆಯಲು ಹಾಗೂ ಶಿಕ್ಷಕರ ನಾನಾ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂಧಿಸುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿರುವ ಡಿ.ಟಿ ಶ್ರೀನಿವಾಸ್ ರವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್‍ನ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಮಾತನಾಡಿ, ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ನನಗೆ ಒಂದು ಅವಕಾಶ ನೀಡಿ, ಈ ಚುನಾವಣೆಯಲ್ಲಿ ನನಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.ಕಾಂಗ್ರೆಸ್ ಮುಖಂಡರಾದ ಕೇಶವರೆಡ್ಡಿ, ಶ್ರೀನಿವಾಸರೆಡ್ಡಿ, ಮಂಜುನಾಥರೆಡ್ಡಿ, ನರೇಂದ್ರ, ಆದಿರೆಡ್ಡಿ, ಮಹಮ್ಮದ್ ನೂರುಲ್ಲಾ, ಆರ್.ಹನುಮಂತರೆಡ್ಡಿ, ನಾಗರಾಜ್ ಸೇರಿ ಶಿಕ್ಷಕರು ಮತ್ತಿತರರು ಇದ್ದರು.