ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾ ಪಂಚಾಯ್ತಿ ಕಾವೇರಿ ಸಭಾಂಗಣದಲ್ಲಿ ನಡೆದ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ - 2024ರ ಸಂಬಂಧ ಆಯೋಜಿಸಿದ್ದ ಅಧ್ಯಕ್ಷಾಧಿಕಾರಿ ಹಾಗೂ ಮತಗಟ್ಟೆ ಅಧಿಕಾರಿಗಳಿಗೆ ಚುನಾವಣಾ ತರಬೇತಿಯಲ್ಲಿ ಮಾತನಾಡಿದರು.
ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ತಹಸೀಲ್ದಾರ್ ಹಾಗೂ ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳನ್ನು ಅಧ್ಯಕ್ಷಾಧಿಕಾರಿ ಹಾಗೂ ಮತಗಟ್ಟೆ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಇವರಿಗೆ ಚುನಾವಣೆ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಅನುಭವ ಇರುವುದರಿಂದ ಯಾವುದೇ ಲೋಪಗಳು ನಡೆಯದಂತೆ ಸುಲಲಿತವಾಗಿ ಚುನಾವಣಾ ಕಾರ್ಯ ನಿರ್ವಹಿಸಬಹುದು ಎಂದು ಅಭಿಪ್ರಾಯಪಟ್ಟರು.ಕಳೆದ 17 ವರ್ಷಗಳ ಹಿಂದೆ ಮಂಡ್ಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದು, ಇಂದು ಜಿಲ್ಲೆಗೆ ಚುನಾವಣಾ ವೀಕ್ಷಕನಾಗಿ ಬಂದಿರುವುದು ಸಂತೋಷದ ವಿಷಯವಾಗಿದೆ ಎಂದರು.
ಜಿಲ್ಲೆಯಲ್ಲಿ ಜೂನ್ 3 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತದಾನ ಪ್ರಕ್ರಿಯೆಯೂ ಜರುಗಲಿದೆ. ಎಲ್ಲ ಚುನಾವಣಾ ಸಿಬ್ಬಂದಿ ನಿಗಧಿ ಪಡಿಸಿದ ಸಮಯಕ್ಕೆ ಮತಗಟ್ಟೆಯಲ್ಲಿ ಹಾಜರಿರಬೇಕು. ಚುನಾವಣಾ ಅಧಿಕಾರಿ ಹಾಗೂ ಸಿಬ್ಬಂದಿ ಮತಗಟ್ಟೆಗೆ ಸಂಬಂಧಿಸಿದ ಎಲ್ಲಾ ಸಾಮಗ್ರಿಗಳನ್ನು ಪಡೆದುಕೊಂಡು ಯಾವುದೇ ಲೋಪದೋಷ ಬಾರದಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.
ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್, ಅಪರ ಜಿಲ್ಲಾಧಿಕಾರಿ ಡಾ. ಎಚ್.ಎಲ್. ನಾಗರಾಜು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.ಮಂಡ್ಯ ಜಿಲ್ಲೆಯಲ್ಲಿ ಒಟ್ಟು 5403 ಮತದಾರರಿದ್ದು, 3127 ಪುರುಷ ಹಾಗೂ 2276 ಮಹಿಳೆಯರು ಚುನಾವಣೆಯಲ್ಲಿ ಮತ ಚಲಾಯಿಸುವವರು ಶಿಕ್ಷಕರಾಗಿದ್ದಾರೆ. ಎಲ್ಲಾ ಮತದಾರರಿಗೆ ಮತದಾನದ ಬಗ್ಗೆ ಸರಿಯಾದ ಮಾಹಿತಿ ನೀಡಿ ಗೌರವದಿಂದ ವರ್ತಿಸಬೇಕು. ಯಾವುದೇ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕು.