ಪರಿಷತ್‌ ಚುನಾವಣೆ: ಕಾಂಗ್ರೆಸ್‌ ಕಾರ್ಯಕರ್ತರ ವಿಜಯೋತ್ಸವ

KannadaprabhaNewsNetwork |  
Published : Jun 08, 2024, 12:37 AM IST
ಕಾರಟಗಿಯಲ್ಲಿ ಶುಕ್ರವಾರ ಈಶಾಣ್ಯ ಪದವೀಧರ್‌ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯ ಸಾಧಿಸಿದ ಹಿನ್ನೆಲೆಗೆ ಕಾಂಗ್ರೆಸ್‌ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. | Kannada Prabha

ಸಾರಾಂಶ

ವಿಧಾನಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ್ ಜಯಭೇರಿ ಸಾಧಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

ಕನ್ನಡಪ್ರಭ ವಾರ್ತೆ ಕಾರಟಗಿ

ವಿಧಾನಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ್ ಜಯಭೇರಿ ಸಾಧಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

ಪರಿಷತ್‌ನ ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ಇಲ್ಲಿನ ನವಲಿ ವೃತ್ತದಲ್ಲಿ ಸೇರಿದ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳ, ವಿವಿಧ ಘಟಕಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಶರಣೇಗೌಡ ಮಾ.ಪಾ. ಮಾತನಾಡಿ, ಈ ಬಾರಿಯೂ ಪಕ್ಷದ ಅಭ್ಯರ್ಥಿ ಚಂದ್ರಶೇಖರ ಪಾಟೀಲ್ ಅವರು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಜಯ ಗಳಿಸಿದ್ದಾರೆ. ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದು ಹೇಳುತ್ತಿದ್ದ ಬಿಜೆಪಿಯವರಿಗೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಒಂದೂವರೆ ದಶಕದ ಬಳಿಕ ಕೊಪ್ಪಳ ಲೋಕಸಭೆಯಲ್ಲಿ ಇದೀಗ ಪದವೀಧರ ಕ್ಷೇತ್ರದಲ್ಲೂ ನಮ್ಮ ಅಭ್ಯರ್ಥಿ ಗೆಲವು ಸಾಧಿಸಿರುವುದು ಬಿಜೆಪಿ ನಾಯಕರ ನಿದ್ದೆಗೆಡಿಸಿದೆ ಎಂದರು.ವಿಶೇಷವಾಗಿ ಇಡೀ ಕಲ್ಯಾಣ ಕರ್ನಾಟಕ ಭಾಗದಲ್ಲಿಯೇ ಬಿಜೆಪಿ ಕ್ಲೀನ್ ಸ್ವೀಪ್ ಆಗಿದೆ. ಮುಂಬರುವ ತಾಪಂ ಹಾಗೂ ಜಿಪಂ ಚುನಾವಣೆಗಳಲ್ಲೂ ಕಾಂಗ್ರೆಸ್ ಪಕ್ಷ ಜಯ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಪುರಸಭೆ ಸದಸ್ಯರಾದ ಎಚ್. ಈಶಪ್ಪ, ಹಿರೇಬಸಪ್ಪ ಸಜ್ಜನ್, ಪಿಕಾರ್ಡ್ ಬ್ಯಾಂಕ್ ಉಪಾಧ್ಯಕ್ಷ ಜನಗಂಡೆಪ್ಪ ಪೂಜರಿ, ಚನ್ನಬಸಪ್ಪ ಸುಂಕದ್, ಶರಣಯ್ಯಸ್ವಾಮಿ, ಸಂಜೀವಪ್ಪ ಸಾಲೋಣಿ ಮಹೇಶ ಕಂದಗಲ್, ಅಯ್ಯಪ್ಪ ಉಪ್ಪಾರ, ಶರಣಪ್ಪ ಪರಕಿ, ರುದ್ರೇಶ್ ಸಿಂಗನಾಳ, ದೇವಪ್ಪ ಬಾವಿಕಟ್ಟಿ, ಮಹಮ್ಮದ್ ರಫಿ, ಖಾಜಾ ಹುಸೇನ್ ಮುಲ್ಲಾ, ಅಲಿ ಹುಸೇನ್, ಶರಣಪ್ಪ ಕಾಯಿಗಡ್ಡಿ, ವೀರೇಶ್ ಟಿವಿಎಸ್, ರಜಬಲಿ, ರಮೇಶ್ ಜನೌಷಧ, ಬಸವರಾಜ್ ಅರಳಿ, ಬಸವರಾಜ್ ಗದ್ದಿ ಇನ್ನಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!