ಪರಿಷತ್ ಗೆಲವು ಮುಂದಿನ ವಿಜಯಗಳಿಗೆ ದಿಕ್ಸೂಚಿ : ಕುತ್ಯಾರು

KannadaprabhaNewsNetwork |  
Published : Oct 30, 2026, 03:15 AM IST
ಜಿಲ್ಲಾ ಬಿಜೆಪಿಯಿಂಜ ವಿಪ ಗೆಲುವಿನ ವಿಜಯೋತ್ಸವ ನಡಜೆಯಿತು | Kannada Prabha

ಸಾರಾಂಶ

ಕರ್ನಾಟಕ ವಿಧಾನ ಪರಿಷತ್ತಿಗೆ ನಡೆದ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಎಲ್ಲಾ 4 ಅಭ್ಯರ್ಥಿಗಳನ್ನು ಭರ್ಜರಿ ಬಹುಮತದೊಂದಿಗೆ ಗೆಲ್ಲಿಸುವ ಮೂಲಕ ಸುಶಿಕ್ಷಿತ ಮತದಾರರು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಆಡಳಿತ ವೈಫಲ್ಯಕ್ಕೆ ಉತ್ತರ ನೀಡಿದ್ದಾರೆ ಮತ್ತು ಮುಂದಿನ ಎಲ್ಲಾ ಚುನಾವಣೆಗಳ ಫಲಿತಾಂಶಕ್ಕೆ ದಿಕ್ಸೂಚಿ ತೋರಿಸಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.

ಉಡುಪಿ: ಕರ್ನಾಟಕ ವಿಧಾನ ಪರಿಷತ್ತಿಗೆ ನಡೆದ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಎಲ್ಲಾ 4 ಅಭ್ಯರ್ಥಿಗಳನ್ನು ಭರ್ಜರಿ ಬಹುಮತದೊಂದಿಗೆ ಗೆಲ್ಲಿಸುವ ಮೂಲಕ ಸುಶಿಕ್ಷಿತ ಮತದಾರರು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಆಡಳಿತ ವೈಫಲ್ಯಕ್ಕೆ ಉತ್ತರ ನೀಡಿದ್ದಾರೆ ಮತ್ತು ಮುಂದಿನ ಎಲ್ಲಾ ಚುನಾವಣೆಗಳ ಫಲಿತಾಂಶಕ್ಕೆ ದಿಕ್ಸೂಚಿ ತೋರಿಸಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.ಅವರು ವಿ.ಪ. ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಗೆಲುವಿನ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಮಾತನಾಡಿದರು.

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ ಕಾಂಗ್ರೆಸಿನೊಳಗೆ ಭಿನ್ನಮತ ಆರಂಭವಾಗಿದೆ. ಬ್ಯಾಲೆಟ್ ಪೇಪರ್ ಮೂಲಕ ನಡೆದ ಚುನಾವಣೆಯಲ್ಲೂ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿರುವುದು ಮತದಾರರು ನೀಡಿದ ಸ್ಪಷ್ಟ ಸಂದೇಶವಾಗಿದೆ ಎಂದರು.

ವಿಜಯೋತ್ಸವದಲ್ಲಿ ಮಾಜಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್, ಉಪಾಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ಶಿವಕುಮಾರ್ ಅಂಬಲಪಾಡಿ, ಶ್ರೀನಿಧಿ ಹೆಗ್ಡೆ, ಪ್ರಿಯದರ್ಶಿನಿ ದೇವಾಡಿಗ, ಜಿಲ್ಲಾ ವಕ್ತಾರ ದಿವಾಕರ ಶೆಟ್ಟಿ ಕಲ್ಯಾ, ಮಾಧ್ಯಮ ಸಹ ಸಂಚಾಲಕ ಮಂಜುನಾಥ್ ಮಣಿಪಾಲ, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಪ್ರಮುಖರಾದ ಪ್ರಭಾಕರ ಪೂಜಾರಿ, ಪ್ರವೀಣ್ ಕುಮಾರ್ ಗುರ್ಮೆ, ರಾಜೇಂದ್ರ ಪಂದುಬೆಟ್ಟು, ರತ್ನಾಕರ ಇಂದ್ರಾಳಿ, ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಅಭಿರಾಜ್ ಸುವರ್ಣ, ಉಷಾ ಶೆಟ್ಟಿ, ನೀತಾ ಪ್ರಭು, ರವಿ ಅಮೀನ್, ವೀಣಾ ಎಸ್. ಶೆಟ್ಟಿ, ಸದಾನಂದ ಪ್ರಭು, ಶೈಲೇಂದ್ರ ಶೆಟ್ಟಿ, ಸುಜಾಲ ಸತೀಶ್, ದಯಾಶಿನಿ, ಸಲೀಂ ಅಂಬಾಗಿಲು, ದಾವೂದ್ ಅಬೂಬಕರ್, ಡೇನಿಸ್ ಮಸ್ಕರೇನ್ಹಸ್ ಮುಂತಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತರ ನಷ್ಟ ತಡೆಗೆ ಹಾಲಿನ ದರ 8 ರು. ಏರಿಕೆ - ಯಾವ ಪ್ಯಾಕೆಟ್‌ ಹಾಲಿಗೆ ಎಷ್ಟು?
ರೇ* ಮಾಡಿದ್ದಕ್ಕಾಗಿ ಅಪಹರಣ ಮೂಲಕ ಪ್ರತೀಕಾರ