ಕನ್ನಡಪ್ರಭ ವಾರ್ತೆ ಕಾರವಾರ
ಶ್ರೀ ವಿದ್ಯಾಧಿರಾಜ ತೀರ್ಥ ಶ್ರೀಗಳ 82ನೇ ಜನ್ಮತಿಥಿಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ನ ಅಧಿಕೃತ ತೀರ್ಪುಗಾರ್ತಿ ಡಾ. ಚಿತ್ರಾ ಜೈನ್ ದಾಖಲೆ ಪ್ರಮಾಣಪತ್ರಗಳನ್ನು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಗೆ ಹಸ್ತಾಂತರಿಸಿದರು.
ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಿರ್ಮಾಣಗೊಂಡಿರುವ ಈ ಭವ್ಯ ಪ್ರತಿಮೆಯು ಪೀಠದಿಂದ 78.74 ಅಡಿ (24 ಮೀಟರ್) ಎತ್ತರ ಹೊಂದಿದೆ. ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2025ರ ನ.28ರಂದು ಪ್ರತಿಮೆ ಲೋಕಾರ್ಪಣೆಗೊಳಿಸಿದ್ದರು. ಖ್ಯಾತ ಶಿಲ್ಪಿ ಪದ್ಮಭೂಷಣ ದಿವಂಗತ ರಾಮ್ ಸುತಾರ್ ಹಾಗೂ ಅವರ ಪುತ್ರ ಅನಿಲ್ ಸುತಾರ್ ಪ್ರತಿಮೆಯನ್ನು ರೂಪಿಸಿದ್ದಾರೆ.ಕಾರ್ಯಕ್ರಮದಲ್ಲಿ ವಿಠ್ಠಲ ಮಾಸ್ತರ ಗೌರವ ಪುರಸ್ಕಾರವನ್ನು ರಾಮಚಂದ್ರ ಪದ್ಮನಾಭ ಭಟ್ಟ ಗಾಂವ್ಕರ ಅವರಿಗೆ ನೀಡಿ ಗೌರವಿಸಲಾಯಿತು. ವಿವಿಧ ಸ್ಥಳಗಳಲ್ಲಿ ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳನ್ನೂ ಸನ್ಮಾನಿಸಲಾಯಿತು.