ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ: ಮೀರಾ ನಾಯ್ಕ

KannadaprabhaNewsNetwork |  
Published : May 31, 2026, 02:45 AM IST
ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯ್ತು. | Kannada Prabha

ಸಾರಾಂಶ

ಮೈ ಭಾರತ್ ಹಾಗೂ ಕಡಲ ಸಿರಿ ಯುವ ಸಂಘ ಕಾರವಾರ ಇವುಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಮಂಕಿಯ ಗೋಲ್ ಇಂಟರ್‌ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆಯ ಅಂಗವಾಗಿ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆಯಲ್ಲಿ ಮೈ ಭಾರತ್ ಕೇಂದ್ರದ ಲೆಕ್ಕ ಪರಿಶೋಧಕಿಕನ್ನಡಪ್ರಭ ವಾರ್ತೆ ಹೊನ್ನಾವರ

ಮೈ ಭಾರತ್ ಹಾಗೂ ಕಡಲ ಸಿರಿ ಯುವ ಸಂಘ ಕಾರವಾರ ಇವುಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಮಂಕಿಯ ಗೋಲ್ ಇಂಟರ್‌ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆಯ ಅಂಗವಾಗಿ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಮೈ ಭಾರತ್ ಕೇಂದ್ರದ ಲೆಕ್ಕ ಪರಿಶೋಧಕಿ ಮೀರಾ ನಾಯ್ಕ ಮಾತನಾಡಿ, ಕೇಂದ್ರದ ವಿವಿಧ ಯೋಜನೆಗಳು ಹಾಗೂ ಅದರ ಪ್ರಯೋಜನಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಯುವಕರು ತಮ್ಮ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಸಮಾಜಮುಖಿ ಚಟುವಟಿಕೆಗಳಿಗೆ ಬಳಸಿಕೊಂಡು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಅವರು ಕರೆ ನೀಡಿದರು.

ಕಡಲ ಸಿರಿ ಯುವ ಸಂಘದ ಗೌರವ ಅಧ್ಯಕ್ಷ ಪ್ರಕಾಶ್ ಭೋವಿ ಮಾತನಾಡಿ, ಯುವಕರು ಹಳ್ಳಿಗಳಲ್ಲಿ ಸಂಘ ಸಂಸ್ಥೆಗಳನ್ನು ಕಟ್ಟುವ ಮೂಲಕ ಸರ್ಕಾರದಿಂದ ದೊರೆಯುವ ಸೌಲಭ್ಯಗಳು ಹಾಗೂ ಯೋಜನೆಗಳ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸಬೇಕೆಂದು ಹೇಳಿದರು. ಜೊತೆಗೆ ಯುವಜನತೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದರು.

ಸಂಘದ ಅಧ್ಯಕ್ಷ ಅಭಿಷೇಕ ಕಳಸ ಮಾತನಾಡಿ, ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳನ್ನು ಕೇವಲ ಮನರಂಜನೆಗಾಗಿ ಮಾತ್ರವಲ್ಲದೆ ಶಿಕ್ಷಣ, ಸಂಶೋಧನೆ ಮತ್ತು ಹೊಸ ಆವಿಷ್ಕಾರಗಳಿಗೆ ಬಳಸಿಕೊಳ್ಳುವಂತೆ ಸಲಹೆ ನೀಡಿದರು.

ಶಾಲೆಯ ಪ್ರಾಂಶುಪಾಲೆ ಸವಿತಾ ಪವಾರ್ ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆಯ ಮಹತ್ವ ಹಾಗೂ ಅದರ ಆಚರಣೆಯ ಉದ್ದೇಶ ವಿವರಿಸಿದರು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಪೋಸ್ಟರ್ ಪ್ರೆಸೆಂಟೇಶನ್ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳು ವಿಜ್ಞಾನ, ತಂತ್ರಜ್ಞಾನ, ಪರಿಸರ ಸಂರಕ್ಷಣೆ ಹಾಗೂ ಡಿಜಿಟಲ್ ಇಂಡಿಯಾ ಕುರಿತಾದ ಆಕರ್ಷಕ ಮತ್ತು ಸೃಜನಾತ್ಮಕ ಪೋಸ್ಟರ್‌ಗಳನ್ನು ಪ್ರದರ್ಶಿಸಿದರು. ಸ್ಪರ್ಧೆಯಲ್ಲಿ ಶ್ರೀರಕ್ಷಾ ನಾಯ್ಕ ಪ್ರಥಮ ಸ್ಥಾನ, ಲಬೀಬಾ ಫಕಾರ್ಧಿ ದ್ವಿತೀಯ ಸ್ಥಾನ ಹಾಗೂ ನಿಖಿಲ್ ನಾಯ್ಕ ತೃತೀಯ ಸ್ಥಾನ ಪಡೆದುಕೊಂಡರು. ಸುಮಾರು 25 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.

ಈ ಸಂದರ್ಭ ಕಡಲ ಸಿರಿ ಯುವ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಶೇಟ್, ರಾಘವೇಂದ್ರ ನಾಯ್ಕ ಹಾಗೂ ಶಾಲೆಯ ಶಿಕ್ಷಕ ವೃಂದ ಉಪಸ್ಥಿತರಿದ್ದರು.

ಶಿಕ್ಷಕಿಯರಾದ ನಿವೇದಿತಾ ಭೋಲ್ಕರ್ ಸ್ವಾಗತಿಸಿದರು. ದಿವ್ಯಾ ರೇವಣಕರ್‌ ವಂದಿಸಿದರು. ಮಂಜುಳಾ ಮೇಸ್ತ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗದಗ ಜಿಲ್ಲೆಯಲ್ಲಿ ಜಾರಿಯಾಗದ ಹೊಸ ಅಬಕಾರಿ ನೀತಿ
ಜೀವರಕ್ಷಕ, ಪ್ರವಾಸಿ ಮಿತ್ರ ಸಿಬ್ಬಂದಿಗೆ ಸನ್ಮಾನ