ಕನ್ನಡಪ್ರಭ ವಾರ್ತೆ ತುಮಕೂರು
ನಗರದ ಬಯಲುರಂಗ ಮಂದಿರದಲ್ಲಿ ಶ್ರೀ ಸಿದ್ಧಾರ್ಥ ಇನ್ಸಿಟ್ಯೂಟ್ ಆಫ್ ಬ್ಯೂಸಿನೆಸ್ ಮ್ಯಾನೇಜ್‌ಮೆಂಟ್ ವತಿಯಿಂದ ಹಮ್ಮಿಕೊಂಡಿದ್ದ ಮ್ಯಾನೇಜ್‌ಮೆಂಟ್, ಟೆಕ್‌ನಿಕಲ್ ಮತ್ತು ಸಾಂಸ್ಕೃತಿಕ ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು/ ಪದವಿ ಹಂತದಲ್ಲಿ ಅನೇಕ ತಿರುವುಗಳಾಗುತ್ತವೆ. ದೈಹಿಕ ಪರಿಪಕ್ವತೆಯ ಜೊತೆಗೆ ಮಾನಸಿಕ ಸಮತೋಲನವೂ ಅಗತ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಾಂಸ್ಕ್ರತಿಕ ಕಾರ್ಯಕ್ರಮಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಸಾಹೇ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಬಿ.ಲಿಂಗೇಗೌಡ ಮಾತನಾಡಿ, ವಿದ್ಯಾರ್ಥಿಗಳು ಸದಾ ಕ್ರೀಯಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮನೋಧರ್ಮ ಬೆಳಸಿಕೊಳ್ಳಬೇಕು. ವಿವಿಧ ಸಂಸ್ಕೃತಿಗಳ ಸಾಂಪ್ರದಾಯಿಕ ಸಂಗೀತ, ನೃತ್ಯ ಮತ್ತು ಕಲಾ ಪ್ರದರ್ಶನಗಳು ಮನೋರಂಜನೆಯ ಜೊತೆಗೆ ನಾಡು-ನುಡಿ-ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸುತ್ತವೆ ಎಂದರು.ವಿವಿಧ ಕಾಲೇಜುಗಳಿಂದ ಆಗಮಿಸಿದ್ದ ತಂಡಗಳು ಗುಂಪು ನೃತ್ಯ, ಫ್ಯಾಷನ್ ಶೋ, ಜೋಡಿ ನೃತ್ಯ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ನಡೆಸಿಕೊಟ್ಟರು. ಎಸ್‌ಎಸ್‌ಐಬಿಎಂನ ಪ್ರಾಂಶುಪಾಲ ಡಾ.ಮಮತ.ಜಿ ಸೇರಿಂದಂತೆ ಬೋಧಕ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.