ವಿದ್ಯಾರ್ಥಿಗಳೇ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ: ವೈ.ಸಿ.ನೇತ್ರಾವತಿ

KannadaprabhaNewsNetwork |  
Published : Nov 14, 2025, 01:30 AM IST
೧೩ಕೆಎಂಎನ್‌ಡಿ-೫ ನಾಗಮಂಗಲದ ಹೊರವಲಯ ದೇವಲಾಪುರ ಹ್ಯಾಂಡ್‌ಪೋಸ್ಟ್‌ನಲ್ಲಿರುವ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಸಮಾರಂಭವನ್ನು ಕಾಲೇಜಿನ ಪ್ರಾಂಶುಪಾಲೆ ವೈ.ಎನ್.ನೇತ್ರಾವತಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಕ್ರೀಡೆ, ಕಲೆ, ಸಾಹಿತ್ಯ, ಸಂಸ್ಕೃತಿ ಕುರಿತಾದ ಅನೇಕ ಚಟುವಟಿಕೆಗಳನ್ನು ಆಯೋಜಿಸಿ ದೇಶದ ಸತ್ಪ್ರಜೆಗಳನ್ನಾಗಿ ರೂಪಿಸಲು ನಾವು ಬದ್ಧರಾಗಿದ್ದೇವೆ. ಆದರೆ ಕಾಲೇಜಿನಲ್ಲಿ ಆಯೋಜಿಸುವ ಹಲವು ಕಾರ್ಯಕ್ರಮಗಳಲ್ಲಿ ಕೆಲ ವಿದ್ಯಾರ್ಥಿಗಳ ಪಾಲ್ಗೊಳ್ಳದಿರುವುದು ಬೇಸರದ ಸಂಗತಿ.

ಕನ್ನಡಪ್ರಭವಾರ್ತೆ ನಾಗಮಂಗಲ

ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಎನ್‌ಎಸ್‌ಎಸ್ ಶಿಬಿರ ಸೇರಿದಂತೆ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳೂ ಕೂಡ ಸಹಕಾರಿಯಾಗುತ್ತದೆ. ಆದ್ದರಿಂದ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕೆಂದು ಕಾಲೇಜಿನ ಪ್ರಾಂಶುಪಾಲೆ ವೈ.ಸಿ.ನೇತ್ರಾವತಿ ಹೇಳಿದರು.

ಪಟ್ಟಣದ ಹೊರವಲಯ ದೇವಲಾಪುರ ಹ್ಯಾಂಡ್‌ಪೋಸ್ಟ್‌ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಪ್ರಸಕ್ತ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್ ಯೋಜನೆ ಸೇರಿದಂತೆ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ, ಕನ್ನಡ ರಾಜ್ಯೋತ್ಸವ ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಕ್ರೀಡೆ, ಕಲೆ, ಸಾಹಿತ್ಯ, ಸಂಸ್ಕೃತಿ ಕುರಿತಾದ ಅನೇಕ ಚಟುವಟಿಕೆಗಳನ್ನು ಆಯೋಜಿಸಿ ದೇಶದ ಸತ್ಪ್ರಜೆಗಳನ್ನಾಗಿ ರೂಪಿಸಲು ನಾವು ಬದ್ಧರಾಗಿದ್ದೇವೆ. ಆದರೆ ಕಾಲೇಜಿನಲ್ಲಿ ಆಯೋಜಿಸುವ ಹಲವು ಕಾರ್ಯಕ್ರಮಗಳಲ್ಲಿ ಕೆಲ ವಿದ್ಯಾರ್ಥಿಗಳ ಪಾಲ್ಗೊಳ್ಳದಿರುವುದು ಬೇಸರದ ಸಂಗತಿ. ನಿಮ್ಮ ಉತ್ತಮ ಭವಿಷ್ಯಕ್ಕೆ ತಿರುವು ನೀಡಲು ಇದೊಂದು ಒಳ್ಳೆಯ ಅವಕಾಶ. ಹಾಗಾಗಿ ಇನ್ನು ಮುಂದಾದರೂ ಕಾಲೇಜಿನಲ್ಲಿ ನೆಡೆಯುವ ಯಾವುದೇ ಕಾರ್ಯ ಚಟುವಟಿಕೆಗಳಲ್ಲಿ ಎಲ್ಲ ವಿದ್ಯಾರ್ಥಿಗಳು ತಪ್ಪದೆ ಪಾಲ್ಗೊಳ್ಳಬೇಕು ಎಂದರು.

ಶ್ರದ್ಧೆಯಿಂದ ವಿದ್ಯೆ ಕಲಿತು ಸಾಮಾನ್ಯ ಜ್ಞಾನ ಹೆಚ್ಚಿಸಿಕೊಂಡು ವಿವೇಕ ಬೆಳೆಸಿಕೊಂಡು, ಬುದ್ಧಿವಂತಾರಾಗಿ ದೇಶದ ವಿಚಾರಗಳನ್ನು ತಿಳಿದುಕೊಳ್ಳಬೇಕು. ನಮ್ಮ ಜವಾಬ್ದಾರಿಗಳೇನು ಎಂಬುದನ್ನು ಅರಿತು ತಾವು ಕಲಿತ ಶಿಕ್ಷಣ ಸಂಸ್ಥೆ ಮತ್ತು ಪೋಷಕರಿಗೆ ಕೀರ್ತಿ ತರುವ ನಿಟ್ಟಿನಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಬೇಕು. ನಿಮ್ಮ ಬುದ್ದಿವಂತಿಕೆ ನಮ್ಮ ದೇಶಕ್ಕೆ ಹಾಗೂ ನಿಮ್ಮ ಪೋಷಕರಿಗೆ ಉಪಯೋಗವಾಗಬೇಕು ಎಂದು ಸಲಹೆ ನೀಡಿದರು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ನೀಲಾ ಮೂರ್ತಿ ಮತ್ತು ಕೆ.ಸೀತಾರಾಮು ಮಾತನಾಡಿದರು. ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಪ್ರಾಂಶುಪಾಲರು ಸೇರಿದಂತೆ ಎಲ್ಲಾ ಅಧ್ಯಾಪಕರು ಹಾಗೂ ಅಧ್ಯಾಪಕೇತರ ಸಿಬ್ಬಂದಿಗಳಿಗೆ ನೆನಪಿನ ಕಾಣಿಕೆ ಕೊಟ್ಟು ಗೌರವಿಸಿದರು. ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಡುಗೊರೆ ನೀಡಿ ಸ್ವಾಗತಿಸಲಾಯಿತು. ನಂತರ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಸಿಡಿಸಿ ಸದಸ್ಯ ಸಿಬ್ಗತ್ ಅಲಿಖಾನ್, ಅಧ್ಯಾಪಕರಾದ ಹನುಮಂತಯ್ಯ, ಎ.ಬಿ.ಗಂಗು, ಕೋಮಲ, ಶರ್ಮಿಳಾ ಶ್ರೀನಿವಾಸ್, ಅಕ್ರಂಪಾಷ, ಸತೀಶ್, ಸುನೀತ, ಶೃತಿ, ಶಿಲ್ಪ, ಕುಮಾರಸ್ವಾಮಿ, ರಾಘವೇಂದ್ರ, ಮಮತರಾಜ್, ಅನಿಲ್ ಸೇರಿದಂತೆ ಅಧ್ಯಾಪಕೇತರ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾರತೀಯರ ಕರೆತರಲು ವಿಶೇಷ ವಿಮಾನ ಮಾಡಿ: ಮೋದಿಗೆ ಸಿಎಂ ಸಿದ್ದು ಪತ್ರ
100ಕ್ಕೂ ಕನ್ನಡಿಗರ ಹೊತ್ತು ಬಂತು ಮೊದಲ ವಿಮಾನ