ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿ

KannadaprabhaNewsNetwork |  
Published : Dec 23, 2025, 02:00 AM IST
ಮಕ್ಕಳು ಕೇವಲ ಓದಿಗೆ ಸೀಮಿತವಾಗದೆ ಸಹಪಠ್ಯ ಚಟುವಟಿಕೆಗಳಲ್ಲೂ ಸಹ ತೊಡಗಿಸಿ ಕೊಂಡಾಗ ಮಕ್ಕಳಿರುವ ಪ್ರತಿಭೆ ಅನಾವರಣಗೊಳ್ಳುತ್ತದೆ | Kannada Prabha

ಸಾರಾಂಶ

ಮಕ್ಕಳು ಕೇವಲ ಓದಿಗೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಾಗ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದು ತಹಸೀಲ್ದಾರ್‌ ಚೈತ್ರಾ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹನೂರು

ಮಕ್ಕಳು ಕೇವಲ ಓದಿಗೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಾಗ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದು ತಹಸೀಲ್ದಾರ್‌ ಚೈತ್ರಾ ತಿಳಿಸಿದರು.

ಪಟ್ಟಣದ ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ಕೇವಲ ಓದಿಗೆ ಸೀಮಿತವಾಗದೆ ಕ್ರೀಡೆ ಸಾಂಸ್ಕೃತಿಕ ಕಾರ್ಯಕ್ರಮಗಳು ಹೀಗೆ ಅತ್ತಲವಾರು ವಿಭಾಗಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಪ್ರಾಪಂಚಿಕ ಜ್ಞಾನ ತಿಳಿಯುತ್ತದೆ. ತಮ್ಮ ಕಲೆಯೂ ಸಹ ಪ್ರದರ್ಶನ ಗೊಳ್ಳುತ್ತದೆ. ಹಾಗಾಗಿ ಮಕ್ಕಳು ಪ್ರತಿಭಾಕಾರಂಜಿಯಲ್ಲಿ ಬಹುಮಾನಗಳಿಸುವುದು ಮುಖ್ಯವಲ್ಲ.

ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಕಲೆಯನ್ನು ಉತ್ತೇಜಿಸುವ ಮೂಲಕ ಸೃಜನಾತ್ಮಕ ಕೌಶಲ್ಯವನ್ನು ಹೊರತರುವ ಕೆಲಸವನ್ನು ಈ ಕಾರ್ಯಕ್ರಮದಿಂದ ಮಾಡಲಾಗುತ್ತಿದೆ ಎಂದರು.

ಕ್ಷೇತ್ರ ಸಮನ್ವಯಾಧಿಕಾರಿ ವೆಂಕಟೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣೇಗೌಡ, ದೈಹಿಕ ಶಿಕ್ಷಣ ಪರಿವೀಕ್ಷಕ ಕೆಂಪ ರಾಜು, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶಿವಮಲ್ಲು, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರಯ್ಯ,ಖಚಾoಚಿ ಪ್ರದೀಪ್, ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವೀರಪ್ಪ, ಪದವೀಧರ ಶಿಕ್ಷಕರ ಸಂಘದ ಅಧ್ಯಕ್ಷ ಮಾದೇಶ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಧರ್ಮಲಿಂಗಂ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಯುವ ನಿಧಿ’ಯಡಿ 2326 ಫಲಾನುಭವಿಗಳಿಗಷ್ಟೇ ಉದ್ಯೋಗ!
ವಿಶ್ವಸಂಸ್ಥೆಯಲ್ಲಿ ಶ್ರೀ ಶ್ರೀ ನೇತೃತ್ವದಲ್ಲಿ ಸಾಮೂಹಿಕ ಧ್ಯಾನ