ಗಾಂಧಿ ಭಾರತ ಕಾರ್ಯಕ್ರಮದಲ್ಲಿ ಅಭಿಮಾನದಿಂದ ಪಾಲ್ಗೊಳ್ಳಿ: ಶಾಸಕ ಯ.ಬಿ. ಬಣಕಾರ

KannadaprabhaNewsNetwork |  
Published : Dec 23, 2024, 01:05 AM IST
೨೨ಎಚ್‌ಕೆಆರ್೨ | Kannada Prabha

ಸಾರಾಂಶ

೧೯೨೪ರಂದು ಬೆಳಗಾವಿಯಲ್ಲಿ ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಅಧಿವೇಶನದ ಸವಿನೆನಪಿಗಾಗಿ ಡಿ. ೨೭ರಂದು ಬೆಳಗಾವಿಯಲ್ಲಿ ಗಾಂಧಿ ಭಾರತ-೧೦೦ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕ ಯ.ಬಿ. ಬಣಕಾರ ಹೇಳಿದರು.

ಹಿರೇಕೆರೂರು: ಬೆಳಗಾವಿಯಲ್ಲಿ ಆಯೋಜಿಸಿರುವ ಗಾಂಧಿ ಭಾರತ ಕಾರ್ಯಕ್ರಮವನ್ನು ಬಹು ಅಭಿಮಾನದಿಂದ ಆಚರಣೆ ಮಾಡಲಾಗುತ್ತಿದ್ದು, ಎಲ್ಲರೂ ಅಭಿಮಾನದಿಂದ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಎಂದು ಶಾಸಕ ಯ.ಬಿ. ಬಣಕಾರ ಹೇಳಿದರು.

ಬೆಳಗಾವಿಯಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಿರುವ ಗಾಂಧಿ ಭಾರತ ಸಮಾವೇಶ ಹಿನ್ನೆಲೆಯಲ್ಲಿ ಪಟ್ಟಣದ ಗುರುಭವನದಲ್ಲಿ ಹಿರೇಕೆರೂರ-ರಟ್ಟೀಹಳ್ಳಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಕಾಂಗ್ರೆಸ್ ಕಾರ್ಯರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

೧೯೨೪ರಂದು ಬೆಳಗಾವಿಯಲ್ಲಿ ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಅಧಿವೇಶನದ ಸವಿನೆನಪಿಗಾಗಿ ಡಿ. ೨೭ರಂದು ಬೆಳಗಾವಿಯಲ್ಲಿ ಗಾಂಧಿ ಭಾರತ-೧೦೦ ಕಾರ್ಯಕ್ರಮ ಆಯೋಜಿಸಲಾಗಿದ್ದು, ಎಲ್ಲರೂ ಅಭಿಮಾನದಿಂದ ಪಾಲ್ಗೊಳ್ಳುವ ಮೂಲಕ ಅಂದಿನ ಐತಿಹಾಸಿಕ ಕಾರ್ಯಕ್ರಮ ಮರುಕಳಿಸುವಂತೆ ಯಶಸ್ವಿಯಾಗುವಂತೆ ಮಾಡಬೇಕು ಈ ನಿಟ್ಟಿನಲ್ಲಿ ನಮ್ಮ ಅವಳಿ ತಾಲೂಕಿನಿಂದ ಅಧಿಕ ಜನ ಪಾಲ್ಗೊಳ್ಳುವಂತೆ ಪ್ರೇರೇಪಿಸಬೇಕು ಎಂದು ಮನವಿ ಮಾಡಿದರು.

ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ, ಸರ್ವರನ್ನು ಸಮನಾಗಿ ಕಾಣುವ ಕಾಂಗ್ರೆಸ್ ಪಕ್ಷ ಅಂದಿನಿಂದ ಈ ವರೆಗೂ ಎಲ್ಲ ವರ್ಗದ ಜನರ ಹಿತ ಕಾಪಾಡುವ ಕೆಲಸ ಮಾಡಿದೆ. ಈ ಕಾರ್ಯಕ್ರಮ ಶತಮಾನದ ಸಂಭ್ರಮದ ದಿನವಾಗಿದೆ. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಅಭಿಮಾನದಿಂದ ಪಾಲ್ಗೊಳ್ಳಬೇಕು ಎಂದರು.

ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ರಮೇಶ ಮಡಿವಾಳರ ಹಾಗೂ ಪಿ.ಡಿ. ಬಸನಗೌಡ್ರ, ಮುಖಂಡರಾದ ನಾರಾಯಣಪ್ಪ ಗೌರಕ್ಕನವರ, ಮಂಜುನಾಥ ತಂಬಾಕದ, ಮಹೇಶ ಗುಬ್ಬಿ, ಸುರೇಶ ಮಡಿವಾಳರ, ನಿಂಗಪ್ಪ ಚಳಗೇರಿ, ಎ.ಎ. ಕನವಳ್ಳಿ, ಕಂಠಾಧರ ಅಂಗಡಿ, ಮಲ್ಲನಗೌಡ ಪುಟ್ಟಪ್ಪಗೌಡ್ರ, ಜ್ಯೋತಿಭಾ ಜಾಧವ, ಶಶಿಕಲಾ ಆರೀಕಟ್ಟಿ ಸೇರಿದಂತೆ ಅವಳಿ ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ