ಸ್ವಯಂ ಗಣತಿಯಲ್ಲಿ ಭಾಗವಹಿಸಿ, ಅಭಿವೃದ್ಧಿಗೆ ಕೈಜೋಡಿಸಿ

KannadaprabhaNewsNetwork |  
Published : Apr 04, 2026, 01:15 AM IST
್ಿ | Kannada Prabha

ಸಾರಾಂಶ

ಏಪ್ರಿಲ್ 1ರಿಂದ ಆರಂಭವಾಗಿರುವ ಸ್ವಯಂ ಗಣತಿಯಲ್ಲಿ ಸರ್ವಉಜನಿಕರು ಭಾಗವಹಿಸುವ ಮೂಲಕ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಕರೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ತುಮಕೂರುಏಪ್ರಿಲ್ 1ರಿಂದ ಆರಂಭವಾಗಿರುವ ಸ್ವಯಂ ಗಣತಿಯಲ್ಲಿ ಸರ್ವಉಜನಿಕರು ಭಾಗವಹಿಸುವ ಮೂಲಕ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಕರೆ ನೀಡಿದ್ದಾರೆ.ತುಮಕೂರು ನಗರದ ವಿವಿಧ ಬಡಾವಣೆಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಅವರು ಮೊಬೈಲ್ ಮೂಲಕ ನಾಗರಿಕರು ಸ್ವಯಂ ಗಣತಿ ಮಾಡುವುದು ಹೇಗೆ ಎಂಬುದನ್ನು ಖುದ್ದು ತಿಳಿಸಿಕೊಟ್ಟರು.ಈ ಸಂರ್ಭುದಲ್ಲಿ ಮಾತನಾಡಿದ ಅವರು, ಪ್ರತಿ ಹತ್ತು ವರ್ಷ ಗಳಿಗೊಮ್ಮೆ ಭಾರತ ಸರ್ಕಾ ಜನಗಣತಿ ಮಾಡುತ್ತದೆ. ಅಂತೆಯೇ ಇದೀಗ 2027 ರ ಜನಗಣತಿ ಏಪ್ರಿಲ್ ೧ರಿಂದ ಆರಂಭವಾಗಿದ್ದು ಏಪ್ರಿಲ್ 15 ರವರೆಗೆ ಸ್ವಯಂ ಗಣತಿ ನಂತರ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಗಣತಿ ಕಾರ್ಯರ ಮಾಡಲಿದ್ದಾರೆ ಎಂದರು. ದೇಶದ ಅಭಿವೃದ್ಧಿ ದೃಷ್ಟಿಯಿಂದ ಗಣತಿ ಕರ್ಯದ ಪ್ರಮುಖ ಪಾತ್ರವಿದೆ ಎಂದ ಅವರು, ಜನಸಂಖ್ಯೆ ಮಾಹಿತಿ ಪಡೆದು ಅದಕ್ಕನುಗುಣವಾಗಿ ಜನರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳಿಗನುಸಾರ ನೀತಿಗಳನ್ನು ರೂಪಿಸಲು ಗಣತಿ ಅಂಕಿ ಅಂಶಗಳು ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲ ಜನರು ಜನಗಣತಿಯಲ್ಲಿ ಪಾಲ್ಗೊಳಬೇಕಿದೆ ಎಂದರು.ಪ್ರಸ್ತುತ ಏಪ್ರಿಲ್ 1ರಿಂದ 15 ರವರೆಗೆ ಸ್ವಯಂ ಗಣತಿ ಆರಂಭವಾಗಿದ್ದು ಸರ್ವಗಜನಿಕರು ತಮ್ಮ ಮೊಬೈಲ್ ಮೂಲಕ ವಿವರಗಳನ್ನು ದಾಖಲಿಸಬೇಕಿದೆ. ಈ ದಾಖಲೆಗಳು ಅತ್ಯಂತ ಗೌಪ್ಯವಾಗಿರಿಸಲಾಗುವುದು ಮತ್ತು ಇದು ಸರ್ಕಾರದ ಯೋಜನಗಳ ರೂಪಿಸುವ ಉದ್ದೇಶಕ್ಕೆ ಮಾತ್ರ ಬಳಕೆ ಆಗಲಿದೆ ಎಂದರು.ತುಮಕೂರು ಮಹಾನಗರ ಪಾಲಿಕೆ ಆಯುಕ್ತೆ ಶುಭ ಬಿ. ಮಾತನಾಡಿ, ಏಪ್ರಿಲ್ ೧ರಿಂದ ತಮ್ಮ ಸಿಬ್ಬಂದಿ ಗಣತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಏಪ್ರಿಲ್ ೧೬ರಿಂದ ಗಣತಿದಾರರು ಮನೆ ಮನೆಗೆ ಭೇಟಿ ನೀಡಲಿದ್ದಾರೆ. ಐಡಿ ಕಾರ್ಡಿನೊಂದಿಗೆ ಅವರು ಬರಲಿದ್ದಾರೆ ಅದನ್ನು ಪರಿಶೀಲಿಸಿ ಗಣತಿಗೆ ಮಾಹಿತಿ ನೀಡಬೇಕು ಎಂದರು.ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಮರಹಾನ್ಕುಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ
ಹೋಟೆಲ್ ಕಾರ್ಮಿಕನ ಹತ್ಯೆ ಖಂಡಿಸಿ ಪ್ರತಿಭಟನೆ