ಕ್ರೀಡಾಕೂಟದಲ್ಲಿ ಭಾಗವಹಿಸಿ ದೈಹಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಿ

KannadaprabhaNewsNetwork |  
Published : Nov 26, 2024, 12:50 AM IST
ಚಿತ್ರ 25ಬಿಡಿಆರ್8ಬೀದರ್‌ನ ಪೊಲೀಸ್‌ ಕವಾಯತು ಮೈದಾನದಲ್ಲಿ ಸೋಮವಾರ ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. | Kannada Prabha

ಸಾರಾಂಶ

Participate in sports events and increase physical fitness

-ಪೊಲೀಸ್‌ ವಾರ್ಷಿಕ ಕ್ರೀಡಾಕೂಟಕ್ಕೆ ಕ್ರಿಕೆಟಿಗ ದೊಡ್ಡ ಗಣೇಶ ಚಾಲನೆ

-----ಕನ್ನಡಪ್ರಭ ವಾರ್ತೆ, ಬೀದರ್‌

ಕ್ರೀಡಾಕೂಟದಲ್ಲಿ ಮುಖ್ಯವಾಗಿ ಉತ್ಸಾಹ, ದೈಹಿಕ ಸಾಮರ್ಥ್ಯದ ಮಹತ್ವ, ಕ್ರೀಡೆಗಳ ಪ್ರಾಮುಖ್ಯತೆ ತಿಳಿದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.ಅವರು ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಹಮ್ಮಿಕೊಂಡಿದ್ದ ಬೀದರ್‌ ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ-2024ರ ಅಂಗವಾಗಿ ನ. 25ರಿಂದ 27ರ ವರೆಗೆ 3 ದಿನಗಳ ವರೆಗೆ ನಡೆಯುವ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ದೇಹ, ಆರೋಗ್ಯ ಮತ್ತು ಮಾನಸಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು. ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಸ್ಪರ್ಧಾ ಮನೋಭಾವ ಇರಬೇಕು. ತಂಡಗಳಲ್ಲಿ ಒಗ್ಗಟ್ಟಿನ ಮನೋಭಾವ ಹೊಂದಿರಬೇಕೆಂದರು.ಅಂತರಾಷ್ಟ್ರೀಯ ಕ್ರಿಕೆಟಿಗ ದೊಡ್ಡ ಗಣೇಶ ಅವರು 3 ದಿನಗಳವರೆಗೆ ನಡೆಯುವ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ನನ್ನ ಕ್ರಿಕೆಟ್‌ ಜೀವನದಲ್ಲಿ ಸಾಧಿಸಿದ ಸಾಧನೆಯನ್ನು ಗುರುತಿಸಿ ನನಗೆ ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆಗೆ ಚಾಲನೆ ನೀಡಲು ಆಹ್ವಾನ ಕೊಟ್ಟಿರುವುದು ತುಂಬಾ ಸಂತೋಷವಾಗಿದೆ ಎಂದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ, ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಮಹೇಶ ಮೇಘಣ್ಣನವರ, ಚಂದ್ರಕಾಂತ ಪೂಜಾರಿ, ಬೀದರ್‌, ಭಾಲ್ಕಿ, ಹುಮನಾಬಾದ್‌, ಡಿವೈಎಸ್‌ಪಿಗಳು, ವಿವಿಧ ಠಾಣೆಗಳಿಂದ ಆಗಮಿಸಿದ ಸಿಪಿಐ, ಪಿಎಸ್‌ಐ, ಆರ್‌ಪಿಐ ಪೊಲೀಸ್‌ ಕುಟುಂಬ ವರ್ಗದವರು ಮತ್ತಿತರರು ಉಪಸ್ಥಿತರಿದ್ದರು.

----

ಫೈಲ್‌ 25ಬಿಡಿ8

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಯ್ಯಪ್ಪನ ಮಾಲೆ ಧರಿಸಿದ ಬಾಲಕನ ಮೇಲೆ ಶಿಕ್ಷಕ ಹಲ್ಲೆ!
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ