- ಸರ್ಕಾರಿ ಕಾಲೇಜಿನಲ್ಲಿ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳ ಸಮಾರೋಪ - - - ಕನ್ನಡಪ್ರಭ ವಾರ್ತೆ ಹರಿಹರ
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಲಾಗಿದ್ದ 2023- 2024ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್.ಎಸ್.ಎಸ್., ಸ್ಕೌಟ್ ಮತ್ತು ಗೈಡ್ ಹಾಗೂ ರೆಡ್ ಕ್ರಾಸ್ ಚಟುವಟಿಕೆಗಳ ಸಮಾರೋಪ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಯುವಕರು ಇಂದಿನ ಬೇಡಿಕೆಗಳಿಗೆ ಅನುಗುಣವಾಗಿ ತಮ್ಮನು ತಾವು ರೂಪಿಸಿಕೊಳ್ಳಬೇಕು. ಆ ಮೂಲಕ ದೇಶದ ಪ್ರಗತಿಯಲ್ಲಿ ಕೈ ಜೋಡಿಸಬೇಕು. ಆದ್ದರಿಂದ ಶಿಕ್ಷಣದೊಂದಿಗೆ ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಯಲ್ಲಿ ಭಾಗಿಯಾಗಿ ಎಂದರು.ಸಾಹಿತಿ ಡಾ. ಸಂಗಮನಾಥ ಲೋಕಾಪುರ ಮಾತನಾಡಿ, ವಿದ್ಯಾರ್ಥಿಗಳು ಮುಖ್ಯವಾಗಿ ಶ್ರದ್ಧೆ ಬೆಳೆಸಿಕೊಳ್ಳಬೇಕು. ಅಂಕಗಳ ಜತೆಗೆ ಗುರು-ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಾಲೇಜುಗಳಿಗೆ ಸರ್ಕಾರ ಉತ್ತಮವಾದ ಸೌಲಭ್ಯಗಳನ್ನು ನೀಡುತ್ತಿದೆ. ಅವುಗಳ ಸದ್ಬಳಕೆ ಮಾಡಿಕೊಂಡು ಶ್ರೇಷ್ಠ ನಾಗರೀಕರಾಗಿ ಎಂದು ತಿಳಿಸಿದರು.
೨೦೨೩-೨೪ನೇ ಸಾಲಿನಲ್ಲಿ ನಡೆಸಿದ ಪಠ್ಯೇತರ ಮತ್ತು ಕ್ರೀಡಾ ಚಟುವಟಿಕೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಹರಿಹರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡೆ ಚಟುವಟಿಕೆಗಳ ಸಮಾರೋಪ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಶಾಸಕ ಬಿ.ಪಿ. ಹರೀಶ್ ಉದ್ಘಾಟಿಸಿದರು. ಡಾ. ಸಂಗಮನಾಥ ಲೋಕಾಪುರ, ಡಾ. ಎಚ್. ವಿರುಪಾಕ್ಷಪ್ಪ, ಜಿ.ಎಸ್. ಸುರೇಶ ಹಾಗೂ ಇತರರಿದ್ದರು.