ದೈಹಿಕ, ಮಾನಸಿಕ ಸದೃಢತೆಗಾಗಿ ಕ್ರೀಡೆಗಳಲ್ಲಿ ಪಾಲ್ಗೊಳ್ಳಿ: ಬಿಇಒ ವಿ.ಇ.ಉಮಾ

KannadaprabhaNewsNetwork |  
Published : Aug 20, 2025, 01:30 AM IST
19ಕೆಎಂಎನ್ ಡಿ12 | Kannada Prabha

ಸಾರಾಂಶ

ಉತ್ತಮ ವಿದ್ಯಾರ್ಥಿಗಳು ಉನ್ನತ ಸ್ಥಾನವನ್ನು ಪಡೆದಿರಬಹುದು. ಅದೇ ರೀತಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿರುವ ಉದಾಹರಣೆಗಳು ನಮ್ಮ ಕಣ್ಮುಂದೆಯೇ ಇದೆ. ಆದ್ದರಿಂದ ತಮ್ಮಲ್ಲಿರುವ ಪ್ರತಿಭೆಯನ್ನು ಪ್ರತಿಭಾವಂತ ವಿದ್ಯಾರ್ಥಿಗಳು ಅನಾವರಣಗೊಳಿಸಲು ಮುಂದಾಗಬೇಕು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಪಠ್ಯ ಚಟುವಟಿಕೆಗಳ ಜೊತೆಗೆ ದೈಹಿಕ ಮತ್ತು ಮಾನಸಿಕವಾಗಿ ವಿದ್ಯಾರ್ಥಿಗಳನ್ನು ಸದೃಢಗೊಳಿಸಲು ಕ್ರೀಡಾಕೂಟಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶಿಕ್ಷಕರು ಮಾರ್ಗದರ್ಶನ ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಇ.ಉಮಾ ತಿಳಿಸಿದರು.ತಾಲೂಕಿನ ದೊಡ್ಡೇಗೌಡನಕೊಪ್ಪಲು ಗ್ರಾಮದ ಸರ್ಕಾರಿ ಶಾಲಾ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ 14 ವರ್ಷದೊಳಗಿನ ಕಿರುಗಾವಲು ಹೋಬಳಿ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಪಠ್ಯದ ಜೊತೆಗೆ ಪಠ್ಯೇತ್ತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕೆಂದು ಕರೆ ನೀಡಿದರು.

ಉತ್ತಮ ವಿದ್ಯಾರ್ಥಿಗಳು ಉನ್ನತ ಸ್ಥಾನವನ್ನು ಪಡೆದಿರಬಹುದು. ಅದೇ ರೀತಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿರುವ ಉದಾಹರಣೆಗಳು ನಮ್ಮ ಕಣ್ಮುಂದೆಯೇ ಇದೆ. ಆದ್ದರಿಂದ ತಮ್ಮಲ್ಲಿರುವ ಪ್ರತಿಭೆಯನ್ನು ಪ್ರತಿಭಾವಂತ ವಿದ್ಯಾರ್ಥಿಗಳು ಅನಾವರಣಗೊಳಿಸಲು ಮುಂದಾಗಬೇಕು ಎಂದರು.

ಮೈದಾನವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಲು ಗ್ರಾಮಸ್ಥರು ಮುಂದಾಗಬೇಕು. ಇಲಾಖೆಯಿಂದ ಬೇಕಾದ ಅಗತ್ಯ ನೆರವು ನೀಡಲಾಗುವುದು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವನೆಯೊಂದಿಗೆ ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸಬೇಕೆಂದು ಕರೆ ನೀಡಿದರು.

ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎಚ್.ಮಲ್ಲಿಕಾರ್ಜುನಯ್ಯ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎಚ್.ನಾಗೇಶ್ ಮಾತನಾಡಿದರು.

ಮುಂದಿನ ತಿಂಗಳು ನಿವೃತ್ತರಾಗುವ ಶಿಕ್ಷಕರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಕಲ್ಕುಣಿ ಗ್ರಾಪಂ ಅಧ್ಯಕ್ಷೆ ಹೇಮಾವತಿ, ಎಸ್‌ಡಿಎಂಸಿ ಅಧ್ಯಕ್ಷ ಶಿವಣ್ಣ, ಮುಖಂಡರಾದ ಮಾದೇಗೌಡ, ಉಮೇಶ್, ನಂಜುಂಡೇಗೌಡ, ರಾಜೇಶ್, ಅನ್ನದಾನಿ, ಶ್ರುತಿ ಕೃಷ್ಣೇಗೌಡ, ನಂಜೇಗೌಡ, ಚಂದ್ರಶೇಖರ್, ಶಿವಶಂಕರ್, ದಾಸೇಗೌಡ, ಎಂ.ಎಸ್.ನಾಗೇಶ್, ಸೆಂದಿಲ್, ಲೋಕೇಶ್, ಕುಮಾರ, ರವೀಂದ್ರ, ರವಿ, ಶಿವಕುಮಾರ್, ಸಿದ್ದೇಗೌಡ, ನಾಗರಾಜು ಸೇರಿದಂತೆ ಇತರರು ಇದ್ದರು.

ಶಾಸಕರಿಂದ ಪಡಿತರ ಉಪಕೇಂದ್ರ ಉದ್ಘಾಟನೆ

ಪಾಂಡವಪುರ:

ಪಟ್ಟಣದ ಶಾಂತಿನಗರದಲ್ಲಿ ನೂತನವಾಗಿ ಪ್ರಾರಂಭಿಸಲಾದ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಹಾರ ವಿತರಣಾ ಉಪಕೇಂದ್ರವನ್ನು ಶಾಸಕ ದರ್ಶನ್ ಪುಟ್ಟಣ್ಣಯ್ಯ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಶಾಸಕರು, ಸಂಘದ ಪಡಿತರ ವಿತರಣಾ ಕೇಂದ್ರದಲ್ಲಿ ಪಡಿತರ ಪಡೆಯಲು ಸಾಲುಗಟ್ಟಿ ನಿಲ್ಲಬೇಕಾಗಿತ್ತು. ಹೀಗಾಗಿ ಶಾಂತಿನಗರದಲ್ಲಿ ಆಹಾರ ವಿತರಣಾ ಉಪ ಕೇಂದ್ರವನ್ನು ತೆರೆಯಲಾಗಿದೆ. ಈ ಭಾಗದ ಸುತ್ತಮುತ್ತಲಿನ ಪಡಿತರದಾರರು ಇಲ್ಲಿಯೇ ಪಡಿತರ ಪಡೆದುಕೊಳ್ಳಬಹುದು ಎಂದರು.

ಶಾಂತಿನಗರ, ಹೇಮಾವತಿ ಬಡಾವಣೆ, ಮಹಾತ್ಮಗಾಂಧಿ ನಗರ, ಸುಭಾಷ್ ನಗರ, ಮಹಾಕಾಳೇಶ್ವರಿ ಬಡಾವಣೆ ಸೇರಿದಂತೆ ಈ ಭಾಗದ ಅನೇಕ ಬಡಾವಣೆಗಳಿಗೆ ಈ ಉಪ ಕೇಂದ್ರದಿಂದ ಅನುಕೂಲವಾಗಲಿದೆ ಎಂದರು.

ಈ ವೇಳೆ ಪುರಸಭೆ ಅಧ್ಯಕ್ಷೆ ಜ್ಯೋತಿಲಕ್ಷ್ಮೀ ಬಾಬು, ಸದಸ್ಯರಾದ ಚಂದ್ರು, ಪಾರ್ಥಸಾರಥಿ, ಪಿಎಸಿಎಸ್ ಅಧ್ಯಕ್ಷ ಬೇವಿನಕುಪ್ಪೆ ಯೋಗೇಶ್, ನಿರ್ದೇಶಕರಾದ ಬಲರಾಮ, ಮಿಲ್ ಸಂತೋಷ್, ಮುಖಂಡರಾದ ರೈಟರ್ ಸ್ವಾಮಿಗೌಡ ಇತರರು ಇದ್ದರು.

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ