ಧಾರವಾಡ:
ಶುಕ್ರವಾರ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟದಿಂದ ಆಯೋಜಿಸಿದ್ದ ೨೦೨೬-೨೭ನೇ ಸಾಲಿನ ಜಿಲ್ಲಾ ಕ್ರೀಡಾಕೂಟ ಹಾಗೂ ಸಾಂಸ್ಕೃತಿ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ನೌಕರರ ಆರೋಗ್ಯ ಸಂರಕ್ಷಣೆ ಹಾಗೂ ಸಕಾಲದಲ್ಲಿ ಸಹಾಯಕ್ಕಾಗಿ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಕ್ಕೆ ತಂದಿದ್ದು ಇದರ ಸದುಪಯೋಗ ಪಡೆಯಬೇಕು ಎಂದರು.
ಮೇಯರ್ ಜ್ಯೋತಿ ಪಾಟೀಲ ಮಾತನಾಡಿ, ಸರ್ಕಾರದ ಯೋಜನೆ ಜನರಿಗೆ ತಲುಪಿಸುವಲ್ಲಿ ನೌಕರರ ಪಾತ್ರ ಮುಖ್ಯವಾಗಿದೆ. ಜನರ ಸಮಗ್ರ ಅಭಿವೃದ್ಧಿಗೆ ಸರ್ಕಾರಗಳು ಅನೇಕ ಕಾರ್ಯಕ್ರಮ ಜಾರಿಗೊಳಿಸಿದ್ದು ಅವುಗಳನ್ನು ಅರ್ಹರಿಗೆ ತಲುಪಿಸುವ ಮೂಲಕ ನಿಗದಿತ ಗುರಿ ಸಾಧಿಸಬೇಕು ಎಂದು ಹೇಳಿದರು.ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್. ಸಿದ್ದನಗೌಡರ ಪ್ರಾಸ್ತಾವಿಕ ಮಾತನಾಡಿ, ನೌಕರರ ನಿರಂತರ ಶ್ರಮ ಹಾಗೂ ಕಾರ್ಯ ವೈಖರಿಯಿಂದ ಸರ್ಕಾರಿ ಸೇವೆಗಳು ಸಾರ್ವಜನಿಕರಿಗೆ ತಲುಪುತ್ತಿವೆ. ನೌಕರರು ಶಿಸ್ತು, ಸಂಯಮದಿಂದ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಭಾಗವಹಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಅತಿಥಿಗಳಾಗಿದ್ದ ಪೂರ್ಣಿಮಾ ನಾಯ್ಡು ಹಾಗೂ ವೀರೇಶ ಬ್ಯಾಹಟ್ಟಿ ಮಾತನಾಡಿದರು. ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಸೊಲಗಿ ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ರಮೇಶ ಲಿಂಗದಾಳ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾ ಕಾರ್ಯದರ್ಶಿ ಸುರೇಶ ಜಟ್ಟೆನ್ನವರ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು ಹಾಗೂ ಕ್ರೀಡಾ ಕಾರ್ಯದರ್ಶಿ ಪಿ.ಎಫ್. ಗುಡೆನಕಟ್ಟಿ ವಂದಿಸಿದರು.ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಡಾ. ಡಿ.ಎಚ್. ಹೂಗಾರ, ತಾಪಂ ಇಒ ಡಾ. ಗಂಗಾಧರ ಕಂದಕೂರ, ಅಧಿಕಾರಿಗಳಾದ ಮೋಹನ ಶಿವಣ್ಣನವರ, ರಾಮಕೃಷ್ಣ ಸದಲಗಿ, ಸದಾನಂದ ಅಮರಾಪುರ, ಸಂಘದ ಗೌರವಾಧ್ಯಕ್ಷ ಪ್ರಕಾಶ ಹಳಪೇಟ, ರಾಜ್ಯ ಪರಿಷತ್ ಸದಸ್ಯ ದೇವಿದಾಸ ಶಾಂತಿಕರ, ಖಜಾಂಚಿ ಮಂಜುನಾಥ ಯಡಹಳ್ಳಿ, ರಾಜ್ಯ ಸಂಘಟನಾ ಕಾರ್ಯದರ್ಶಿ ರಮೇಶ ಹೊಲ್ತಿಕೋಟಿ ಸೇರಿದಂತೆ ಇತರರು ಇದ್ದರು.