ಕೊಡಗು ಜಿಲ್ಲೆ ಕ್ರೀಡಾಪಟುಗಳ ತವರು ಎಂದರೆ ತಪ್ಪಾಗುವುದಿಲ್ಲ. ಇಲ್ಲಿನ ಆಟದ ಮೈದಾನದಲ್ಲಿ ಆಡಿದ ಅನೇಕರು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಕ್ರೀಡೆ ದೇಹ ಮತ್ತು ಮನಸ್ಸಿನ ಸಮತೋಲನ ಸಾಧಿಸಲು ಪ್ರಮುಖ ಪಾತ್ರ ವಹಿಸಲಿದೆ. ಎಲ್ಲರೂ ತಮ್ಮ ಅಲ್ಪ ಸಮಯವನ್ನು ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಅಪ್ಪಚ್ಚು ರಂಜನ್ ಹೇಳಿದರು.
ಸೋಮವಾರಪೇಟೆ: ಕೊಡಗು ಜಿಲ್ಲೆ ಕ್ರೀಡಾಪಟುಗಳ ತವರು ಎಂದರೆ ತಪ್ಪಾಗುವುದಿಲ್ಲ. ಇಲ್ಲಿನ ಆಟದ ಮೈದಾನದಲ್ಲಿ ಆಡಿದ ಅನೇಕರು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಕ್ರೀಡೆ ದೇಹ ಮತ್ತು ಮನಸ್ಸಿನ ಸಮತೋಲನ ಸಾಧಿಸಲು ಪ್ರಮುಖ ಪಾತ್ರ ವಹಿಸಲಿದೆ. ಎಲ್ಲರೂ ತಮ್ಮ ಅಲ್ಪ ಸಮಯವನ್ನು ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಅಪ್ಪಚ್ಚು ರಂಜನ್ ಹೇಳಿದರು. ಶನಿವಾರ ಇಲ್ಲಿನ ಜೂನಿಯರ್ ಕಾಲೇಜಿನ ಟರ್ಫ್ ಮೈದಾನದಲ್ಲಿ ಹಾಕಿ ಕೂರ್ಗ್ ನೇತೃತ್ವದಲ್ಲಿ ನಡೆಯುತ್ತಿರುವ ಹಾಕಿ ಲೀಗ್ ಪಂದ್ಯಾವಳಿಯ ಸೆಮಿಫೈನಲ್ ಪಂದ್ಯಾಟಕ್ಕೆ ಚಾಲನೆ ನೀಡಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಡಗು ಜಿಲ್ಲೆಯ ಹಾಕಿ ಟರ್ಫ್ ಕ್ರೀಡಾಂಗಣಕ್ಕೆ 16 ಕೋಟಿ ರು. ನೀಡಲಾಗಿತ್ತು. ಇಲ್ಲಿನ ಕ್ರೀಡಾಂಗಣವನ್ನು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸುವಂತೆ ನಿರ್ಮಿಸಲಾಗಿದೆ. ಈ ಕ್ರೀಡಾಂಗಣದ ಉದ್ಘಾಟನೆಯನ್ನು ರಾಷ್ಟ್ರೀಯ ಹಾಕಿ ತಂಡದ ಎಲ್ಲ ಆಟಗಾರರನ್ನು ಕರೆದು ಉದ್ಘಾಟಿಸಬೇಕೆನ್ನುವ ಉದ್ದೇಶ ಇತ್ತು. ನಂತರ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರಿಂದ ಕಾರ್ಯಗತವಾಗಲಿಲ್ಲ. ಮುಂದಿನ ದಿನಗಳಲ್ಲಿ ಕ್ರೀಡೆಗೆ ಹೆಚ್ಚಿನ ಸವಲತ್ತುಗಳನ್ನು ನೀಡಲಾಗುವುದು ಎಂದರು.ಮುಖ್ಯ ಅತಿಥಿಗಳಾಗಿ ಡಾಲ್ಫೀನ್ಸ್ ಸ್ಫೋರ್ಟ್ಸ್ ಕ್ಲಬ್ ಅಧ್ಯಕ್ಷ ಬಿ.ಆರ್. ಮಹೇಶ್, ಡಾಲ್ಫಿನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಅಶೋಕ್, ಬ್ಲೂಸ್ಟಾರ್ ಹಾಕಿ ಸಂಸ್ಥೆಯ ಟಿ.ಎಲ್. ಶಶಿಧರ್, ಜಯಕರ್ನಾಟಕ ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ, ಮೋಟಾರ್ ಯೂನಿಯನ್ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಇದ್ದರು.
ಬೊಟ್ಟಿಯತ್ತ್ನಾಡ್ ಕುಂದ ಹಾಗೂ ಚಾಮರ್ಸ್ ಮಡಿಕೇರಿ ತಂಡಗಳ ನಡುವೆ ನಡೆದ ಪ್ರಥಮ ಸೆಮಿಫೈನಲ್ ಪಂದ್ಯಾಟದಲ್ಲಿ ಎರಡೂ ತಂಡಗಳು 3-3 ಗೋಲುಗಳಿಸುವ ಮೂಲಕ ಸಮಬಲ ಸಾಧಿಸಿದ ಹಿನ್ನೆಲೆಯಲ್ಲಿ ಶೂಟ್ಔಟ್ನಲ್ಲಿ ಬೊಟ್ಟಿಯತ್ತ್ನಾಡ್ ಕುಂದ ತಂಡ 5- 3 ಗೋಲು ಗಳಿಸುವ ಮೂಲಕ ಫೈನಲ್ ಪ್ರವೇಶಿಸಿತು.
ಎರಡನೇ ಸೆಮಿಫೈನಲ್ ಪಂದ್ಯಾಟ ಕುಂದದ ಕೂರ್ಗ್ ಚಾಲೆಂಜರ್ಸ್ ಮತ್ತು ಶಿವಾಜಿ ನಾಪೋಕ್ಲು ತಂಡಗಳ ನಡುವೆ ನಡೆದು, 3-2 ಗೋಲುಗಳಿಸುವ ಮೂಲಕ ಕೂರ್ಗ್ ಚಾಲೆಂಜರ್ಸ್ ಕುಂದ ತಂಡ ಫೈನಲ್ ಪ್ರವೇಶಿಸಿತು. ಎರಡು ತಂಡಗಳ ನಡುವೆ ಭಾನುವಾರ ಮಧ್ಯಾಹ್ನ 2-30 ಕ್ಕೆ ಪ್ರಶಸ್ತಿಗಾಗಿ ಹಣಾಹಣಿ ನಡೆಯಲಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.