- ಪೂರ್ವಸಿದ್ಧತಾ ಸಭೆಯಲ್ಲಿ ಹಿರಿಯ ಕಾರ್ಮಿಕ ಮುಖಂಡ ಎಚ್.ಕೆ. ಕೊಟ್ರಪ್ಪ ಮನವಿ
ಕನ್ನಡಪ್ರಭ ವಾರ್ತೆ ಹರಿಹರ
ದಾವಣಗೆರೆಯಲ್ಲಿ ಏ.26ರಂದು ನಡೆಯಲಿರುವ ಸಂವಿಧಾನ ಸಂರಕ್ಷಕರ ಸಮಾವೇಶಕ್ಕೆ ಹರಿಹರ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕೆಂದು ಹಿರಿಯ ಕಾರ್ಮಿಕ ಮುಖಂಡ ಎಚ್.ಕೆ. ಕೊಟ್ರಪ್ಪ ಹೇಳಿದರು.ನಗರದ ಪಿಡಬ್ಲ್ಯೂಡಿ ಪ್ರವಾಸಿ ಮಂದಿರದಲ್ಲಿ ನಡೆದ ಪ್ರಗತಿಪರ ಸಂಘಟನೆಗಳ, ಸಂಘ ಸಂಸ್ಥೆ, ಸಂಘಟನೆಗಳ, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಸಂವಿಧಾನ ಇರುವುದರಿಂದಲೇ ದೇಶದ ದೀನ, ದಲಿತರು, ಅಸ್ಪೃಶ್ಯರು, ಮಹಿಳೆಯರು, ರೈತರು, ಶ್ರಮಿಕರು ಸ್ವಾಭಿಮಾನದ ಬದುಕು ಪಡೆಯುವತ್ತ ಹೆಜ್ಜೆ ಇಡುತ್ತಿದ್ದಾರೆ. ಸಂವಿಧಾನದಿಂದ ಉಪಯೋಗ ಪಡೆದುಕೊಳ್ಳುತ್ತಿರುವ ನಾವೆಲ್ಲರೂ ಒಟ್ಟಾಗಿ ಧ್ವನಿ ಎತ್ತಬೇಕಿದೆ. ಸಂವಿಧಾನದ ರಕ್ಷಣೆ ಮಾಡುವಂತಹ ಮನಸ್ಥಿತಿಯವರನ್ನು ಅಧಿಕಾರಕ್ಕೆ ತರುವ ಕೆಲಸ ಎಲ್ಲರೂ ಸೇರಿ ಮಾಡಬೇಕಿದೆ ಎಂದರು.
ಇದೇ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶದ ಯುವಪಡೆ ರಚಿಸಲಾಯಿತು. ಪದಾಧಿಕಾರಿಗಳಾಗಿ ಹಿರಿಯ ಕ್ರೀಡಾಪಟು ಎಚ್.ನಿಜಗುಣ, ನಗರಸಭೆ ಸದಸ್ಯರಾದ ಕೆ.ಬಿ.ರಾಜಶೇಖರ್, ಸಂತೋಷ ದೊಡ್ಡಮನಿ, ನಗರಸಭೆ ಮಾಜಿ ಸದಸ್ಯ ಎಂ.ಬಿ.ಅಣ್ಣಪ್ಪ, ಕನ್ನಡ ಪರ ಸಂಘಟನೆಗಳ ಮುಖಂಡರಾದ ಶ್ರೀನಿವಾಸ್ ಕೊಡ್ಲಿ, ಪಿ.ಜೆ.ಮಹಾಂತೇಶ್, ಮಧು ನಿಡಗಲ್, ರಮೇಶ್ ಕಲಾಲ್, ಎಂ.ಇಲಿಯಾಸ್, ಇಮ್ಮು ರಾಜ್, ಯಮನೂರ್ ಅವರನ್ನು ಆಯ್ಕೆ ಮಾಡಲಾಯಿತು.
- - -
ಹರಿಹರದಲ್ಲಿ ಶನಿವಾರ ಪ್ರಗತಿಪರ ಸಂಘಟನೆಯಿಂದ ಏ.26ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಂವಿಧಾನ ಸಂರಕ್ಷಕರ ಸಮಾವೇಶ ಪೂರ್ವಸಿದ್ಧತಾ ಸಭೆ ನಡೆಯಿತು.