ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ಜಿಲ್ಲಾ ಶಾಖೆ ಸಂಯುಕ್ತ ಆಶ್ರಯದಲ್ಲಿ ಸರಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಪ್ರತಿದಿನ ಕಚೇರಿಯಲ್ಲಿ ಕಾರ್ಯ ನಿರ್ವಹಿಸುವ ನೌಕರರಿಗೆ ಈ ರೀತಿಯ ವೇದಿಕೆಗಳು ಸಿಕ್ಕಾಗ ಇದರ ಸದುಪಯೋಗ ಪಡೆದುಕೊಂಡು ಸಂತೋಷದಿಂದ, ಮನರಂಜನಾತ್ಮಕವಾಗಿ ಭಾಗವಹಿಸಿ. ಕ್ರೀಡೆಯಲ್ಲಿ ಬಹುಮಾನಗಳಿಗಾಗಿ ಅಲ್ಲ, ಬದಲಾಗಿ ಕ್ರೀಡಾ ಸ್ಫೂರ್ತಿಯಿಂದ ಭಾಗವಹಿಸಿದರೆ ಮಾನಸಿಕ ಮತ್ತು ದೈಹಿಕ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಹೇಳಿದರು.ಅಧ್ಯಕ್ಷತೆವಹಿಸಿ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ.ಬಿ. ಬಳ್ಳಾರಿ, ಈ ಬಾರಿಯ ಕ್ರೀಡಾಕೂಟದಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಭಾಗವಹಿಸಿದ್ದಾರೆ, ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ಜವಾಬ್ದಾರಿ ಸರ್ಕಾರಿ ನೌಕರರ ಮೇಲಿದೆ. ಈ ಕಾರ್ಯದಲ್ಲಿ ಸಕಾರಾತ್ಮಕವಾಗಿ ತೊಡಗಿಸಿಕೊಳ್ಳಲು ದೈಹಿಕ ಹಾಗೂ ಮಾನಸಿಕ ಆರೋಗ್ಯ ಮುಖ್ಯವಾಗಿದೆ. ಆದ್ದರಿಂದ ಈ ರೀತಿಯ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದು ಒಳ್ಳೆಯದು ಎಂದು ತಿಳಿಸಿದರು. ಕ್ರೀಡಾಪಟುಗಳಿಗೆ ಆರ್.ಬಿ. ರಾಂಪೂರ ಪ್ರತಿಜ್ಞಾವಿಧಿ ಬೋಧಿಸಿದರು.