ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿದರೆ ಸಾಧನೆಗೆ ಸಹಕಾರಿ: ಎಂ.ಕೆ.ಶ್ರೀನಿವಾಸ್

KannadaprabhaNewsNetwork | Published : Sep 4, 2024 1:51 AM

ಸಾರಾಂಶ

ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ವೇದಿಕೆ ಸೂಕ್ತವಾಗಿದೆ. ಮಕ್ಕಳು ಕೂಡ ಉತ್ಸಾಹದಿಂದ ಪಾಲ್ಗೊಳ್ಳುವ ಮೂಲಕ ಪ್ರತಿಭೆ ಅನಾವರಣಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಕೊಂಡಾಗ ಮಾತ್ರ ಭವಿಷ್ಯದ ಸಾಧನೆಗೆ ಸಹಕಾರಿಯಾಗಲು ಸಾಧ್ಯ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎಂ.ಕೆ.ಶ್ರೀನಿವಾಸ್ ತಿಳಿಸಿದರು.

ತಾಲೂಕಿನ ತಳಗವಾದಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದೊಂದಿಗೆ ನಡೆದ ಟಿ.ಕಾಗೇಪುರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮಾತನಾಡಿದರು.

ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ವೇದಿಕೆ ಸೂಕ್ತವಾಗಿದೆ. ಮಕ್ಕಳು ಕೂಡ ಉತ್ಸಾಹದಿಂದ ಪಾಲ್ಗೊಳ್ಳುವ ಮೂಲಕ ಪ್ರತಿಭೆ ಅನಾವರಣಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿಯೋ ಒಂದಲ್ಲಾ ಒಂದು ಪ್ರತಿಭೆ ಅಡಕವಾಗಿದೆ. ಆ ಪ್ರತಿಭೆ ಅನಾವರಣಕ್ಕೆ ಸರ್ಕಾರವೇ ಕಾರ್ಯಕ್ರಮ ಮಾಡುತ್ತಿದ್ದು, ಎಲ್ಲಾ ವಿದ್ಯಾರ್ಥಿಗಳು ಭಾಗಿಯಾಗಬೇಕೆಂದು ಹೇಳಿದರು.

ಪ್ರತಿಭಾ ಕಾರಂಜಿ ಮಕ್ಕಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ವೇದಿಕೆಯಾಗಿದೆ. ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಿದೆ. ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಪ್ರತಿಭಾ ಕಾರಂಜಿ, ಮಕ್ಕಳ ಮೇಳ, ಕ್ರೀಡಾ ಚಟುವಟಿಕೆಗಳು ನಡೆಯಲಿವೆ. ಆ ಮೂಲಕ ಮಕ್ಕಳಲ್ಲಿರುವ ಕಲೆ, ಸಾಹಿತ್ಯ, ಜಾನಪದ ಸೇರಿ ಇನ್ನಿತರ ಪ್ರತಿಭೆಯನ್ನು ತೋರಿ ಸಾಂಸ್ಕೃತಿಕವಾಗಿ ಮುಂದೆ ಬರಬೇಕು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿ ಮಹದೇವ್ ಮಾತನಾಡಿ, ಸೋಲು, ಗೆಲುವಿನ ಬಗ್ಗೆ ಯೋಚಿಸದೆ ಸ್ಪರ್ಧೆಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದು ಹೇಳಿದರು.

ಕಾರ್ಯಕ್ರಮವನ್ನು ಗ್ರಾಪಂ ಅಧ್ಯಕ್ಷೆ ಎನ್.ಸುಮಿತ್ರಾ ಶಿವಕುಮಾರ್ ಉದ್ಘಾಟಿಸಿದರು. ಉಪಾಧ್ಯಕ್ಷ ಟಿ.ಆರ್.ಕುಮಾರ್, ಸದಸ್ಯ ಟಿ.ಎಚ್.ಆನಂದ್, ಎಸ್ಡಿಎಂಸಿ ಅಧ್ಯಕ್ಷ ಬಸವರಾಜು, ಉಪಾಧ್ಯಕ್ಷ ಆಂಜನಪ್ಪ, ಮುಖಂಡರಾದ ನಂದೀಶ್, ಅಶೋಕ್, ನಾಗರತ್ನ, ಮಹೇಂದ್ರ, ಟಿ.ಎಂ.ಪ್ರಕಾಶ್, ಟಿ.ಆರ್.ಸೋಮೇಗೌಡ, ಮಹೇಶ್, ರಾಮಲಿಂಗಯ್ಯ, ಶಂಕರ್, ನಾಗರಾಜು, ಪಾಪಣ್ಣ, ರವಿ, ಸೋಮಶೇಖರ್, ರಾಮಕೃಷ್ಣ, ಮಾರುತಿ, ಜಯಮ್ಮ, ಲಿಂಗರಾಜು, ಮಹೇಶ್ ಇದ್ದರು.

Share this article