ಮಾಂಬಾಡಿಗೆ ಪಾರ್ತಿಸುಬ್ಬ ಪ್ರಶಸ್ತಿ ಯಕ್ಷಗಾನಕ್ಕೆ ಹಿರಿಮೆಯಾಗಿದೆ: ಡಾ. ತಲ್ಲೂರು

KannadaprabhaNewsNetwork |  
Published : Jan 15, 2025, 12:49 AM IST
14ಮಾಂಬಾಡಿ | Kannada Prabha

ಸಾರಾಂಶ

ತೆಕ್ಕಟ್ಟೆಯ ಹಯಗ್ರೀವ ಸಭಾಂಗಣದಲ್ಲಿ ಯಶಸ್ವಿ ಕಲಾವೃಂದ ಕೊಮೆ ವತಿಯಿಂದ ಹಮ್ಮಿಕೊಂಡ ‘ತೆಂಕುತಿಟ್ಟು ಭಾಗವತಿಕೆ ತರಗತಿ ಉದ್ಘಾಟನೆ’ ಕಾರ್ಯಕ್ರಮದಲ್ಲಿ ಪಾರ್ತಿಸುಬ್ಬ ಪ್ರಶಸ್ತಿ ವಿಜೇತ ಹಿರಿಯ ಭಾಗವತ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರನ್ನು ಅಭಿನಂದಿಸಿ ಡಾ.ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಕುಂದಾಪುರ

ತೆಂಕುತಿಟ್ಟು ಯಕ್ಷಗಾನ ರಂಗದಲ್ಲಿ ಅನೇಕ ಪ್ರಸಿದ್ಧ ಭಾಗವತರ ಗುರುಗಳಾಗಿರುವ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರು ಲವಲವಿಕೆಯಿಂದ ಭಾಗವತಿಕೆಯ ಮೂಲ ಪಾಠವನ್ನು ಮಾಡುತ್ತಾ ಗಾನಾಮೃತದ ಮೂಲಕ ಪ್ರಸಿದ್ಧಿ ಪಡೆದ ಭಾಗವತರು. ೭೫ರ ಇಳಿ ವಯಸ್ಸಿನಲ್ಲಿಯೂ ಅವರು ಪಾಠವನ್ನು ಮುಂದುವರಿಸಿರುವುದು ಶ್ಲಾಘನೀಯ. ಅವರ ಈ ಕಲಾಸಾಧನೆಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ೨೦೨೪ನೇ ಸಾಲಿನ ಪ್ರತಿಷ್ಠಿತ ‘ಪಾರ್ತಿಸುಬ್ಬ ಪ್ರಶಸ್ತಿ’ ನೀಡುತ್ತಿರುವುದು ಯಕ್ಷಗಾನ ಕಲೆಯ ಹಿರಿಮೆಯನ್ನು ಎತ್ತಿ ಹಿಡಿದಿದೆ ಎಂದು ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.ಅವರು ಇಲ್ಲಿಗೆ ಸಮೀಪದ ತೆಕ್ಕಟ್ಟೆಯ ಹಯಗ್ರೀವ ಸಭಾಂಗಣದಲ್ಲಿ ಯಶಸ್ವಿ ಕಲಾವೃಂದ ಕೊಮೆ ವತಿಯಿಂದ ಹಮ್ಮಿಕೊಂಡ ‘ತೆಂಕುತಿಟ್ಟು ಭಾಗವತಿಕೆ ತರಗತಿ ಉದ್ಘಾಟನೆ’ ಕಾರ್ಯಕ್ರಮದಲ್ಲಿ ಪಾರ್ತಿಸುಬ್ಬ ಪ್ರಶಸ್ತಿ ವಿಜೇತ ಹಿರಿಯ ಭಾಗವತ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರನ್ನು ಅಭಿನಂದಿಸಿ ಮಾತನಾಡಿದರು.

ತರಗತಿಯನ್ನು ಉದ್ಘಾಟಿಸಿದ ಪ್ರಸಂಗಕರ್ತ ಪ್ರಸಾದ್ ಕುಮಾರ್ ಮೊಗೆಬೆಟ್ಟು ಮಾತನಾಡಿ, ಕರಾವಳಿಯ ಅಭಿಮಾನದ ಕಲಾಸಂಸ್ಥೆಯಾದ ಯಶಸ್ವಿ ಕಲಾವೃಂದದ ಆಶ್ರಯದಲ್ಲಿ ಬಡಗಿನ ಹಿಮ್ಮೇಳದೊಂದಿಗೆ ತೆಂಕುತಿಟ್ಟು ಹಿಮ್ಮೇಳ ತರಗತಿಯೂ ನಡೆಯುತ್ತಿರುವುದು ಅತ್ಯಂತ ಸಂತಸ ತಂದಿದೆ ಎಂದರು.ಕಾರ್ಯಕ್ರಮದಲ್ಲಿ ಕಲಾವಿದ ಕೋಟ ಸುದರ್ಶನ ಉರಾಳ, ಶ್ವೇತಯಾನದ ಕಾರ್ಯಾಧ್ಯಕ್ಷ ಗೋಪಾಲ ಪೂಜಾರಿ ಕೊಮೆ, ಪವನ್ ಆಚಾರ್, ಕಾರ್ಯದರ್ಶಿ ವೆಂಕಟೇಶ ವೈದ್ಯ, ಮೋಹನಚಂದ್ರ ಪಂಜಿಗಾರು ಉಪಸ್ಥಿತರಿದ್ದರು.

ಅಧ್ಯಕ್ಷ ಮಲ್ಯಾಡಿ ಸೀತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗುರು ಲಂಬೋದರ ಹೆಗಡೆ ಪ್ರಾಸ್ತಾವಿಕ ಮಾತನ್ನಾಡಿದರು. ಪೂಜಾ ಆಚಾರ್, ಪಂಚಮಿ ವೈದ್ಯ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''