ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಪೋಷಕರು, ಸರ್ಕಾರದ ಸಹಭಾಗಿತ್ವ ಅಗತ್ಯ: ಡಾ. ಸುಧಾರಾಣಿ

KannadaprabhaNewsNetwork |  
Published : Nov 21, 2026, 02:45 AM IST
ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಪೋಷಕರು, ಸರ್ಕಾರದ ಸಹಭಾಗಿತ್ವ ಅಗತ್ಯ: ಡಾ. ಸುಧಾರಾಣಿ | Kannada Prabha

ಸಾರಾಂಶ

ಕನ್ನಡ ಭಾಷೆಯ ಉಳಿವಿನ ಬಗ್ಗೆ ಮಾತನಾಡುವುದರ ಜೊತೆಗೆ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೂ ಸಮಾಜ ಕಾಳಜಿ ವಹಿಸಬೇಕು. ಆಂಗ್ಲ ಮಾಧ್ಯಮದ ಮೇಲಿನ ಹೆಚ್ಚುತ್ತಿರುವ ಒಲವಿನಿಂದ ಕನ್ನಡ ಮಾಧ್ಯಮ ಶಾಲೆಗಳು ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿದ್ದು, ಅವುಗಳ ಉಳಿವಿಗೆ ಪೋಷಕರು, ಸರ್ಕಾರ ಹಾಗೂ ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವ ಅಗತ್ಯ ಎಂದು ಆಳ್ವಾಸ್ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಸುಧಾರಾಣಿ ಹೇಳಿದರು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ನಡೆದ ‘ಕನ್ನಡ ನುಡಿ ಹಬ್ಬ ಸಂಭ್ರಮ-2026’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆಳ್ವಾಸ್ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಶ್ರೀನಿಧಿ ಎಳಚಿತ್ತಾಯ ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡ ರಾಜ್ಯೋತ್ಸವದ ಆಚರಣೆಯ ಆಶಯವನ್ನು ವಿದ್ಯಾರ್ಥಿಗಳು ಅರ್ಥಮಾಡಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಪ್ರಶಾಂತ್ ಮಾತನಾಡಿ, ಭಾಷೆಯ ಬೆಳವಣಿಗೆ ಅದರ ನಿರಂತರ ಬಳಕೆಯಲ್ಲಿದೆ ಎಂದರು.

ಶ್ರೀನಿಧಿ ಸ್ವಾಗತಿಸಿ, ಶಂಕರ್ ಮತ್ತು ಸುಶ್ಮಿತಾ ನಿರೂಪಿಸಿ, ಶ್ರೇಯಸ್ ವಂದಿಸಿದರು. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೇಸಿಗೆಗೆ ನೀರು ಆಪೋಶನ: ಜಲಕ್ಷಾಮ ಭೀತಿ !
371ಜೆ ಹೋರಾಟಕ್ಕೆ ಕಾಲೇಜು ವಿದ್ಯಾರ್ಥಿಗಳ ಅಭೂತಪೂರ್ವ ಬೆಂಬಲ